ಪ್ರಧಾನಿ ನರೇಂದ್ರ ಮೋದಿ 
ರಾಜ್ಯ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ದುರಂತ: ಪ್ರಧಾನಿ ಮೋದಿ ತೀವ್ರ ಸಂತಾಪ; ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ ಪರಿಹಾರ ಘೋಷಣೆ

ಬೆಂಗಳೂರಿನಲ್ಲಿ ಗೋಡೆ ಕುಸಿತದಿಂದ ಸಂಭವಿಸಿದ ಅನಾಹುತವು ಅತ್ಯಂತ ದುರದೃಷ್ಟಕರ. ದುಃಖತಪ್ತ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುವೆ.

ಬೆಂಗಳೂರು/ನವದೆಹಲಿ: ನಗರದಲ್ಲಿ ಬುಧವಾರ ಸಂಜೆ ಸುರಿದ ಭಾರೀ ಮಳೆಗೆ ಬೌರಿಂಗ್‌ ಆಸ್ಪತ್ರೆ ಕಾಂಪೌಂಡ್‌ ಗೋಡೆ ಕುಸಿದು ದುರಂತ ಸಂಭವಿಸಿದ್ದು, ಘಟನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತೀವ್ರ ಸಂತಾಪ ಸೂಚಿಸಿದ್ದಾರೆ.

ದುರ್ಘಟನೆ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮಾಡಿರುವ ಮೋದಿ ಅವರು, ಬೆಂಗಳೂರಿನಲ್ಲಿ ಗೋಡೆ ಕುಸಿತದಿಂದ ಸಂಭವಿಸಿದ ಅನಾಹುತವು ಅತ್ಯಂತ ದುರದೃಷ್ಟಕರ. ದುಃಖತಪ್ತ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುವೆ ಹೇಳಿದ್ದಾರೆ.

ಅಲ್ಲದೆ, ಘಟನೆಯಲ್ಲಿ ಸಾವನ್ನಪ್ಪಿದವರ ಕುಟುಂಬಕ್ಕೆ ಕೇಂದ್ರ ಸರ್ಕಾರ ಪರಿಹಾರ ಘೋಷಿಸಿದೆ. ಮೃತರ ಕುಟುಂಬಕ್ಕೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ 50,000 ರೂಪಾಯಿಗಳ ಪರಿಹಾರ ನೀಡುವುದಾಗಿ ತಿಳಿಸಿದೆ.

ನಿನ್ನೆ ಸಂಜೆ (ಏ.29) ಸುಮಾರು 5 ಗಂಟೆಯ ಸುಮಾರಿಗೆ ನಗರದಲ್ಲಿ ದಿಢೀರ್ ಗುಡುಗು ಸಹಿತ ಭಾರಿ ಮಳೆ ಮತ್ತು ಆಲಿಕಲ್ಲು ಮಳೆ ಆರಂಭವಾಯಿತು. ಮಳೆಯಿಂದ ತಪ್ಪಿಸಿಕೊಳ್ಳಲು ಪಾದಚಾರಿಗಳು ಮತ್ತು ಬೀದಿ ಬದಿಯ ವ್ಯಾಪಾರಿಗಳು ಬೌರಿಂಗ್ ಆಸ್ಪತ್ರೆಯ ಹಳೆಯ ಕಾಂಪೌಂಡ್ ಗೋಡೆಯ ಕೆಳಗೆ ಆಶ್ರಯ ಪಡೆದಿದ್ದರು.

ಮಳೆಯ ತೀವ್ರತೆಗೆ ದುರ್ಬಲವಾಗಿದ್ದ ಗೋಡೆಯು ಏಕಾಏಕಿ ಕುಸಿದುಬಿದ್ದಿತ್ತು, ಪರಿಣಾಮ ಗೋಡೆಯ ಕೆಳಗಿದ್ದವರು ಅವಶೇಷಗಳಡಿ ಸಿಲುಕಿಕೊಂಡರು. ಸ್ಥಳೀಯರು ಮತ್ತು ತುರ್ತು ಸೇವಾ ಸಿಬ್ಬಂದಿ ತಕ್ಷಣವೇ ರಕ್ಷಣಾ ಕಾರ್ಯ ನಡೆಸಿದರೂ, ಏಳು ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಈ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಅಲ್ಲದೆ, ತನಿಖೆ ನಡೆಸುವಂತೆಯೂ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಏರ್ ಇಂಡಿಯಾ ಟರ್ಬುಲೆನ್ಸ್: ಪೈಲಟ್ ಗಾಂಜಾ ಸೇವಿಸಿದ್ದು ದೃಢ- ವರದಿಗಳು

ತೆಲಂಗಾಣದಲ್ಲಿ ಭೀಕರ ರಸ್ತೆ ಅಪಘಾತ: ಕರ್ನಾಟಕದ 6 ಕಾರ್ಮಿಕರು ಸೇರಿ 9 ಮಂದಿ ದುರ್ಮರಣ

ಪಾಕ್‌ನಲ್ಲಿ ವಿಧ್ವಂಸ: ಕರಾಚಿಯಲ್ಲಿ ಪ್ರಧಾನ ಸೇನಾ ಕಚೇರಿ ಮೇಲೆ ಭೀಕರ ಗುಂಡಿನ ದಾಳಿ, ಓರ್ವ ಸೈನಿಕ ಸಾವು!

ಜಾರ್ಖಂಡ್‌ಗೆ ಏಕೆ ಹೋಗಲಿಲ್ಲ? ಸಂಸತ್ತಿನ ಆವರಣದಲ್ಲಿ ಬಿಜೆಪಿ ಸಂಸದನ ಮಾತಿಗೆ ತಬ್ಬಿಬ್ಬಾದ ಪ್ರಿಯಾಂಕಾ ವಾದ್ರಾ, Video

ವಿಧಾನಸಭೆಗೆ ಆಗಸ್ಟ್ 14 ರಂದು ಹೊಸ ಸ್ಪೀಕರ್ ಆಯ್ಕೆ