ಫ್ಲೈ 91 ವಿಮಾನಯಾನ ಸಂಸ್ಥೆ PTI
ರಾಜ್ಯ

ಒಂದು ಗಂಟೆ ಆಗಸದಲ್ಲಿ ಗಿರಕಿ: ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ; 3 ದಿನದಲ್ಲಿ ಎರಡನೇ ಘಟನೆ..!

Fly91 ಸಂಸ್ಥೆಯ ಬೆಂಗಳೂರು–ಹುಬ್ಬಳ್ಳಿ ವಿಮಾನವು ಹವಾಮಾನ ವೈಪರೀತ್ಯದಿಂದಾಗಿ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಆಕಾಶದಲ್ಲೇ ಗಿರಕಿ ಹೊಡೆದಿದ್ದು, ಬಳಿಕ ಸುರಕ್ಷಿತವಾಗಿ ಲ್ಯಾಂಡ್ ಆಗಿದೆ.

ಹುಬ್ಬಳ್ಳಿ: ಹವಾಮಾನ ವೈಪರಿತ್ಯದಿಂದ ಹುಬ್ಬಳ್ಳಿಯಲ್ಲಿ ಮತ್ತೊಂದು ವಿಮಾನ ಪ್ರಯಾಣಿಕರಲ್ಲಿ ಆತಂಕ ಸೃಷ್ಟಿಸಿರುವ ಘಟನೆ ಮಂಗಳವಾರ ಸಂಜೆ ನಡೆದಿದೆ.

Fly91 ಸಂಸ್ಥೆಯ ಬೆಂಗಳೂರು–ಹುಬ್ಬಳ್ಳಿ ವಿಮಾನವು ಹವಾಮಾನ ವೈಪರೀತ್ಯದಿಂದಾಗಿ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಆಕಾಶದಲ್ಲೇ ಗಿರಕಿ ಹೊಡೆದಿದ್ದು, ಬಳಿಕ ಸುರಕ್ಷಿತವಾಗಿ ಲ್ಯಾಂಡ್ ಆಗಿದೆ.

ವಿಮಾನವು ನಿಗದಿತ ವೇಳೆಗೆ ರಾತ್ರಿ 8.15ಕ್ಕೆ ಹುಬ್ಬಳ್ಳಿ ತಲುಪಬೇಕಾಗಿದ್ದರೂ, ಲ್ಯಾಂಡಿಂಗ್ ವೇಳೆ ತಾಂತ್ರಿಕ ತೊಂದರೆ ಅಥವಾ ಹವಾಮಾನ ವೈಪರೀತ್ಯದ ಕಾರಣದಿಂದ ವಿಮಾನಕ್ಕೆ ಕೆಳಗಿಳಿಯಲು ಸಾಧ್ಯವಾಗಿಲ್ಲ.

ಪರಿಣಾಮ ಸುರಕ್ಷತೆ ದೃಷ್ಟಿಯಿಂದ ಪೈಲಟ್‌ ವಿಮಾನವನ್ನು ಹುಬ್ಬಳ್ಳಿ ಮತ್ತು ದಾಂಡೇಲಿ ಸುತ್ತಮುತ್ತಲಿನ ಪ್ರದೇಶಗಳ ಆಗಸದಲ್ಲಿ ಒಂದು ಗಂಟೆ ಕಾಲ ಹಾರಾಟ ನಡೆಸಿದ್ದಾರೆ. ನಂತರ ಪರಿಸ್ಥಿತಿ ಸ್ವಲ್ಪ ಸುಧಾರಿಸಿದ ಬಳಿಕ ರಾತ್ರಿ 9.40ಕ್ಕೆ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಲಾಯಿತು ಎಂದು ವಿಮಾನ ನಿಲ್ದಾಣ ಅಧಿಕಾರಿಗಳು ತಿಳಿಸಿದ್ದಾರೆ.

ಈ ಘಟನೆ ಪ್ರಯಾಣಿಕರಲ್ಲಿ ಕೆಲಕಾಲ ಆತಂಕ ಸೃಷ್ಟಿಸಿದರೂ, ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಗಮನಾರ್ಹ ಸಂಗತಿ ಎಂದರೆ ಮೂರು ದಿನಗಳಲ್ಲಿ ಇದು ಎರಡನೇ ಘಟನೆಯಾಗಿದೆ. ಇತ್ತೀಚೆಗೆ ಇದೇ Fly91 ಸಂಸ್ಥೆಯ ಹೈದರಾಬಾದ್–ಹುಬ್ಬಳ್ಳಿ ವಿಮಾನವೂ ಹವಾಮಾನ ವೈಪರೀತ್ಯದಿಂದಾಗಿ ನಾಲ್ಕು ಗಂಟೆಗಳ ಕಾಲ ಆಕಾಶದಲ್ಲೇ ಸುತ್ತಾಡಿ ಬಳಿಕ ಬೆಂಗಳೂರಿನಲ್ಲಿ ಲ್ಯಾಂಡ್ ಆಗಿತ್ತು.

ಈ ಘಟನೆಗಳಿಂದ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಹವಾಮಾನ ಪರಿಸ್ಥಿತಿಗಳ ಪರಿಣಾಮ ಮತ್ತು ವಿಮಾನ ಕಾರ್ಯಾಚರಣೆಯ ಕುರಿತು ಪ್ರಯಾಣಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹವಾಮಾನ ವೈಪರೀತ್ಯದ ಕಾರಣವನ್ನು ಅಧಿಕಾರಿಗಳು ನೀಡುತ್ತಿದ್ದರೂ, “ಕೇವಲ ಫ್ಲೈ 91 ವಿಮಾನಕ್ಕೆ ಮಾತ್ರ ಯಾಕೆ ಪದೇ ಪದೇ ತೊಂದರೆಯಾಗುತ್ತಿದೆ?” ಎಂದು ಪ್ರಯಾಣಿಕರು ಪ್ರಶ್ನೆ ಮಾಡುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!