ಸಾಂದರ್ಭಿಕ ಚಿತ್ರ 
ರಾಜ್ಯ

ಮಂಗಳೂರು: POCSO ಪ್ರಕರಣ,ಆರೋಪಿಗೆ 20 ವರ್ಷಗಳ ಜೈಲು ಶಿಕ್ಷೆ!

ಆರೋಪಿ ಸೆಪ್ಟೆಂಬರ್ 2024 ಮತ್ತು ಸೆಪ್ಟೆಂಬರ್ 2025 ರ ನಡುವೆ ಮಂಗಳೂರಿನ ಅಲಪೆಯಲ್ಲಿ ಆಕೆಯ ಮೇಲೆ ಹಲವು ಬಾರಿ ಲೈಂಗಿಕ ದೌರ್ಜನ್ಯವೆಸಗಿದ್ದನು ಎನ್ನಲಾಗಿದೆ.

ಮಂಗಳೂರು: ಕಂಕನಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದ ಮೇಲೆ, 20 ವರ್ಷದ ಸೋನು ಮ್ಯಾಕ್ಲೀನ್ ನೊರೊನ್ಹಾ ಎಂಬ ಆರೋಪಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ FTSC (2) POCSO ನ್ಯಾಯಾಲಯವು 20 ವರ್ಷಗಳ ಕಠಿಣ ಕಾರಾಗೃಹವಾಸ ಮತ್ತು 50,000 ರೂಪಾಯಿ ದಂಡ ವಿಧಿಸಿದೆ.

ಸೋನು ಫೆಬ್ರವರಿ 2024 ರಿಂದ ಸಂತ್ರಸ್ತ ಅಪ್ರಾಪ್ತ ಬಾಲಕಿಯೊಂದಿಗೆ ಸಂಬಂಧ ಹೊಂದಿದ್ದನು. ಆತ ಸೆಪ್ಟೆಂಬರ್ 2024 ಮತ್ತು ಸೆಪ್ಟೆಂಬರ್ 2025 ರ ನಡುವೆ ಮಂಗಳೂರಿನ ಅಲಪೆಯಲ್ಲಿ ಆಕೆಯ ಮೇಲೆ ಹಲವು ಬಾರಿ ಲೈಂಗಿಕ ದೌರ್ಜನ್ಯವೆಸಗಿದ್ದನು ಎನ್ನಲಾಗಿದೆ.

ಅಪ್ರಾಪ್ತ ಬಾಲಕಿ ಸ್ನಾನ ಮಾಡುತ್ತಿದ್ದಾಗ ಆರೋಪಿ ವಿಡಿಯೋ ಕರೆಯ ಮೂಲಕ ಸ್ಕ್ರೀನ್‌ಶಾಟ್‌ಗಳನ್ನು ತೆಗೆದು ಆಕೆಯ ಅಶ್ಲೀಲ ಚಿತ್ರಗಳನ್ನು ಸೆರೆಹಿಡಿದಿದ್ದನು. ಆ ಚಿತ್ರಗಳನ್ನು ಬಳಸಿ ಆಕೆಯನ್ನು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದಲ್ಲದೆ, ತನ್ನ ಬೇಡಿಕೆಗಳಿಗೆ ಒಪ್ಪದಿದ್ದರೆ ಆಕೆಯ ತಾಯಿ ಮತ್ತು ಸಹೋದರಿಯನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದನು.

ಈ ಕುರಿತು ಕಂಕನಾಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ನ್ಯಾಯಾಲಯವು ಆತನಿಗೆ POCSO ಕಾಯಿದೆಯ ಸೆಕ್ಷನ್ 6 ಮತ್ತು BNS ನ ಸೆಕ್ಷನ್ 64(2)(m) ಅಡಿಯಲ್ಲಿ ಶಿಕ್ಷೆ ವಿಧಿಸಿದೆ. ಹಾಗೆಯೇ POCSO ಕಾಯಿದೆಯ ಸೆಕ್ಷನ್ 15 ಮತ್ತು BNS ನ ಸೆಕ್ಷನ್ 77 ರ ಅಡಿಯಲ್ಲಿ ಒಂದು ವರ್ಷದ ಸರಳ ಕಾರಾಗೃಹವಾಸ ಹಾಗೂ 5,000 ರೂಪಾಯಿ ದಂಡ, ಮತ್ತು ಐಟಿ (IT) ಕಾಯಿದೆಯ ಸೆಕ್ಷನ್ 66(e) ರ ಅಡಿಯಲ್ಲಿ ಒಂದು ವರ್ಷದ ಸರಳ ಕಾರಾಗೃಹವಾಸ ಹಾಗೂ 5,000 ರೂಪಾಯಿ ದಂಡ ವಿಧಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದಕ್ಷಿಣ ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ: ವಲಸೆ ಕಾರ್ಮಿಕ ಸಾವು, ಮತ್ತೊಬ್ಬರಿಗೆ ಗಾಯ

ಮಂಡ್ಯ: ಕಾವೇರಿ ಹೋರಾಟಕ್ಕೆ ಸ್ಪಂದಿಸದೆ ರೈತರ ಕೆಂಗಣ್ಣಿಗೆ ಗುರಿಯಾದ ನಟಿ ರಾಗಿಣಿ ದ್ವಿವೇದಿ!

Ramayana Trailer: ಕಲರ್ ಫುಲ್ ಸ್ಯಾರಿ, ಓಪನ್ ಹೇರ್, ಕೈಕೇಯಿ ಪಾತ್ರಧಾರಿ ಲಾರಾ ದತ್ತಾ ಭಾರಿ ಟ್ರೋಲ್!

ಇರಾನ್ ವಿದೇಶಾಂಗ ಸಚಿವ- ಎಸ್ ಜೈಶಂಕರ್ ಮಾತುಕತೆ: ಪ್ರಾದೇಶಿಕ ಸಮರದ ಬಗ್ಗೆ ಆತಂಕ, ಹಡಗುಗಳ ಮೇಲೆ ದಾಳಿ ನಡೆಸದಂತೆ ಒತ್ತಾಯ

ಆಗಸ್ಟ್ 1 ರಂದು ಪ್ರಧಾನ ಮಂತ್ರಿ ಮೋದಿ ಆಂಧ್ರಪ್ರದೇಶ ಮೈಸೂರಿಗೆ ಭೇಟಿ; ಅಭಿವೃದ್ಧಿ ಯೋಜನೆಗಳ ಉದ್ಘಾಟನೆ