ಸುಹಾಸ್ ಸುಧಾಕರ್ 
ರಾಜ್ಯ

ರಾಜಕೀಯ ಜಿದ್ದಾಜಿದ್ದಿಗೆ ನನ್ನ ತಂದೆ ಹೆಸರು ಬಳಸಿಕೊಂಡಿದ್ದು ನೋವಾಗಿದೆ: ಸಚಿವ ಸುಧಾಕರ್ ಪುತ್ರ ಬೇಸರ

ನಮ್ಮ ತಂದೆ ಈಗ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಬೇಗ ಗುಣಮುಖರಾಗಿ ಬರುವ ನಂಬಿಕೆಯಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್‌ ಸೇರಿ ಮಂತ್ರಿಗಳು ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಬೆಂಗಳೂರು: ಶ್ವಾಸಕೋಶ ಸೋಂಕಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಚಿವ ಡಿ.ಸುಧಾಕರ್ ಬಗ್ಗೆ ಇತ್ತೀಚೆಗೆ ಹೇಳಿಕೆ ನೀಡಿದ್ದ ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿಯವರ ವಿರುದ್ಧ ಸುಹಾಸ್ ಸುಧಾಕರ್ ಬೇಸರ ಹೊರಹಾಕಿದ್ದಾರೆ.

ಈ ಬಗ್ಗೆ ಅವರು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ವಿಡಿಯೋದಲ್ಲಿ, ಹೆಬ್ಬೆಟ್ಟು ಬಳಕೆ ಬಗ್ಗೆ ಹೆಚ್‌ಡಿಕೆ ಹೇಳಿಕೆಯಿಂದ ನೋವಾಗಿದೆ. ನಮ್ಮ ತಂದೆಯ ಅನಾರೋಗ್ಯ ವಿಚಾರ ರಾಜಕೀಯಕ್ಕೆ ಬಳಕೆಯಾಗುತ್ತಿದೆ. ರಾಜಕೀಯ ಜಿದ್ದಾಜಿದ್ದಿಗೆ ಬಳಸಿಕೊಂಡಿದ್ದು ತುಂಬಾ ನೋವಾಗಿದೆ ಎಂದು ಹೇಳಿಕೊಂಡಿದ್ದಾರೆ.

ನಮ್ಮ ತಂದೆ ಈಗ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಬೇಗ ಗುಣಮುಖರಾಗಿ ಬರುವ ನಂಬಿಕೆಯಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್‌ ಸೇರಿ ಮಂತ್ರಿಗಳು ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಕಳೆದ 22 ದಿನಗಳಿಂದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶ್ವಾಸಕೋಶ ಸೋಂಕಿನ ಕಾರಣ ಅವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದೇವೆ. ಈಗ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಸುಹಾಸ್ ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Assembly elections: ಪಶ್ಚಿಮ ಬಂಗಾಳದಲ್ಲಿ ಅಂತಿಮ ಹಂತದ ಮತದಾನ: ಸಿಎಂ ಮಮತಾ ಬ್ಯಾನರ್ಜಿ ಸೇರಿ ಪ್ರಮುಖ ನಾಯಕರ ಭವಿಷ್ಯ ಇಂದು ನಿರ್ಧಾರ

ಎಸ್‌ಸಿ ಒಳ ಮೀಸಲಾತಿ ಅಧಿಕೃತ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್

'ಇರಾನ್ ಸಂಪೂರ್ಣ ಕುಸಿಯುತ್ತಿದೆ': ಹಾರ್ಮುಜ್ ತೆರೆಯುವಂತೆ ಟೆಹ್ರಾನ್ ಬೇಡಿಕೊಳ್ಳುತ್ತಿದೆ: ಟ್ರಂಪ್

ನಾಗರಿಕ ಸಮಾಜ ತಲೆ ತಗ್ಗಿಸುವ ಘಟನೆ: ಹಣಕ್ಕಾಗಿ ಹೂತಿಟ್ಟ ಸಹೋದರಿ ಶವವನ್ನೇ ಬ್ಯಾಂಕ್​ಗೆ ಹೊತ್ತು ತಂದ ವ್ಯಕ್ತಿ!

IPL 2026: ಜೈಸ್ವಾಲ್, ಫೆರೀರಾ ಅಬ್ಬರಕ್ಕೆ ಪಂಜಾಬ್ ತತ್ತರ; PBKS ವಿರುದ್ಧ RR ಭರ್ಜರಿ ಗೆಲುವು

SCROLL FOR NEXT