ಬೆಂಗಳೂರು: ಬುಧವಾರ ಸಂಜೆ ನಗರದಲ್ಲಿ ಸುರಿದ ಭಾರೀ ಮಳೆ ಭಾರೀ ಅವಾಂತರ ಸೃಷ್ಟಿಸಿದ್ದು, ಮೃತರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.
ಮನೆಯ ಮೇಲ್ಚಾವಣಿ, ಸಿಮೆಂಟ್ ಇಟ್ಟಿಗೆ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟಿರುವ ಘಟನೆ ಚಾಮರಾಜಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಮಂಜುನಾಥ್ ಎಂದು ಗುರುತಿಸಲಾಗಿದ್ದು, ಮನೆಯ ಮೇಲಿನ ಶೀಟ್ ಹಾರದಂತೆ ಕಲ್ಲು ಇಡಲಾಗಿತ್ತು.
ಭಾರೀ ಗಾಳಿ-ಮಳೆಗೆ ಶೀಟ್ ಬಿದ್ದಿದ್ದು, ಈ ವೇಳೆ ಶೀಟ್ ಮೇಲಿಟ್ಟಿದ್ದ ಕಲ್ಲು ಮನೆಯಲ್ಲಿ ಮಲಗಿದ್ದ ಮಂಜುನಾಥ್ ಅವರ ಮೇಲೆ ಬಿದ್ದಿದೆ. ಪರಿಣಾಮ ಮಂಜುನಾಥ್ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಇದೀಗ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ.