ಜನಿವಾರ ವಿವಾದ ಹಿನ್ನೆಲೆ ಮುಖ್ಯಮಂತ್ರಿಗೆ ಬ್ರಾಹ್ಮಣ ಮಹಾಸಭಾ ಪತ್ರ  
ರಾಜ್ಯ

ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ ಕಾಲೇಜು ಲೈಸೆನ್ಸ್ ರದ್ದು ಮಾಡಿ ದಂಡ ವಿಧಿಸಿ: ಸಿಎಂಗೆ ಬ್ರಾಹ್ಮಣ ಮಹಾಸಭೆ ಪತ್ರ

ಸಿಇಟಿ ಪರೀಕ್ಷಾರ್ಥಿಗಳ ಜನಿವಾರ ತೆಗೆಸಲು ನಿಯಮ ಇಲ್ಲದಿದ್ದರೂ ತೆಗೆಸಿರುವುದು ಏಕೆ ಎಂದು ಪ್ರಶ್ನಿಸಿರುವ ಬ್ರಾಹ್ಮಣ ಮಹಾಸಭಾ ಆಕ್ರೋಶ ವ್ಯಕ್ತವಾಗುತ್ತಿದೆ.

ಬೆಂಗಳೂರು: ಸಿಇಟಿ ಪರೀಕ್ಷೆಯಲ್ಲಿ ಆನಂದ್ ಸುಧೀರ್ ರಾವ್ ಸೇರಿದಂತೆ ಐದಕ್ಕೂ ಹೆಚ್ಚು ಬ್ರಾಹ್ಮಣ ವಿದ್ಯಾರ್ಥಿಗಳಿಂದ ಜನಿವಾರ ತೆಗೆಸಿದ ಘಟನೆ ತೀವ್ರ ವಿವಾದ ತೆಗೆದುಕೊಳ್ಳುತ್ತಿದೆ. ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಮುಖ್ಯಮಂತ್ರಿಗೆ ಪತ್ರ ಬರೆದು ಜನಿವಾರ ತೆಗೆಸಿದ ಪರೀಕ್ಷಾ ಕೇಂದ್ರದ ಕಾಲೇಜಿನ ಪರವಾನಗಿ ರದ್ದುಪಡಿಸಬೇಕು, ಜೊತೆಗೆ ಸಂಬಂಧಿಸಿದ ಸಂಸ್ಥೆಗೆ ಕನಿಷ್ಠ 25 ಲಕ್ಷ ರೂಪಾಯಿ ದಂಡ ವಿಧಿಸಬೇಕೆಂದು ಒತ್ತಾಯಿಸಲಾಗಿದೆ.

ಬ್ರಾಹ್ಮಣ ಸಮುದಾಯದ ಮೇಲಿನ ಅತಿಕ್ರಮ ಎಂದ ಮಹಾಸಭಾ

ಸಿಇಟಿ ಪರೀಕ್ಷಾರ್ಥಿಗಳ ಜನಿವಾರ ತೆಗೆಸಲು ನಿಯಮ ಇಲ್ಲದಿದ್ದರೂ ತೆಗೆಸಿರುವುದು ಏಕೆ ಎಂದು ಪ್ರಶ್ನಿಸಿರುವ ಬ್ರಾಹ್ಮಣ ಮಹಾಸಭಾ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಮಹಾಸಭಾ ಅಧ್ಯಕ್ಷ ಎಸ್. ರಘುನಾಥ್, ಈ ಘಟನೆ ಅತ್ಯಂತ ದುರದೃಷ್ಟಕರ ಮತ್ತು ಖಂಡನೀಯ. ಜನಿವಾರ ತೆಗೆಸಿದ ಪರಿಣಾಮ ವಿದ್ಯಾರ್ಥಿಗಳು ಮತ್ತು ಪೋಷಕರು ಮಾನಸಿಕವಾಗಿ ನೊಂದಿದ್ದಾರೆ. ಕಳೆದ ವರ್ಷವೂ ಇಂತಹ ಘಟನೆ ನಡೆದಾಗ ಮಹಾಸಭಾ ಕರ್ನಾಟಕ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು ಎಂದು ರಘುನಾಥ್ ತಿಳಿಸಿದ್ದಾರೆ.

2025ರ ಡಿಸೆಂಬರ್‌ನಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕ್ರಮ ಕೈಗೊಳ್ಳುವುದಾಗಿ ಸರ್ಕಾರ ಭರವಸೆ ನೀಡಿದ್ದರೂ, ಇದೀಗ ಮತ್ತೆ ಇದೇ ರೀತಿಯ ಘಟನೆ ನಡೆದಿದೆ ಎಂದು ಆರೋಪಿಸಲಾಗಿದೆ. ಈ ಘಟನೆ ಬ್ರಾಹ್ಮಣ ಸಮುದಾಯದ ಮೇಲಿನ ಅತಿಕ್ರಮ ಎಂದು ಮಹಾಸಭಾ ಅಭಿಪ್ರಾಯಪಟ್ಟಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕಾ–ಇರಾನ್ ನಡುವೆ ಮುಂದುವರೆದ ಶಾಂತಿ ಪ್ರಯತ್ನ: ಪಾಕ್'ನಲ್ಲಿ 2ನೇ ಸುತ್ತಿನ ಸಂಧಾನ ಸಭೆ, ವ್ಯಾನ್ಸ್ ಬದಲು ವಿಟ್ಕಾಫ್, ಕುಶ್ನರ್‌ಗೆ ಜವಾಬ್ದಾರಿ..!

ಪಾಕ್'ನಲ್ಲಿ 2ನೇ ಸುತ್ತಿನ ಸಂಧಾನ ಸಭೆ: ನೇರ ಮಾತುಕತೆಗೆ ಅಮೆರಿಕಾ ಒತ್ತಾಯ, ಇರಾನ್ ನಕಾರ

10 ವರ್ಷಗಳ ಪ್ಲ್ಯಾನ್, 2 ಗಂಟೆಗಳಲ್ಲಿ ಪರಾರಿ: ಕಿಮ್ ಕಪಿಮುಷ್ಠಿಯಿಂದ ತಪ್ಪಿಸಿಕೊಂಡ ಫ್ಯಾಮಿಲಿ, ವಿಶ್ವದ ಗಮನ ಸೆಳೆದ ಗ್ರೇಟ್ ಎಸ್ಕೇಪ್ ಸ್ಟೋರಿ..!

Scared, Dubba Captaincy': ಮತ್ತೆ ತೀವ್ರ ಟೀಕೆಗಳಿಗೆ ಗುರಿಯಾದ ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ!

IPL 2026: ಶುಭ್ ಮನ್ ಗಿಲ್ ಗೆ ಸಖತ್ತಾಗಿ ಟಾಂಟ್ ಕೊಟ್ಟ ಸ್ಪಿನ್ನರ್ ಸುಯಾಶ್ ಶರ್ಮಾ! ನೆಟ್ಟಿಗರು 'ಫಿದಾ'

SCROLL FOR NEXT