ಹಾಸನ: ಅನೈತಿಕ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ಪತ್ನಿಯನ್ನು ಹತ್ಯೆಗೈದ ಪತಿ ನಂತರ ವಿಡಿಯೋ ಕಾಲ್ ಮಾಡಿ ತಾನೂ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನದ ಬೇಲೂರು ತಾಲೂಕಿನ ಕೆಸಗೋಡು ಗ್ರಾಮದಲ್ಲಿ ನಡೆದಿದೆ. ಪೋಷಕರ ಅಕಾಲಿಕ ಮರಣದಿಂದಾಗಿ ಮಕ್ಕಳಿಬ್ಬರ ಬದುಕು ಅತಂತ್ರವಾಗಿದೆ. ಪ್ರಕರಣ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಹತ್ಯೆಯಾದ ಮಹಿಳೆಯನ್ನು 38 ವರ್ಷದ ಗಗನ ಹಾಗೂ ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿಯನ್ನು 41 ವರ್ಷದ ರಘು ಎಂದು ಗುರುತಿಸಲಾಗಿದೆ. 13 ವರ್ಷಗಳ ಹಿಂದೆ ವಿವಾಹವಾಗಿದ್ದು ದಂಪತಿಗೆ ಚಿಕ್ಕಮಗಳೂರಿನಲ್ಲಿ ಬೇಕರಿ ನಡೆಸುತ್ತಿದ್ದರು. ದಂಪತಿಗೆ 12 ಮತ್ತು 6 ವರ್ಷದ ಇಬ್ಬರು ಗಂಡು ಮಕ್ಕಳಿದ್ದಾರೆ.
ನಿನ್ನೆ ಹಾಸನಕ್ಕೆ ಬಂದಿದ್ದ ರಘು ತನ್ನ ಪತ್ನಿಯನ್ನು ಕೊಲೆ ಮಾಡಿ ನಂತರ ಸಂಬಂಧಿಕರಿಗೆ ವಿಡಿಯೋ ಕಾಲ್ ಮಾಡಿ ತಿಳಿಸಿದ್ದಾನೆ. ಕಾರಿನಲ್ಲೇ ಗಗನಳನ್ನು ಕೊಲೆ ಮಾಡಿ ಶವವನ್ನು ಯಗಚಿ ನಾಲೆ ಬಳಿ ಎಸೆದಿರುವ ಶಂಕೆ ವ್ಯಕ್ತವಾಗಿದೆ. ಪ್ರಸ್ತುತ ಪೊಲೀಸರು ಗಗನಳ ಮೃತದೇಹಕ್ಕಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ. ರಘು ರಸ್ತೆ ಬದಿಯ ಮರಕ್ಕೆ ನೇಣು ಬಿಗಿಕೊಂಡಿದ್ದನು. ಸದ್ಯ ಅರೇಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.