ಡಾ ಜಿ ಪರಮೇಶ್ವರ್  
ರಾಜ್ಯ

ಕಬ್ಬಡ್ಡಿ ಪಂದ್ಯದ ವೇಳೆ ಬೆಟ್ಟಿಂಗ್: ನನ್ನ ಹೇಳಿಕೆ ತಪ್ಪಾಗಿ ಅರ್ಥೈಸಲಾಗಿದೆ, ಈಗ ತಮಾಷೆನೂ ಮಾಡುವಂತಿಲ್ಲ‌ ಎಂಬಂತಾಗಿದೆ; ಗೃಹ ಸಚಿವ ಪರಮೇಶ್ವರ್

ನಾನು ಹೇಳಿದ್ದು ಗ್ರಾಮೀಣ ಪ್ರದೇಶಗಳಲ್ಲಿ ಕಬಡ್ಡಿ ಪಂದ್ಯಗಳ ವೇಳೆ ಸಾಮಾನ್ಯವಾಗಿ ಬಳಸುವ ರೀತಿಯ ಮಾತು. ಕಾನೂನು ದೃಷ್ಟಿಯಿಂದ ಅದು ತಪ್ಪಾಗಿರಬಹುದು, ಆದರೆ, ನಾನು ಯಾವ ರೀತಿ ಹೇಳಿದ್ದೇನೆ ಎನ್ನುವುದು ಮುಖ್ಯವಾಗುತ್ತದೆ.

ಬೆಂಗಳೂರು: ಕಬಡ್ಡಿ ಪಂದ್ಯದಲ್ಲಿ ಬೆಟ್ಟಿಂಗ್ ಆರೋಪದ ಹಿನ್ನೆಲೆಯಲ್ಲಿ ಎಫ್ಐಆರ್ ದಾಖಲಿಸಲು ನ್ಯಾಯಾಲಯ ಆದೇಶಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಜಿ.ಪರಮೇಶ್ವರ್ ಅವರು ತಮ್ಮ ಹೇಳಿಕೆ ಸಂಬಂಧ ಬುಧವಾರ ಸ್ಪಷ್ಟನೆ ನೀಡಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಮ್ಮ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಹೇಳಿದ್ದಾರೆ.

“ನಾನು ಹೇಳಿದ್ದು ಗ್ರಾಮೀಣ ಪ್ರದೇಶಗಳಲ್ಲಿ ಕಬಡ್ಡಿ ಪಂದ್ಯಗಳ ವೇಳೆ ಸಾಮಾನ್ಯವಾಗಿ ಬಳಸುವ ರೀತಿಯ ಮಾತು. ಕಾನೂನು ದೃಷ್ಟಿಯಿಂದ ಅದು ತಪ್ಪಾಗಿರಬಹುದು, ಆದರೆ, ನಾನು ಯಾವ ರೀತಿ ಹೇಳಿದ್ದೇನೆ ಎನ್ನುವುದು ಮುಖ್ಯವಾಗುತ್ತದೆ ಎಂದು ತಿಳಿಸಿದ್ದಾರೆ.

ನಾನೇನಾದರೂ ಬೆಟ್ಟಿಂಗ್ ಪ್ರಮೋಟ್ ಮಾಡಿ ಎಂದು ಹೇಳಿದ್ದರೆ ಸರಿಯಲ್ಲ.‌ ನಾನು ಒಬ್ಬ ಜವಾಬ್ದಾರಿ ಸ್ಥಾನದವನಾಗಿ, ಪ್ರಮೋಟ್ ಮಾಡ್ತೇನೆ ಎಂದರೆ ಶುದ್ದ ಸುಳ್ಳು.‌ ಅರ್ಥೈಸಿಕೊಳ್ಳುವುದರ ಮೇಲೆ ಹೋಗುತ್ತದೆ ಎಂದು ಹೇಳಿದ್ದಾರೆ.

