ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಲಾದ ವೀಡಿಯೋ ಸ್ಕ್ರೀನ್‌ಶಾಟ್ 
ರಾಜ್ಯ

ಮಹಿಳೆಗೆ ಲೈಂಗಿಕ ಕಿರುಕುಳ: ಇಬ್ಬರು ಡೆಲಿವರಿ ಬಾಯ್‌ಗಳ ಬಂಧನ

ಈ ಘಟನೆ ಕಾರಿನ ಡ್ಯಾಶ್ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ‘ನಮ್ಮ ಬೆಂಗಳೂರು’ ಎಂಬ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ವಿಡಿಯೋವನ್ನು ಹಂಚಿಕೊಳ್ಳಲಾಗಿತ್ತು. ಈ ವೀಡಿಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಬೆಂಗಳೂರು: ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಆನ್‌ಲೈನ್ ಗ್ರೋಸರಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಡೆಲಿವರಿ ಬಾಯ್‌ಗಳನ್ನು ಯಲಹಂಕ ಪೊಲೀಸರು ಗುರುವಾರ ಬಂಧನಕ್ಕೊಳಪಡಿಸಿದ್ದಾರೆ.

ಮಾರುತಿನಗರದ ಕೋಗಿಲು ಮುಖ್ಯ ರಸ್ತೆಯಲ್ಲಿ ಮಂಗಳವಾರ ಮಧ್ಯಾಹ್ನ ಈ ಘಟನೆ ನಡೆದಿದೆ. ಆರೋಪಿಗಳಾದ ಹರೀಶ್ ಮತ್ತು ಪ್ರಜ್ವಲ್ ಎಂಬವರು ಸ್ಕೂಟರ್‌ನಲ್ಲಿ ಸಾಗುತ್ತಿದ್ದ ವೇಳೆ ಪಾದಚಾರಿಯಾಗಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿ, ಅಸಭ್ಯವಾಗಿ ಸ್ಪರ್ಶಿಸಿ ಕಿರುಕುಳ ನೀಡಿದ್ದರು ಎಂದು ತಿಳಿದುಬಂದಿದೆ.

ಈ ಘಟನೆ ಕಾರಿನ ಡ್ಯಾಶ್ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ‘ನಮ್ಮ ಬೆಂಗಳೂರು’ ಎಂಬ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ವಿಡಿಯೋವನ್ನು ಹಂಚಿಕೊಳ್ಳಲಾಗಿತ್ತು. ಈ ವೀಡಿಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದರ ಆಧಾರದಲ್ಲಿ ಯಲಹಂಕ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಿದ್ದಾರೆ.

ಇಬ್ಬರೂ ಆರೋಪಿಗಳು ತುಮಕೂರು ಜಿಲ್ಲೆಯ ಪಾವಗಡ ಮೂಲದವರಾಗಿದ್ದು, 10ನೇ ತರಗತಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ನಂತರ ಉದ್ಯೋಗಕ್ಕಾಗಿ ಬೆಂಗಳೂರಿಗೆ ಬಂದು ಡೆಲಿವರಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಯಲಹಂಕದಿಂದ ಬಾಗಲೂರು ಕಡೆಗೆ ಹೋಗುತ್ತಿದ್ದ ವೇಳೆ ಈ ಕೃತ್ಯ ನಡೆಸಿದ್ದಾರೆ.

ಸಂತ್ರಸ್ತ ಮಹಿಳೆ ತನ್ನೊಂದಿಗೆ ಮತ್ತೊಬ್ಬ ಮಹಿಳೆಯ ಜೊತೆ ನಡೆದುಕೊಂಡು ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. ಆದರೆ, ಅವರು ಸ್ವತಃ ದೂರು ನೀಡಿರಲಿಲ್ಲ. ವೈರಲ್ ವೀಡಿಯೋದಲ್ಲಿ ಕಂಡು ಬಂದ ಸ್ಕೂಟರ್ ನೋಂದಣಿ ಸಂಖ್ಯೆಯ ಮೂಲಕ ಆರೋಪಿಗಳನ್ನು ಪೊಲೀಸರು ಪತ್ತೆ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೇ ತಿಂಗಳಲ್ಲಿ ನಿರುದ್ಯೋಗ ದರ 5.5%ಕ್ಕೆ ಏರಿಕೆ; 11 ತಿಂಗಳಲ್ಲೇ ಗರಿಷ್ಠ ಮಟ್ಟ

ಏನೇ ಶಾಂತಿ ಒಪ್ಪಂದವಾದ್ರೂ ನಾವು ಅಮೆರಿಕವನ್ನ ನಂಬಲ್ಲ: ಡೊನಾಲ್ಡ್ ಟ್ರಂಪ್ ಗೆ ಶಾಕ್ ಕೊಟ್ಟ Iran

'14 ತಿಂಗಳ ಕಾಲ ಕ್ರಿಕೆಟ್‌ನಿಂದ ದೂರ, ಖಿನ್ನತೆಗೆ ಒಳಗಾಗಿದ್ದೆ.. Cricket ಅನ್ನೇ ತೊರೆಯಬೇಕೆಂದಿದ್ದೆ': ಕನ್ನಡತಿ Shreyanka Patil ಆಘಾತಕಾರಿ ಹೇಳಿಕೆ

2 ಕೋಟಿ ಇನ್ಷುರೆನ್ಸ್ ಹಣಕ್ಕಾಗಿ ಮಾಜಿ ಯೋಧನ ಕೊಲೆ: FSL ವರದಿಯನ್ನೇ ತಿರುಚಿದ ಖತರ್ನಾಕ್ ಗ್ಯಾಂಗ್, ಪತ್ನಿ, ಆಕೆಯ ಲವರ್ ಸೇರಿ 9 ಮಂದಿ ಬಂಧನ

ಹೇಡಿತನದ ಕೃತ್ಯ: ಜೈಪುರದಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ Abhijeet Dipkeಗೆ ಕಪಾಳ ಮೋಕ್ಷ, ಹಲ್ಲೆ! Video

SCROLL FOR NEXT