ವಕೀಲೆ ಮನೆ ಮೇಲೆ ಗುಂಡಿನ ದಾಳಿ 
ರಾಜ್ಯ

ಬೆಳಗಾವಿಯಲ್ಲಿ ಮಧ್ಯರಾತ್ರಿ ಫೈರಿಂಗ್: ವಕೀಲೆ ಮನೆ ಮೇಲೆ ಗುಂಡಿನ ದಾಳಿ; ಮೊದಲ ಮಹಡಿಯನ್ನೇ ಟಾರ್ಗೆಟ್ ಮಾಡಿದ್ದೇಕೆ?

ನಿನ್ನೆ ರಾತ್ರಿ 1 ರಿಂದ 2 ಗಂಟೆ ಸುಮಾರಿಗೆ ವಕೀಲೆ ಪೂಜಾ ಕಾಕತಕರ್ ಅವರ ಮನೆಯ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ.

ಬೆಳಗಾವಿ: ಕುಂದಾನಗರಿ ಬೆಳಗಾವಿ ಮಧ್ಯರಾತ್ರಿಯಲ್ಲಿ ಗುಂಡಿನ ಸದ್ದು ಕೇಳಿ ಬೆಚ್ಚಿ ಬಿದ್ದಿದ್ದು, ನಗರದ ಮಂಡೋಳಿ ರಸ್ತೆಯಲ್ಲಿರುವ ವಕೀಲೆಯೊಬ್ಬರ ಮನೆ ಮೇಲೆ ಫೈರಿಂಗ್ ಮಾಡಿದ ಆತಂಕಕಾರಿ ಘಟನೆ ಶನಿವಾರ ರಾತ್ರಿ ನಡೆದಿದೆ.

ನಿನ್ನೆ ರಾತ್ರಿ 1 ರಿಂದ 2 ಗಂಟೆ ಸುಮಾರಿಗೆ ವಕೀಲೆ ಪೂಜಾ ಕಾಕತಕರ್ ಅವರ ಮನೆಯ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಮನೆಯ ಮೊದಲ ಮಹಡಿಯನ್ನು ಗುರಿಯಾಗಿಸಿ ಈ ದಾಳಿ ಮಾಡಲಾಗಿದೆ.

ಮನೆಯ ಮೊದಲ ಮಹಡಿಯಲ್ಲಿ ವಕೀಲೆ ಪೂಜಾ ಕಾಕತಕರ್ ಅವರ ಪುತ್ರಿ ಓದುತ್ತಿದ್ದಳು. ಈ ವೇಳೆ ದಾಳಿ ನಡೆದಿದೆ. ಮನೆಯ ಗ್ಲಾಸ್ ಮೇಲೆ ಫೈರಿಂಗ್ ಮಾರ್ಕ್ ಬಿದ್ದಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಮತ್ತು ಸುಕೋ ಟೀಂ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

ಬೆಳಗಾವಿ ಜಿಲ್ಲೆಯಲ್ಲಿ ಪ್ರಭಾವಿ ವಕೀಲೆಯಾಗಿರುವ ಪೂಜಾ ಕಾಕತಕರ್​ ಅವರು ಕಳೆದ 18 ವರ್ಷಗಳಿಂದ ವಕೀಲೆ ವೃತ್ತಿ ಮಾಡುತ್ತಾ ಬಂದಿದ್ದು, ಹೈ ಪ್ರೊಫೈಲ್ ಕೇಸ್​ಗಳ ಪರ ವಾದ ಮಾಡುತ್ತಿದ್ದರು. ಆದ್ರೆ, ನಿನ್ನೆ ರಾತ್ರಿ ದುಷ್ಕರ್ಮಿಗಳಿಂದ ಅವರ ಮನೆ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.

ಘಟನೆ ನಂತರ ಪೂಜಾ ಕಾಕತಕರ್​ ಅವರ ಕುಟುಂಬಕ್ಕೆ ರಕ್ಷಣೆ ನೀಡುವ ಭರವಸೆಯನ್ನು ಪೊಲೀಸರು ನೀಡಿದ್ದಾರೆ. ಎಫ್‌ಎಸ್‌ಎಲ್ ವರದಿಗಾಗಿ ಪೊಲೀಸರು ಕಾಯುತ್ತಿದ್ದಾರೆ.

ಈ ಸಂಬಂಧ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ತ್ರಿಶಾ ವಿರುದ್ಧ ಡಬಲ್ ಮೀನಿಂಗ್ ಹೇಳಿಕೆ: ವಿಚಾರಣೆ ಬಳಿಕ ಠಾಣೆಯಿಂದ ಉದಯನಿಧಿ ಬಿಡುಗಡೆ, ಅಭಿಮಾನಿಗಳಿಂದ ಸಂಭ್ರಮ!

585.72 ಕೋಟಿ ರೂ. ಬೆಳೆ ವಿಮೆ ಪರಿಹಾರ ವಿತರಣೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಗಜಿನಿ, ಲಗಾನ್ ಚಿತ್ರದಲ್ಲಿ ನಟಿಸಿದ್ದ ಖ್ಯಾತ ಖಳನಾಯಕ ಪ್ರದೀಪ್ ರಾವತ್‌ ನಿಧನ

ಅಶ್ಲೀಲ ಜೋಕ್‌ಗಳು ಸ್ವೀಕಾರಾರ್ಹವಲ್ಲ; ಉದಯನಿಧಿ ವಿರುದ್ಧದ ಪೊಲೀಸರ ಕ್ರಮ ಸರಿಯಾಗಿದೆ: ನಟಿ ಕಂಗನಾ ರಣಾವತ್

ದ್ವೇಷ ಭಾಷಣ: ಪಿಎಫ್‌ಐ ನಾಯಕನಿಗೆ ಆರು ತಿಂಗಳು ಜೈಲು ಶಿಕ್ಷೆ