ಈಗ ತಮಾಷೆನೂ ಮಾಡುವಂತಿಲ್ಲ‌ ಎಂಬಂತಾಗಿದೆ. ನಾನು ಕಾನೂನನ್ನು ಗೌರವಿಸುವವನು. ಕಾನೂನು ರಕ್ಷಣೆ ಮಾಡುವ ಖಾತೆ ನಿಭಾಯಿಸುತ್ತಿದ್ದೇನೆ. ನಾನು ಕಾನೂನಿಗೆ ಗೌರವ ಕೊಡಬೇಕಲ್ಲವೇ? ಕಾನೂನು ಏನು ಕ್ರಮ ತೆಗೆದುಕೊಳ್ಳುತ್ತದೆ, ಅದಕ್ಕೆ ಬಿಟ್ಟಿದ್ದೇನೆ ಎಂದರು.

ಕೋರ್ಟ್‌ನಿಂದ ನೋಟಿಸ್ ಕೊಟ್ಟಿರಲಿಲ್ಲ. ನೋಟಿಸ್ ಬಂದಿದ್ದರೆ ಅರ್ಥೈಸಲಾಗುತ್ತಿತ್ತು. ಗಂಭಿರವಾಗಿ ಪರಿಗಣಿಸಬೇಡಿ ಎಂದು ಮನವರಿಕೆ ಮಾಡಲಾಗುತ್ತಿತ್ತು. ನೋಟಿಸ್ ಬಂದಿಲ್ಲ. ಏಕಾಏಕಿಯಾಗಿ ಆದೇಶ ಮಾಡಿದ್ದಾರೆ. ಕಾನೂನಿಗೆ ಗೌರವ ಕೊಡಬೇಕು, ಗೌರವಿಸುತ್ತೇನೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಾತುಕತೆ ವಿಫಲವಾದರೆ ಇರಾನ್ "ಸರ್ವನಾಶ": ಟ್ರಂಪ್ ಬೆದರಿಕೆ; ಲೆಬನಾನ್‌ನಲ್ಲಿ ಹೆಚ್ಚಿನ ಸರ್ಜಿಕಲ್ ಸ್ಟ್ರೈಕ್ ಗೆ ಕರೆ!

ಭಾರತದ ಮೇಜರ್ ಅಭಿಲಾಷಾ ಬರಾಕ್ ಗೆ ವಿಶ್ವಸಂಸ್ಥೆಯಿಂದ ಮಿಲಿಟರಿ ಜೆಂಡರ್ ಅಡ್ವೊಕೇಟ್ ಪ್ರಶಸ್ತಿ; ಮೋದಿ ಅಭಿನಂದನೆ!

ಹೀನಾ ಬಂಗಾರದ ಬೇಟೆ: 40 ಚಿನ್ನದ ಪದಕಗಳೊಂದಿಗೆ ವಿಶ್ವ ಯೋಗಾಸನ ಚಾಂಪಿಯನ್‌ಶಿಪ್‌ನಲ್ಲಿ ಅಗ್ರಸ್ಥಾನದಲ್ಲಿ ಭಾರತ!

ಮಡಿಕೇರಿ: ಸ್ನೇಹಿತರ ಜೊತೆ ಪ್ರವಾಸಕ್ಕೆ ಬಂದಿದ್ದ ಮೈಸೂರಿನ ಯುವತಿ ಹೋಂ ಸ್ಟೇನಲ್ಲಿ ಅನುಮಾನಾಸ್ಪದ ಸಾವು

DKS ಸಿಎಂ ಆದ ಬೆನ್ನಲ್ಲೇ ಹಲವು ಅಧಿಕಾರಿಗಳ ವರ್ಗ: ಧರ್ಮಸ್ಥಳ ಕೇಸ್ ತನಿಖೆ ನಡೆಸಿದ್ದ ಪ್ರಣಬ್ ಮೊಹಂತಿ CID ಡಿಜಿಪಿಯಾಗಿ ನೇಮಕ!

SCROLL FOR NEXT