ಶಾಸಕ ಸುರೇಶ್ ಕುಮಾರ್  
ರಾಜ್ಯ

ಲಿಕ್ಕರ್ ಲಾಬಿಗೆ ಮಣಿಯದಿರಿ, ಮದ್ಯ ಅಂಗಡಿಗಳ ಅಕ್ರಮಕ್ಕೆ ಕಡಿವಾಣ ಹಾಕಿ: ಸರ್ಕಾರಕ್ಕೆ ಸುರೇಶ್ ಕುಮಾರ್ ಒತ್ತಾಯ

ಸರ್ಕಾರದ ನಿಯಮಾವಳಿಗಳ ಪ್ರಕಾರ ಮದ್ಯ ಅಂಗಡಿಗಳು ಬೆಳಿಗ್ಗೆ 10 ಗಂಟೆಯ ನಂತರವೇ ಕಾರ್ಯಾರಂಭ ಮಾಡಬೇಕು. ಆದರೆ, ಅನೇಕ ಕಡೆಗಳಲ್ಲಿ ಬೆಳಿಗ್ಗೆ 5 ಗಂಟೆಯಿಂದಲೇ ಅಂಗಡಿಗಳು ತೆರೆಯಲ್ಪಡುತ್ತಿವೆ.

ಬೆಂಗಳೂರು: ರಾಜ್ಯದಲ್ಲಿ ಮದ್ಯದಂಗಡಿಗಳ ಕಾರ್ಯನಿರ್ವಹಣೆಯ ಸಮಯ ಉಲ್ಲಂಘನೆ ವಿಚಾರವಾಗಿ ರಾಜಕೀಯ ಚರ್ಚೆ ತೀವ್ರಗೊಂಡಿದ್ದು, ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಸುರೇಶ್ ಕುಮಾರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಠಿಣ ಶಬ್ದಗಳಲ್ಲಿ ಪತ್ರ ಬರೆದು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ತಮ್ಮ ಪತ್ರದಲ್ಲಿ ಅವರು ರಾಜ್ಯದ ವಿವಿಧ ಭಾಗಗಳಲ್ಲಿ ಮದ್ಯ ಅಂಗಡಿಗಳು ಹಾಗೂ ಬಾರ್‌ಗಳು ಸರ್ಕಾರ ನಿಗದಿಪಡಿಸಿರುವ ಸಮಯಕ್ಕಿಂತ ಮುಂಚೆಯೇ ತೆರೆಯುತ್ತಿದ್ದು, ನಿಯಮಗಳನ್ನು ಬಹಿರಂಗವಾಗಿ ಉಲ್ಲಂಘಿಸುತ್ತಿದ್ದಾರೆಂದು ಆರೋಪಿಸಿದ್ದಾರೆ.

ಸರ್ಕಾರದ ನಿಯಮಾವಳಿಗಳ ಪ್ರಕಾರ ಮದ್ಯ ಅಂಗಡಿಗಳು ಬೆಳಿಗ್ಗೆ 10 ಗಂಟೆಯ ನಂತರವೇ ಕಾರ್ಯಾರಂಭ ಮಾಡಬೇಕು. ಆದರೆ, ಅನೇಕ ಕಡೆಗಳಲ್ಲಿ ಬೆಳಿಗ್ಗೆ 5 ಗಂಟೆಯಿಂದಲೇ ಅಂಗಡಿಗಳು ತೆರೆಯಲ್ಪಡುತ್ತಿವೆ.

ಈ ರೀತಿಯ ಅಕ್ರಮಗಳಿಂದ ಯುವಕರು ಸೇರಿದಂತೆ ಸಾಮಾನ್ಯ ಜನರು ಮದ್ಯಪಾನಕ್ಕೆ ಒಳಗಾಗುವ ಅಪಾಯ ಹೆಚ್ಚುತ್ತಿದೆ ಎಂದು ಎಚ್ಚರಿಸಿದ್ದಾರೆ.

ಬೆಳಿಗ್ಗೆ 6–7 ಗಂಟೆಯಲ್ಲೇ ಮದ್ಯಪಾನ ಮಾಡಿದವರು ಸಾರ್ವಜನಿಕ ಸ್ಥಳಗಳಲ್ಲಿ ಬಿದ್ದಿರುವ ದೃಶ್ಯಗಳು ಸಾಮಾನ್ಯವಾಗಿವೆ. ಇದು ಸಮಾಜದ ಆರೋಗ್ಯ ಮತ್ತು ಶಿಸ್ತಿನ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ ಎಂದು ಹೇಳಿದ್ದಾರೆ.

