ಹೈಕೋರ್ಟ್  online desk
ರಾಜ್ಯ

'ನೀವು ಮಹಿಳೆಯರನ್ನು ಎಲ್ಲಿಯೂ ಸುರಕ್ಷಿತವಾಗಿರಲು ಬಿಡುವುದಿಲ್ಲ, ಯಾವ ರೀತಿಯ ಮನುಷ್ಯರು ನೀವು': ಹೈಕೋರ್ಟ್ ಛೀಮಾರಿ!

‘ನೀವು ಮಹಿಳೆಯರನ್ನು ಎಲ್ಲಿಯೂ ಸುರಕ್ಷಿತವಾಗಿರಲು ಬಿಡುವುದಿಲ್ಲ, ಯಾವ ರೀತಿಯ ಮನುಷ್ಯರು ನೀವು’ ಎಂದು ಹೈಕೋರ್ಟ್ ನ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಬೆಂಗಳೂರು: ನಮ್ಮ ಮೆಟ್ರೋ ರೈಲಿನಲ್ಲಿ ಮಹಿಳೆಯರ ಅಶ್ಲೀಲ ವಿಡಿಯೋಗಳನ್ನು ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡ ಪ್ರಕರಣ ಎದುರಿಸುತ್ತಿರುವ ವ್ಯಕ್ತಿಗೆ ಹೈಕೋರ್ಟ್ ಹಿಗ್ಗಾ-ಮುಗ್ಗಾ ತರಾಟೆಗೆ ತೆಗೆದುಕೊಂಡಿದೆ.

ತನ್ನ ವಿರುದ್ಧದ ಪ್ರಕರಣವನ್ನು ಕೈಬಿಡುವಂತೆ ಕೋರಿ ಆರೋಪಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ನಮ್ಮ ಮೆಟ್ರೋ (Namma Metro) ರೈಲಿನಲ್ಲಿ ಮಹಿಳೆಯರ ಅಶ್ಲೀಲ ವಿಡಿಯೋಗಳನ್ನು ಚಿತ್ರೀಕರಿಸಿ ‘ಬೆಂಗಳೂರು ಮೆಟ್ರೋ ಚಿಕ್ಸ್’ ಎಂಬ ಇನ್‌ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಮಾಡುತ್ತಿದ್ದ ದಿಗಂತ್.ಬಿ.ಕೆ ವಿರುದ್ಧ 2025ರಲ್ಲಿ ಬನಶಂಕರಿ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿದ್ದರು. ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಆರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಛೀಮಾರಿ ಹಾಕಿ, ಅರ್ಜಿಯನ್ನು ವಜಾಗೊಳಿಸಿದೆ.

‘ನೀವು ಮಹಿಳೆಯರನ್ನು ಎಲ್ಲಿಯೂ ಸುರಕ್ಷಿತವಾಗಿರಲು ಬಿಡುವುದಿಲ್ಲ, ಯಾವ ರೀತಿಯ ಮನುಷ್ಯರು ನೀವು’ ಎಂದು ಹೈಕೋರ್ಟ್ ನ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

‘ನೀವು ಮಹಿಳೆಯರ ಮುಂಭಾಗ ಮತ್ತು ಹಿಂಭಾಗದಿಂದ ಅಶ್ಲೀಲ ವಿಡಿಯೋಗಳನ್ನು ಚಿತ್ರೀಕರಿಸಿ ಅದನ್ನು ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಾಕುತ್ತೀರಾ, ಮೆಟ್ರೋದಲ್ಲಿ ಮಾತ್ರವಲ್ಲ, ಮಹಿಳೆಯರನ್ನು ಎಲ್ಲಿಯೂ ಸುರಕ್ಷಿತವಾಗಿರಲು ನೀವು ಬಿಡುವುದಿಲ್ಲ, ನಾಚಿಕೆಯಾಗಲ್ವಾ’ ಎಂದು ಕಿಡಿಕಾರಿದೆ.

ಇನ್ನು ಅರ್ಜಿದಾರರ ಪರ ವಕೀಲ ಎಸ್​​ಆರ್‌ ಶ್ರೀಪ್ರಸಾದ್‌ ವಾದ ಮಂಡಿಸಿದ್ದು, ‘ಮೆಟ್ರೋದಲ್ಲಿ ಸಿಸಿಟಿವಿ ಕ್ಯಾಮೆರಾಗಳಿವೆ. ಇಲ್ಲಿ ಪೊಲೀಸರೇ ಸ್ವಯಂಪ್ರೇರಿತವಾಗಿ ದೂರು ದಾಖಲಿಸಿದ್ದಾರೆ ಹೊರತು ಯಾವುದೇ ಸಂತ್ರಸ್ತ ಮಹಿಳೆಯರು ದೂರು ನೀಡಿಲ್ಲ. ಹಾಗಾಗಿ ಇಲ್ಲಿ ಯಾವುದೇ ಅಪರಾಧ ನಡೆದಿಲ್ಲ’, ಎಂದು ವಾದಿಸಿದರು. ವಕೀಲರ ವಾದಕ್ಕೆ ಇನ್ನಷ್ಟು ಅಸಮಾಧಾನಗೊಂಡ ತಾಂತ್ರಿಕ ಅಂಶಗಳನ್ನು ಮುಂದಿಟ್ಟುಕೊಂಡು ತಪ್ಪಿಸಿಕೊಳ್ಳಲು ಆಗುವುದಿಲ್ಲ ಎಂದು ಹೇಳಿದೆ.

ಇದಕ್ಕೆ ತೀವ್ರವಾಗಿ ಪ್ರತಿಕ್ರಿಯಿಸಿದ ಪೀಠವು, ‘ಇನ್‌ಸ್ಟಾಗ್ರಾಂನಲ್ಲಿ ‘ಮೆಟ್ರೊ ಚಿಕ್ಸ್‌ ರೀಲ್ಸ್‌’ ಎಂಬ ಪ್ರತ್ಯೇಕ ಪೇಜ್‌ ಸೃಷ್ಟಿಸಲಾಗಿದೆ. ಇಂತಹ ಗಂಭೀರ ಪ್ರಕರಣಗಳಲ್ಲಿ ಕೇವಲ ತಾಂತ್ರಿಕ ಅಂಶಗಳನ್ನು ಮುಂದಿಟ್ಟುಕೊಂಡು ತಪ್ಪಿಸಿಕೊಳ್ಳಲು ಆಗುವುದಿಲ್ಲ. ಕೆಲವು ವಿಚಾರಗಳಲ್ಲಿ ತಾಂತ್ರಿಕತೆಗಿಂತ ನೈತಿಕತೆ ಮತ್ತು ಸುರಕ್ಷತೆ ಮುಖ್ಯ, ಆ ತಾಂತ್ರಿಕ ವಾದಗಳಿಗೆ ಬ್ರೇಕ್ ಹಾಕುವ ಸಮಯ ಬಂದಿದೆ’ ಎಂದು ಹೇಳಿದೆ.

ಅಲ್ಲದೆ, ಮಹಿಳೆಯರನ್ನು ಅವರ ಅನುಮತಿಯಿಲ್ಲದೆ ಅಶ್ಲೀಲವಾಗಿ ಚಿತ್ರೀಕರಿಸಿ ಸೋಶಿಯಲ್​ ಮೀಡಿಯಾಗೆ ಅಪ್‌ಲೋಡ್ ಮಾಡುವುದು ಅಪರಾಧವಲ್ಲದೆ ಮತ್ತೇನು? ಎಂದು ನ್ಯಾಯಪೀಠ ಖಾರವಾಗಿ ಪ್ರಶ್ನಿಸಿದ್ದು ಆರೋಪಿಯ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ. ಈತನ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (BNS) ಸೆಕ್ಷನ್ 78(2), 238(ಸಿ) ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 67ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೌರಿಂಗ್ ಆಸ್ಪತ್ರೆ ದುರಂತ: ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ಭೇಟಿ, ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಣೆ

Exit polls: ಪಂಚ ರಾಜ್ಯಗಳ ಚುನಾವಣೆ, ದೀದಿಗೆ ಶಾಕ್: BJP ತೆಕ್ಕೆಗೆ ಬಂಗಾಳ, ಅಸ್ಸಾಂನಲ್ಲೂ ಕಮಲ ಮ್ಯಾಜಿಕ್!

Exit polls: ತ.ನಾಡಿನಲ್ಲಿ ನಟ ವಿಜಯ್ ಗೆ ಮುಖಭಂಗ, DMKಗೆ ಮತ್ತೆ ಅಧಿಕಾರ, 10 ವರ್ಷಗಳ ಬಳಿಕ UDFಗೆ ಕೇರಳ ಗದ್ದುಗೆ, CM ವಿಜಯನ್ ಗೆ ಶಾಕ್!

ಮಹಾ ವಿಕಾಸ್ ಅಘಾಡಿಯಲ್ಲಿ ಮಹಾ ಬಿರುಕು; ಮೇಲ್ಮನೆಯಲ್ಲಿ ಇರುವುದೇ ಒಂದು ಸ್ಥಾನ; ಶಿವಸೇನೆಯಿಂದ ಅಂಬಾದಾಸ್ ದಾನ್ವೆ ಕಣಕ್ಕೆ; ಮಿತ್ರಪಕ್ಷಗಳಲ್ಲಿ ತೀವ್ರ ವಿರೋಧ!

ಭಾರತಕ್ಕೆ ಬೇಕಿದ್ದ ಮತ್ತೊಬ್ಬ ಉಗ್ರನ ಬೇಟೆ: ಪಾಕಿಸ್ತಾನದಲ್ಲಿ ಜೈಶ್ ಸಂಘಟನೆಯ ಟಾಪ್ ಕಮಾಂಡರ್ ನಿಗೂಢ ಸಾವು!

SCROLL FOR NEXT