ಮಹೇಶ್‌ - ಪುಷ್ಪ 
ರಾಜ್ಯ

ಮೈಸೂರು: ಕ್ಷುಲ್ಲಕ ಕಾರಣಕ್ಕೆ ಕೊಡಲಿಯಿಂದ ಕೊಚ್ಚಿ ಪತ್ನಿ ಕೊಲೆ; ಬಳಿಕ ಪೊಲೀಸರಿಗೆ ಶರಣಾದ ಪತಿ

ಮೃತ ಪುಷ್ಪ ಅವರು ಮೈಸೂರಿನ ದೇವರಾಜ ಅರಸು ರಸ್ತೆಯಲ್ಲಿರುವ ಖಾಸಗಿ ಬಟ್ಟೆ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು.

ಮೈಸೂರು: ವ್ಯಕ್ತಿಯೊಬ್ಬ ಕ್ಷುಲ್ಲಕ ಕಾರಣಕ್ಕೆ ತನ್ನ ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಕೊಲೆ ಮಾಡಿ ಬಳಿಕ ಪೊಲೀಸರಿಗೆ ಶರಣಾದ ಭೀಕರ ಘಟನೆ ಮೈಸೂರಿನ ಹಳೆ ಕೆಸರೆ ಗ್ರಾಮದಲ್ಲಿ ನಡೆದಿದೆ.

ಆರೋಪಿ ಮಹೇಶ್‌ ತನ್ನ ಪತ್ನಿ ಪುಷ್ಪ(24) ಪ್ರತಿ ದಿನ ಕೆಲಸ ಮುಗಿಸಿ ಮನೆಗೆ ತಡವಾಗಿ ಬರುತ್ತಿದ್ದಾಳೆ ಎಂಬ ಕಾರಣಕ್ಕೆ ಆಕೆಯನ್ನು ಕೊಡಲಿಯಿಂದ ಹೊಡೆದು, ಬಳಿಕ ದಿಂಬಿನಿಂದ ಉಸಿರುಗಟ್ಟಿಸಿ ಕ್ರೂರವಾಗಿ ಹತ್ಯೆ ಮಾಡಿದ್ದಾನೆ.

ಮೃತ ಪುಷ್ಪ ಅವರು ಮೈಸೂರಿನ ದೇವರಾಜ ಅರಸು ರಸ್ತೆಯಲ್ಲಿರುವ ಖಾಸಗಿ ಬಟ್ಟೆ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಕೆಲಸದ ನಿಮಿತ್ತ ಅವರು ಪ್ರತಿದಿನ ರಾತ್ರಿ ಮನೆಗೆ ತಡವಾಗಿ ಬರುತ್ತಿದ್ದರು. ಇದೇ ವಿಚಾರಕ್ಕೆ ಪುಷ್ಪ ಮತ್ತು ಮಹೇಶ್ ನಡುವೆ ಪ್ರತಿದಿನ ಗಲಾಟೆ ನಡೆಯುತ್ತಿತ್ತು. ಹೆಂಡತಿ ಮನೆಗೆ ತಡವಾಗಿ ಬರುವ ವಿಚಾರಕ್ಕೆ ಮಹೇಶ್ ಆಕೆಯ ಮೇಲೆ ಅನುಮಾನ ಪಡುತ್ತಿದ್ದ ಎನ್ನಲಾಗಿದೆ.

ಎಂದಿನಂತೆ ನಿನ್ನೆ ಸಹ ಪುಷ್ಪ ಅವರು ಕೆಲಸ ಮುಗಿಸಿ ಮನೆಗೆ ತಡವಾಗಿ ಬಂದಾಗ ಇದೇ ವಿಚಾರವಾಗಿ ಇಬ್ಬರ ನಡುವೆ ಜಗಳ ನಡೆದಿದೆ. ಜಗಳ ವಿಕೋಪಕ್ಕೆ ತಿರುಗಿದಾಗ ಆಕ್ರೋಶಗೊಂಡ ಮಹೇಶ್ ಮನೆಯಲ್ಲಿದ್ದ ಕೊಡಲಿಯಿಂದ ಪುಷ್ಪ ಅವರ ತಲೆಗೆ ಜೋರಾಗಿ ಹೊಡೆದಿದ್ದಾನೆ. ಪುಷ್ಪ ಕೆಳಗೆ ಬಿದ್ದ ನಂತರ, ಅಷ್ಟಕ್ಕೇ ನಿಲ್ಲಿಸದ ಮಹೇಶ್ ದಿಂಬಿನಿಂದ ಆಕೆಯ ಮುಖವನ್ನು ಒತ್ತಿ ಹಿಡಿದು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ.

ಪತ್ನಿಯನ್ನು ಕೊಂದ ನಂತರ ಮಹೇಶ್ ತಾನೇ ನೇರವಾಗಿ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. ವಿಷಯ ತಿಳಿಯುತ್ತಿದ್ದಂತೆಯೇ ನರಸಿಂಹರಾಜ ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇಂಧನ ದರ ಏರಿಕೆ ನಿಯಂತ್ರಣ ಅಸಾಧ್ಯ, ಬಳಕೆದಾರರ ಮೇಲೆ ಹೊರೆ ಹೇರಿಕೆ ಅನಿವಾರ್ಯ: ಕೇಂದ್ರ ಸರ್ಕಾರ

ಮಳೆ ಬಳಿಕ ಸಿಲಿಕಾನ್ ಸಿಟಿ ಕೂಲ್-ಕೂಲ್: 10 ಡಿಗ್ರಿ ಸೆಲ್ಸಿಯಸ್ ತಾಪಮಾನ ಕುಸಿತ; ಮುಂದಿನ 2 ದಿನಗಳೂ ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ..!

ಜಮ್ಮು ಮತ್ತು ಕಾಶ್ಮೀರ ಪಾಕಿಸ್ತಾನದ ಭಾಗ ಎಂದು ತೋರಿಸಿದ್ದ ನೇಪಾಳ ಏರ್‌ಲೈನ್ಸ್ ಯೂಟರ್ನ್; ಕ್ಷಮೆಯಾಚನೆ

ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಹೊತ್ತಿ ಉರಿದ ಕಾರು; ಐವರು ಸಜೀವ ದಹನ

ಬೆಂಗಳೂರು: ಉತ್ತರಾಖಂಡ ರಾಜ್ಯಪಾಲರ ಬೆಂಗಾವಲು ಪಡೆಗೆ ಅಡ್ಡಿಪಡಿಸಿದ ಬೈಕ್ ಸವಾರನ ಬಂಧನ; ಆಗಿದ್ದೇನು?

SCROLL FOR NEXT