ಇದಕ್ಕಿಂತಲೂ ಮುಖ್ಯವಾಗಿ, ಈ ಅಕ್ರಮಗಳಿಗೆ ಅವಕಾಶ ಮಾಡಿಕೊಡುತ್ತಿರುವ ಅಬಕಾರಿ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯವನ್ನೂ ಸುರೇಶ್ ಕುಮಾರ್ ಅವರು ಪ್ರಶ್ನಿಸಿದ್ದಾರೆ.

ನಿಯಮ ಉಲ್ಲಂಘಿಸುವ ಮದ್ಯ ಅಂಗಡಿಗಳ ವಿರುದ್ಧ ಮಾತ್ರವಲ್ಲದೆ, ಅವುಗಳನ್ನು ನಿಯಂತ್ರಿಸಲು ವಿಫಲವಾದ ಅಧಿಕಾರಿಗಳ ಮೇಲೂ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಸರ್ಕಾರವು ಮದ್ಯ ಅಂಗಡಿಗಳ ಮೂಲಕ ಆದಾಯ ಗಳಿಸುವ ಉದ್ದೇಶದಿಂದ ನಿಯಮ ಉಲ್ಲಂಘನೆ ಕುರಿತು ಕಣ್ಮುಚ್ಚಿ ಕುಳಿತಿದೆ. ಅದು ನಿಜವೇ ಆದರೆ, ನೇರವಾಗಿ 24 ಗಂಟೆ ಕಾರ್ಯನಿರ್ವಹಿಸಲು ಅನುಮತಿ ನೀಡುವುದಾಗಿ ಘೋಷಿಸಿ ಎಂದು ವ್ಯಂಗ್ಯವಾಡಿದ್ದಾರೆ.

ಮದ್ಯ ಅಂಗಡಿಗಳು ಮುಂಜಾನೆ ತೆರೆಯುವುದರಿಂದ ಸಾರ್ವಜನಿಕ ಶಾಂತಿ ಭಂಗವಾಗುತ್ತಿದ್ದು, ವಿಶೇಷವಾಗಿ ಮಹಿಳೆಯರು ಮತ್ತು ಮಕ್ಕಳಿಗೆ ತೊಂದರೆ ಉಂಟಾಗುತ್ತಿದೆ. ಇಂತಹ ಪರಿಸ್ಥಿತಿ ಸರ್ಕಾರದ ವರ್ಚಸ್ಸಿಗೂ ಧಕ್ಕೆ ತರುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾಗೆ ಟ್ರಂಪ್‌ ಬಿಗ್ ಶಾಕ್: ಶೇ.100ರಷ್ಟು ಸುಂಕಕ್ಕೆ ಅಸ್ತು, ಭಾರತ-ಚೀನಾ ಮೇಲೂ ನಿರ್ಬಂಧದ ತೂಗುಗತ್ತಿ..!

ಜನರ ಭಾವನೆ ಮೇಲೆ ರಾಜಕಾರಣ ಮಾಡಲ್ಲ: ಸುಮ್ಮನೆ ಘೋಷಣೆ ಮಾಡಿ ಮರೆಯುವ ಜಾಯಮಾನ ನಮ್ಮದಲ್ಲ- ಸಿಎಂ ಡಿಕೆ ಶಿವಕುಮಾರ್!

ಟಿ. ನರಸೀಪುರ ಶೋಭಾಯಾತ್ರೆ: ಮಸೀದಿ ಮುಂದೆ ಪಟಾಕಿ ಸಿಡಿಸಿ ಸಂಭ್ರಮ, ಒಂದುವರೆ ವರ್ಷದಲ್ಲಿ ನಾವು ಬರ್ತೀವಿ, ಅವಾಗ ಲೆಕ್ಕ ಚುಪ್ತ ಮಾಡ್ತೀವಿ- ಪ್ರತಾಪ್ ಸಿಂಹ

ಪಂಚಾಯ್ತಿ ಚುನಾವಣೆ ನಡೆಸಲು ಸಚಿವ ಸಂಪುಟದ ನಿರ್ಧಾರ: EVM ಬದಲು ಮತಪೆಟ್ಟಿಗೆ ಬಳಕೆ

ಅಭಿಮಾನಿಯ ಕಾಲಿನ ಮೇಲೆ ಹತ್ತಿದ ಕಾರು: ತಾಳ್ಮೆ ಕಳೆದುಕೊಂಡು ಚಾಲಕನಿಗೆ ಹಿಗ್ಗಾಮುಗ್ಗಾ ಬೈದ ಸಲ್ಮಾನ್ ಖಾನ್! video