ನವಿಲುಗಳ ಸಾವು Photo | Express
ರಾಜ್ಯ

ತುಮಕೂರಿನಲ್ಲಿ 32 ನವಿಲುಗಳ ಮಾರಣಹೋಮ; ಸಾವಿಗೆ ಕಾರಣವೇನು..?

ಸದ್ಯ ಮೃತ ನವಿಲುಗಳ ಮರಣೋತ್ತರ ಪರೀಕ್ಷೆಗಾಗಿ ಅಂಗಾಂಶಗಳ ಮಾದರಿಯನ್ನು ಪ್ರಯೋಗಾಲಯಕ್ಕೆ ರವಾನೆ ಮಾಡಲಾಗಿದ್ದು, ವರದಿ ಬಂದ ಬಳಿಕ ಸಾವಿನ ಕಾರಣ ಪತ್ತೆಯಾಗಲಿದೆ.

ತುಮಕೂರು: ತುಮಕೂರು ಜಿಲ್ಲೆಯ ವಿವಿಧ ಭಾಗದಲ್ಲಿ ಕೇವಲ ಒಂದು ವಾರದಲ್ಲಿ 32 ನವಿಲುಗಳ ಮಾರಣಹೋಮವಾಗಿದ್ದು, ಇದು ಸ್ಥಳೀಯರು ಹಾಗೂ ಪರಿಸರ ಪ್ರೇಮಿಗಳಲ್ಲಿ ಆತಂಕ ಮೂಡಿಸಿದೆ.

ತುಮಕೂರಿನ ಬೊಮ್ಮನಹಳ್ಳಿ, ಕೋಳಿಹಳ್ಳಿ, ಭೈರಸಂದ್ರ, ಹುಲ್ಲೆನಹಳ್ಳಿ ಗ್ರಾಮದಲ್ಲಿ ಏ.16ರಿಂದ 21ರವರೆಗೆ ಒಟ್ಟು 32 ನವಿಲುಗಳ ಸಾವನ್ನಪ್ಪಿವೆ.

ಸದ್ಯ ಮೃತ ನವಿಲುಗಳ ಮರಣೋತ್ತರ ಪರೀಕ್ಷೆಗಾಗಿ ಅಂಗಾಂಶಗಳ ಮಾದರಿಯನ್ನು ಪ್ರಯೋಗಾಲಯಕ್ಕೆ ರವಾನೆ ಮಾಡಲಾಗಿದ್ದು, ವರದಿ ಬಂದ ಬಳಿಕ ಸಾವಿನ ಕಾರಣ ಪತ್ತೆಯಾಗಲಿದೆ.

ಅರಣ್ಯ ಇಲಾಖೆ ಪ್ರಕರಣ ದಾಖಲಿಸಿಕೊಂಡಿದ್ದು, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನೇತೃತ್ವದಲ್ಲಿ ತನಿಖೆಗೆ ತಂಡ ರಚಿಸಲಾಗಿದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಜಿ.ಆರ್.ಶಶಿಧರ್ ತಿಳಿಸಿದ್ದಾರೆ.

ನಿರ್ದಿಷ್ಟವಾಗಿ ಯಾವುದೋ ಒಂದು ಗ್ರಾಮ ಅಥವಾ ಒಂದೇ ಕಡೆ ನವಿಲುಗಳು ಮೃತಪಟ್ಟಿಲ್ಲ. ಬೇರೆ ಬೇರೆ ಸ್ಥಳಗಳಲ್ಲಿ ಸಾವನ್ನಪ್ಪುತ್ತಿವೆ.

ಮರಣೋತ್ತರ ಪರೀಕ್ಷೆ ಸಮಯದಲ್ಲಿ ಮೃತ ದೇಹದಲ್ಲಿ ಅನುಮಾನಾಸ್ಪದ ವಸ್ತುಗಳು ಕಂಡು ಬಂದಿಲ್ಲ. ಬಿಸಿಲಿನ ತಾಪ ತಾಳಲಾರದೆ ಸತ್ತಿರಬಹುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Sheikh Hasina: ವಾಪಸ್ ಬಾಂಗ್ಲಾದೇಶಕ್ಕೆ ಹೋಗಲು ನಿರ್ಧರಿಸಿದ್ದೇನೆ; ನನ್ನನ್ನು ಕೊಲ್ಲಲಿ, ಜೈಲಿಗೆ ಹಾಕಲಿ - ಶೇಖ್ ಹಸೀನಾ

ಸಚಿವ ಸ್ಥಾನ ಕೋಟಿ ಕೋಟಿಗೆ ಹರಾಜು: BJPಯಿಂದ ಆಡಿಯೋ ಬಿಡುಗಡೆ; ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ

E20 ಪೆಟ್ರೋಲ್ ನಲ್ಲಿ ಹೆಚ್ಚು ಕ್ಲೋರೈಡ್ ಮಟ್ಟ ತೋರಿಸಿದ್ದ SIAM; ಸಚಿವಾಲಯಕ್ಕೆ ಕಳುಹಿಸಿದ್ದ ಪತ್ರ ವಾಪಸ್

"ಜನ ನಾಯಗನ್ ಬಜೆಟ್': ಮಹಿಳೆಯರು, ಯುವಜನತೆಗೆ ದಳಪತಿ ವಿಜಯ್ ಬಂಪರ್ ಗಿಫ್ಟ್; ಶಾಲಾ ಶಿಕ್ಷಣಕ್ಕೆ ಅತಿ ಹೆಚ್ಚು ಅನುದಾನ

ಇಥಿಯೋಪಿಯನ್ ಏರ್‌ಲೈನ್ಸ್‌ನ ಮಾಜಿ ಮುಖ್ಯಸ್ಥ ಟೆವೊಲ್ಡೆ Air India ನೂತನ CEO