ಬೆಂಗಳೂರು ಮಳೆಯ ಅವಾಂತರ  
ರಾಜ್ಯ

Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಭಾಗಗಳಲ್ಲಿ ಇಂದು ಮಳೆ ಮುಂದುವರಿಕೆ...

ರಾಜ್ಯದಲ್ಲಿ ಇಂದು ಕೂಡ ಬಿಸಿಲಿನ ಅಬ್ಬರ ಮುಂದುವರಿಯಲಿದ್ದು, ಕೆಲ ಭಾಗಗಳಲ್ಲಿ ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಈ ಬೇಸಿಗೆಯ ಮೊದಲ ಮಳೆಯಲ್ಲಿ ಭಾರೀ ಅನಾಹುತ ಸಂಭವಿಸಿ ಹೋಗಿದೆ. ನಗರದ ಅನೇಕ ಕಡೆ ಮರದ ರೆಂಬೆ-ಕೊಂಬೆಗಳು ಬಿದ್ದಿದ್ದು, ತಗ್ಗು ಪ್ರದೇಶಗಳು ಜಲಾವೃತವಾಗಿದೆ. ನೀರು ನುಗ್ಗಿವೆ.

ರಾಜ್ಯದಲ್ಲಿ ಇಂದು ಕೂಡ ಬಿಸಿಲಿನ ಅಬ್ಬರ ಮುಂದುವರಿಯಲಿದ್ದು, ಕೆಲ ಭಾಗಗಳಲ್ಲಿ ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕಲಬುರಗಿ ಮತ್ತು ಬೀದರ್​​ನಲ್ಲಿ ತಾಪಮಾನ ಹೆಚ್ಚಾಗಲಿದ್ದು, ಗರಿಷ್ಠ 39ರಿಂದ 40 ಡಿಗ್ರಿ ಸೆಲ್ಸಿಯಸ್​​ ವರೆಗೆ ಉಷ್ಣಾಂಶ ತಲುಪುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳು ಸೇರಿದಂತೆ ಬೆಂಗಳೂರಿನಲ್ಲಿಯೂ ತಾಪಮಾನ ಎಂದಿನಂತೆ ಇರಲಿದ್ದು, ಜನರಿಗೆ ಸೆಕೆಯ ಅನುಭವ ಮುಂದುವರಿಯಲಿದೆ. ಕೆಲ ಜಿಲ್ಲೆಗಳಲ್ಲಿ ಬಿಸಿ ಗಾಳಿ ಮತ್ತು ತೇವಾಂಶ ಎಚ್ಚರಿಕೆಯನ್ನು ನೀಡಲಾಗಿದೆ.

ದಕ್ಷಿಣ ಒಳನಾಡು ಜಿಲ್ಲೆಗಳಾದ ಮೈಸೂರು, ತುಮಕೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಕಂಡುಬರಲಿದ್ದು, ಹಗಲಿನ ವೇಳೆ ತಾಪಮಾನ 36-38 ಡಿಗ್ರಿ ಸೆಲ್ಸಿಯಸ್​​ವರೆಗೆ ತಲುಪಲಿದೆ. ಹಾಗೆಯೇ ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬಾಗಲಕೋಟೆ, ವಿಜಯಪುರ ಮತ್ತು ಧಾರವಾಡ ಭಾಗದಲ್ಲಿ ಒಳ ಮತ್ತು ಬಿಸಿ ಹವೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.

ಕರಾವಳಿ ಜಿಲ್ಲೆಗಳಾದ ಮಂಗಳೂರು, ಕಾರವಾರ ಮತ್ತು ಉಡುಪಿಯಲ್ಲಿ ಬಿಸಿಲು ಮತ್ತು ತೇವಾಂಶ ಹೆಚ್ಚಾಗಿ ಕಂಡುಬರಲಿದ್ದು, ಇದೇ ರೀತಿಯ ಹವಾಮಾನ ಮುಂದಿನ ಎರಡು ದಿನಗಳವರೆಗೆ ಮುಂದುವರಿಯುವ ಸಾಧ್ಯತೆ ಇದೆ. ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ತೀವ್ರ ತಾಪಮಾನ ಕಂಡುಬರುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಬಿಸಿ ಗಾಳಿ ಮತ್ತು ತೇವಾಂಶ ಎಚ್ಚರಿಕೆಯನ್ನು ನೀಡಿದೆ. ಅದಾಗಿಯೂ ಕರಾವಳಿ ಭಾಗದ ಕೆಲವೆಡೆ ತುಂತುರು ಮಳೆಯ ಸಾಧ್ಯತೆ ಅಂದಾಜಿಸಲಾಗಿದೆ.

ಎಲ್ಲೆಲ್ಲಿ ಮಳೆ?

ದಕ್ಷಿಣ ಒಳನಾಡು ಕರ್ನಾಟಕ ಮತ್ತು ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ವಿಶೇಷವಾಗಿ ಸಂಜೆ ವೇಳೆ ಕೆಲವೆಡೆ ಗಾಳಿಯೊಂದಿಗೆ ಲಘು ಅಥವಾ ಮಧ್ಯಮ ಪ್ರಮಾಣದ ಮಳೆ ಸಾಧ್ಯತೆ ಇದೆ. ಗುಡುಗು ಸಹಿತ ಮಳೆಯ ಸಂಭವ ಇದೆ ಎನ್ನಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿಯೂ ಹಗಲಿನ ವೇಳೆ ಕನಿಷ್ಠ 24ರಿಂದ ಗರಿಷ್ಠ 36 ಡಿಗ್ರಿ ಸೆಲ್ಸಿಯಸ್​​ ಉಷ್ಣಾಂಶ ಇರಲಿದೆಯಾದರೂ, ಸಂಜೆ ಅಥವಾ ರಾತ್ರಿ ವೇಳೆಗೆ ಸಾಮಾನ್ಯ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮಾಹಿತಿ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇಂಧನ ದರ ಏರಿಕೆ ನಿಯಂತ್ರಣ ಅಸಾಧ್ಯ, ಬಳಕೆದಾರರ ಮೇಲೆ ಹೊರೆ ಹೇರಿಕೆ ಅನಿವಾರ್ಯ: ಕೇಂದ್ರ ಸರ್ಕಾರ

IPL 2026: 'ಹಾರ್ದಿಕ್ ಪಾಂಡ್ಯ ರಿಲೀಸ್': ಮತ್ತೊಂದು ವೈಫಲ್ಯದ ನಂತರ ಸ್ಪಷ್ಟ ಸಂದೇಶ ರವಾನಿಸಿದ MI

ಜಮ್ಮು ಮತ್ತು ಕಾಶ್ಮೀರ ಪಾಕಿಸ್ತಾನದ ಭಾಗ ಎಂದು ತೋರಿಸಿದ್ದ ನೇಪಾಳ ಏರ್‌ಲೈನ್ಸ್ ಯೂಟರ್ನ್; ಕ್ಷಮೆಯಾಚನೆ

ಮಳೆ ಬಳಿಕ ಸಿಲಿಕಾನ್ ಸಿಟಿ ಕೂಲ್-ಕೂಲ್: 10 ಡಿಗ್ರಿ ಸೆಲ್ಸಿಯಸ್ ತಾಪಮಾನ ಕುಸಿತ; ಮುಂದಿನ 2 ದಿನಗಳೂ ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ..!

ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಹೊತ್ತಿ ಉರಿದ ಕಾರು; ಐವರು ಸಜೀವ ದಹನ

SCROLL FOR NEXT