ರಾಜ್ಯ

ಬೆಂಗಳೂರಿನಲ್ಲಿ ಘೋರ ದುರಂತ: ಮಳೆಯಿಂದಾಗಿ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 3 ಮಕ್ಕಳು ಸೇರಿ 7 ಮಂದಿ ಸಾವು!

ಬೆಂಗಳೂರಿನಲ್ಲಿ ಸಂಜೆ ಬಿರುಗಾಳಿ ಸಮೇತ ಧಾರಾಕಾರ ಮಳೆ ಸುರಿದಿದ್ದು, ಹಲವೆಡೆ ಅಲಿಕಲ್ಲು ಸಹಿತ ಮಳೆಯಾಗಿದೆ. ಇನ್ನು ಶಿವಾಜಿನಗರದಲ್ಲಿ ಸುರಿದ ಭಾರೀ ಮಹಿಳೆಯಿಂದಾಗಿ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು ಮೂವರು ಮಕ್ಕಳು ಸೇರಿ 7 ಮಂದಿ ಸಾವನ್ನಪ್ಪಿದ್ದಾರೆ.

ಬೆಂಗಳೂರು: ಬೆಂಗಳೂರಿನಲ್ಲಿ ಸಂಜೆ ಬಿರುಗಾಳಿ ಸಮೇತ ಧಾರಾಕಾರ ಮಳೆ ಸುರಿದಿದ್ದು, ಹಲವೆಡೆ ಅಲಿಕಲ್ಲು ಸಹಿತ ಮಳೆಯಾಗಿದೆ. ಇನ್ನು ಶಿವಾಜಿನಗರದಲ್ಲಿ ಸುರಿದ ಭಾರೀ ಮಹಿಳೆಯಿಂದಾಗಿ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು ಮೂವರು ಮಕ್ಕಳು ಸೇರಿ 7 ಮಂದಿ ಸಾವನ್ನಪ್ಪಿದ್ದಾರೆ. ಕಾಂಪೌಂಡ್ ಗೆ ಹೊಂದಿಕೊಂಡಂತೆ ವ್ಯಾಪಾರ ಮಾಡುತ್ತಿದ್ದವರು ಸೇರಿ ಹಲವರು ಮೃತಪಟ್ಟಿದ್ದು, ಗಾಯಗೊಂಡವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನಗರದ ಮೆಜೆಸ್ಟಿಕ್, ಶಾಂತಿನಗರ, ಕೋರಮಂಗಲ, ವಿಧಾನಸೌಧ, ಶಿವಾಜಿನಗರ, ಚಾಮರಾಜಪೇಟೆ ಸೇರಿದಂತೆ ನಗರದ ಬಹುತೇಕ ಎಲ್ಲ ಪ್ರದೇಶಗಳಲ್ಲಿ ಭಾರೀ ಮಳೆ ಸುರಿದಿದೆ.

ಅಲ್ಲದೇ ಯಲಹಂಕ, ವಿದ್ಯಾರಣ್ಯಪುರ, ಜಾಲಹಳ್ಳಿ ಸೇರಿದಂತೆ ಬಹುತೇಕ ಕಡೆ ಮೋಡ ಕವಿದ ವಾತಾವರಣವಿದ್ದು ಗುಡುಗು ಸಹಿತ ಮಳೆ ನಿರೀಕ್ಷಿಸಲಾಗಿದೆ. ಏಕಾಏಕಿ ಸುರಿದ ಮಳೆಯಿಂದಾಗಿ ನಗರದ ಕೆಲೆವೆಡೆ ವಾಹನ ಸಂಚಾರದಲ್ಲಿ ವ್ಯತ್ಯಯ ಆಯಿತು. ಹೀಗಾಗಿ ಸಂಜೆ ವೇಳೆ ಮನೆ ಕಡೆ ತೆರಳುತ್ತಿದ್ದವರು ಟ್ರಾಫಿಕ್ ನಲ್ಲಿ ಸಿಲುಕಿ ಸಂಕಷ್ಟ ಎದುರಿಸಿದರು.

ಮೊದಲೇ ಸೂಚನೆ ನೀಡಿದ್ದ ಹವಾಮಾನ ಇಲಾಖೆ

ಹವಾಮಾನ ಇಲಾಖೆಯು ಏಪ್ರಿಲ್ 29 ಮತ್ತು 30 ರಂದು ಬೆಂಗಳೂರು ಸೇರಿದಂತೆ ಕರ್ನಾಟಕ (Karnataka) ರಾಜ್ಯದ ವಿವಿಧೆಡೆ ಮಳೆಯಾಗುವುದಾಗಿ ಸೂಚನೆ ನೀಡಿತ್ತು. ಜೊತೆ ಆರೆಂಟ್ ಅಲರ್ಟ್ ಸಹ ಮಾಡಿತ್ತು. ಅಂತೆಯೇ ಇದೀಗ ಬೆಂಗಳೂರು ಸುತ್ತಮುತ್ತ ಮಳೆಯಾಗಿರುವುದರಿಂದ ವಾತಾವರಣ ತಂಪಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

9 ದಿನಗಳಿಂದ ಉಪವಾಸ: ದೇವೇಂದ್ರ ಮಹ್ತೊ ಆಸ್ಪತ್ರೆಗೆ ದಾಖಲು; ಪೊಲೀಸರ ಲಾಠಿಚಾರ್ಚ್ ಖಂಡಿಸಿ ನಾಳೆ ಬಂದ್ ಗೆ BJP ಕರೆ!

ಶಾರುಖ್ ನಟನೆಯ 'ಕಭಿ ಅಲ್ವಿದಾ ನಾ ಕೆಹನಾ' ಚಿತ್ರ ಅಕ್ರಮ ಸಂಬಂಧ ಬೆಂಬಲಿಸಿಲ್ಲ: ಕರಣ್ ಜೋಹರ್ ಪೋಸ್ಟ್ ವೈರಲ್!

ಖಾತೆ ಹಂಚಿಕೆ ಕಸರತ್ತು: ವರಿಷ್ಠರಿಗೆ ಪಟ್ಟಿ ನೀಡಿ ಬೆಂಗಳೂರಿಗೆ CM ಡಿ.ಕೆ ಶಿವಕುಮಾರ್ ವಾಪಸ್; ಹೇಳಿದ್ದೇನು?

ನಾವು ಹಿಂಸಾಚಾರನ ಬೆಂಬಲಿಸಲ್ಲ; ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್‌ ಸರಿಯಲ್ಲ: ಜಾರ್ಖಂಡ್ ನಡೆ ಖಂಡಿಸಿದ ರಾಹುಲ್!

ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಕನಿಷ್ಠ 47 ಮಂದಿ ಸಾವು, ಡಜನ್ಗಟ್ಟಲೆ ಕಟ್ಟಡಗಳು ಕುಸಿತ!