ಪ್ರಧಾನಿ ಮೋದಿ 
ರಾಜ್ಯ

ಮೈಸೂರಿನಲ್ಲಿ ವಿವೇಕ ಸ್ಮಾರಕ ಉದ್ಘಾಟಿಸಿದ ಪ್ರಧಾನಿ ಮೋದಿ; ಕೆಲಹೊತ್ತು ಧ್ಯಾನ

ಇಂದು ಮಧ್ಯಾಹ್ನ ವಿಶೇಷ ಹೆಲಿಕಾಪ್ಟರ್‌ ಮೂಲಕ ಓವಲ್ ಮೈದಾನಕ್ಕೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್‌ ಹಾಗೂ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವ ಯತೀಂದ್ರ ಸಿದ್ದರಾಮಯ್ಯ ಅವರು ಸ್ವಾಗತಿಸಿದರು.

ಮೈಸೂರು: ಸಾಂಸ್ಕೃತಿಕ ನಗರ ಮೈಸೂರಿಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ರಾಮಕೃಷ್ಣ ಆಶ್ರಮದಲ್ಲಿ ವಿವೇಕಾ ಸ್ಮಾರಕ(ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ)ವನ್ನು ಉದ್ಘಾಟಿಸಿದರು. ಬಳಿಕ ಆಶ್ರಮದಲ್ಲೇ ಕೆಲಹೊತ್ತು ಧ್ಯಾನ ಮಾಡಿದರು.

ಸುಮಾರು 45 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಸ್ವಾಮಿ ವಿವೇಕಾನಂದ ಸ್ಮಾರಕ ಹಾಗೂ ಸಾಂಸ್ಕೃತಿಕ ಯುವ ಕೇಂದ್ರವನ್ನು ಪ್ರಧಾನಿ ಮೋದಿ ಅವರು ಇಂದು ಮಧ್ಯಾಹ್ನ ಲೋಕಾರ್ಪಣೆಗೊಳಿಸಿದರು.

ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ರಾಮಕೃಷ್ಣ ಆಶ್ರಮದ ಆವರಣದಲ್ಲಿ ಗಿಡವೊಂದನ್ನು ನೆಟ್ಟರು

ಮಂಡಕಳ್ಳಿ ವಿಮಾನ ನಿಲ್ದಾಣದಿಂದ ವಿಶೇಷ ಹೆಲಿಕಾಪ್ಟರ್‌ ಮೂಲಕ ಓವಲ್ ಮೈದಾನಕ್ಕೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್‌ ಹಾಗೂ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವ ಯತೀಂದ್ರ ಸಿದ್ದರಾಮಯ್ಯ ಅವರು ಸ್ವಾಗತಿಸಿದರು.

ಮೈಸೂರಿನ ನಾರಾಯಣ ಶಾಸ್ತ್ರಿ ರಸ್ತೆಯಲ್ಲಿ ಸ್ವಾಮಿ ವಿವೇಕಾನಂದರು ನೆಲೆಸಿದ್ದರು ಎನ್ನುವ ನೆನಪಿಗಾಗಿ ಹಾಗೂ ಯುವ ಜನರಲ್ಲಿ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಉದ್ದೇಶದಿಂದ ಈ ಸಾಂಸ್ಕೃತಿಕ ಯುವ ಕೇಂದ್ರವನ್ನ ನಿರ್ಮಿಸಲಾಗಿದೆ.

ಮೋದಿಗೆ ವಿವೇಕಾನಂದರ ಮೂರ್ತಿ ಉಡುಗೊರೆ

ಇನ್ನು ಸ್ಮಾರಕ ಉದ್ಘಾಟಿಸಿ ವೇದಿಕೆ ಕಾರ್ಯಕ್ರಮಕ್ಕೆ ಆಗಮಿಸಿದ ಪ್ರಧಾನಿ ಮೋದಿ ಅವರಿಗೆ ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಿದ ಸ್ವಾಮಿ ವಿವೇಕಾನಂದರ 8.5 ಕೆಜಿ ತೂಕದ ಮೂರ್ತಿಯನ್ನು ಉಡುಗೊರೆಯಾಗಿ ನೀಡಲಾಯ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಹಿರಿಯ ನಟ ಅನಂತ್ ನಾಗ್ ಗೆ ಪ್ರತಿಷ್ಠಿತ 'ದಾದಾ ಸಾಹೇಬ್ ಫಾಲ್ಕೆ' ಪ್ರಶಸ್ತಿ ಪ್ರಕಟ! ಪ್ರಧಾನಿ ಮೋದಿ, ಸಿಎಂ ಡಿಕೆಶಿ ಅಭಿನಂದನೆ

CBFC ಪುನಾರಚನೆ: ಸುನಿಲ್ ಶೆಟ್ಟಿ, ಪ್ರೀತಿ ಜಿಂಟಾ, ರಿಕಿ ಕೇಜ್ ಸೇರಿದಂತೆ 18 ಸದಸ್ಯರ ಆಯ್ಕೆ!

‘ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಬಂದ್ರೂ ನಂಬದ ಅನಂತ್ ನಾಗ್; ‘ಸುಳ್ಳು ಸುದ್ದಿ’ ಎಂದು ನಕ್ಕಿ ಮಲಗಿದ್ರು’

ಬಿಸಿಸಿಐನಿಂದ WPL 2027ರ ವೇಳಾಪಟ್ಟಿ ಪ್ರಕಟ: ಇದೇ ಅಕ್ಟೋಬರ್‌ನಲ್ಲಿ ಹರಾಜು ಪ್ರಕ್ರಿಯೆ

ಯುದ್ಧದ ಕಿಡಿ ಹೊತ್ತಿಸಲು ಬಂದಿತ್ತಾ ಪಾಕ್ ನೌಕಾಪಡೆ ಹಡಗು? ಭಾರತೀಯ ಕ್ಯಾಪ್ಟನ್ ಚಾಣಾಕ್ಷತನದಿಂದ ತಪ್ಪಿದ ಭಾರೀ ದುರಂತ!