ಭಾರೀ ಮಳೆಗೆ ಕುಸಿದು ಬಿದ್ದಿರುವ ಮರ 
ರಾಜ್ಯ

25 ವರ್ಷಗಳ ಬಳಿಕ ಬೆಂಗಳೂರಲ್ಲಿ ದಾಖಲೆ ಮಳೆ: ನಗರದಲ್ಲಿ ಭಾರೀ ಅವಾಂತರ; 9 ಜೀವಗಳು ಬಲಿ!

ಬೆಳಗ್ಗೆ 8.30ರಿಂದ ರಾತ್ರಿ 8.30ರವರೆಗೆ ನಗರದಲ್ಲಿ ಒಟ್ಟು 111 ಮಿಮೀ ಮಳೆಯಾಗಿದ್ದು, ಇದು ಏಪ್ರಿಲ್ ತಿಂಗಳಲ್ಲಿಯೇ ಇದುವರೆಗೆ ದಾಖಲಾಗಿದ್ದ ಅತಿ ಹೆಚ್ಚು ಮಳೆಯಾಗಿದೆ ಎಂದು ತಿಳಿಸಿದೆ.

ಬೆಂಗಳೂರು: ಬುಧವಾರ ಸಂಜೆ ಸುರಿದ ಭಾರೀ ಮಳೆ ಸಿಲಿಕಾನ್ ಸಿಟಿಯನ್ನು ತತ್ತರಗೊಳಿಸಿದ್ದು, ಮಳೆಯಿಂದಾಗಿ ಸೃಷ್ಟಿಯಾದ ಅವಾಂತರಗಳಿಗೆ ಒಟ್ಟು 9 ಮಂದಿ ಜೀವ ಕಳೆದುಕೊಂಡಿದ್ದಾರೆ.

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿತದಲ್ಲಿ 7 ಮಂದಿ ಮೃತಪಟ್ಟರೆ, ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆ ಸಮೀಪ ವಿದ್ಯುತ್ ಪ್ರವಹಿಸಿ ಒಬ್ಬರು ಹಾಗೂ ಜೆಪಿ ನಗರದಲ್ಲೂ ವಿದ್ಯುತ್ ಸ್ಪರ್ಶದಿಂದ ಮತ್ತೊಬ್ಬರು ಮೃತಪಟ್ಟಿದ್ದಾರೆ.

ಭಾರತ ಹವಾಮಾನ ಇಲಾಖೆ (IMD) ಪ್ರಕಾರ, ಬೆಳಗ್ಗೆ 8.30ರಿಂದ ರಾತ್ರಿ 8.30ರವರೆಗೆ ನಗರದಲ್ಲಿ ಒಟ್ಟು 111 ಮಿಮೀ ಮಳೆಯಾಗಿದ್ದು, ಇದು ಏಪ್ರಿಲ್ ತಿಂಗಳಲ್ಲಿಯೇ ಇದುವರೆಗೆ ದಾಖಲಾಗಿದ್ದ ಅತಿ ಹೆಚ್ಚು ಮಳೆಯಾಗಿದೆ ಎಂದು ತಿಳಿಸಿದೆ. ಇದಕ್ಕೂ ಮೊದಲು 2001ರ ಏಪ್ರಿಲ್ 19ರಂದು 108.6 ಮಿಮೀ ಮಳೆಯಾಗಿದ್ದ ದಾಖಲೆ ಇತ್ತು.

ಗುರುವಾರ ಸಂಜೆ ಮಿಂಚು-ಗುಡುಗು ಹಾಗೂ ಆಲಿಕಲ್ಲು ಸಹಿತ ಕೇವಲ ಒಂದು ಗಂಟೆಯಲ್ಲಿ 8 ಸೆಂ.ಮೀ (80 ಮಿಮೀ) ಮಳೆಯಾಗಿದ್ದು, ಗಂಟೆಗೆ 75 ಕಿಮೀ ವೇಗದ ಗಾಳಿ ಬೀಸಿರುವುದು ದಾಖಲಾಗಿದೆ.

ಮುಂದಿನ ಎರಡು ದಿನಗಳವರೆಗೆ ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ಜೊತೆಗೆ ತುಮಕೂರು, ಹಾಸನ, ಚಿಕ್ಕಬಳ್ಳಾಪುರ ಸೇರಿದಂತೆ ದಕ್ಷಿಣ ಒಳನಾಡಿನ ಕೆಲ ಭಾಗಗಳಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆಯ ಸಾಧ್ಯತೆ ಇದೆ ಎಂದು IMD ಎಚ್ಚರಿಕೆ ನೀಡಿದೆ. ನಂತರ ಗರಿಷ್ಠ ತಾಪಮಾನ 1-2 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗುವ ಸಾಧ್ಯತೆ ಇದೆ.

ಮಳೆಯ ಪರಿಣಾಮವಾಗಿ ನಗರದಲ್ಲಿ 170 ಮರಗಳು ಉರುಳಿದರೆ, 408 ಕೊಂಬೆಗಳು ಮುರಿದು ಬಿದ್ದಿವೆ. ಇದರ ಪರಿಣಾಮ ಅನೇಕ ವಾಹನಗಳು ಹಾನಿಗೊಳಗಾಗಿವೆ.

ಮಳೆ-ಗಾಳಿ ಅಬ್ಬರದಿಂದ ನಿನ್ನೆ ಸಂಜೆ ಟ್ರಾಫಿಕ್ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದ್ದು, ಹಲವೆಡೆ ರಸ್ತೆಗಳಲ್ಲಿ ನೀರು ತುಂಬಿಕೊಂಡು ವಾಹನ ಸಂಚಾರಕ್ಕೆ ತೊಂದರೆ ಉಂಟಾಯಿತು. ಮರ ಬಿದ್ದ ಕಾರಣದಿಂದ ಕೆಲ ರಸ್ತೆಗಳನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದ್ದು, ರಾತ್ರಿ ತಡವರೆಗೆ ಟ್ರಾಫಿಕ್ ನಿಧಾನಗತಿಯಲ್ಲಿ ಸಾಗಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

Cricket: ಪಂತ್‌ರಂತೆ ಆಡಲು ಪ್ರಯತ್ನಿಸಲ್ಲ, ಅವರ ಜೊತೆ ಆಡೋದು ದೊಡ್ಡ ಅನುಭವ: ಫಿಟ್ನೆಸ್ ಅಪ್ಡೇಟ್ ಕೊಟ್ಟ Dhruv Jurel

ಜೈ ಜವಾನ್, ಜೈ ಕಿಸಾನ್: ಐತಿಹಾಸಿಕ ಶತಕದ ಬಳಿಕ ಹೊಸ ಟ್ಯಾಟೂ ರಿವೀಲ್ ಮಾಡಿದ Dhruv Jurel

EVM ದೋಷ, ನನ್ನನ್ನೇ ವಿಜೇತನೆಂದು ಘೋಷಿಸಿ: ಕೊಲತ್ತೂರ್ ಸೋಲನ್ನು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ MK Stalin!