ಸರ್ವಪಕ್ಷ ಸಭೆ 
ರಾಜ್ಯ

ಕಾವೇರಿ ಕಗ್ಗಂಟಿಗೆ ಸರ್ವಪಕ್ಷ ಒಗ್ಗಟ್ಟು: 'ರಾಜಕೀಯಕ್ಕಿಂತ ರಾಜ್ಯದ ಹಿತ ಮುಖ್ಯ' ಎಂದ CM ಡಿ.ಕೆ. ಶಿವಕುಮಾರ್

ರಾಜ್ಯದ ಹಿತಾಸಕ್ತಿ ವಿಚಾರದಲ್ಲಿ ಎಲ್ಲ ರಾಜಕೀಯ ಪಕ್ಷಗಳು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಿದ ಇತಿಹಾಸ ಕರ್ನಾಟಕಕ್ಕಿದೆ. ರಾಜ್ಯದ ಜನರಿಗೆ ಕುಡಿಯುವ ನೀರು ಒದಗಿಸುವುದು ಸರ್ಕಾರದ ಮೊದಲ ಆದ್ಯತೆಯಾಗಿದ್ದು, ಈ ನಿಲುವಿಗೆ ಎಲ್ಲ ಪಕ್ಷಗಳೂ ಸಹಮತ ವ್ಯಕ್ತಪಡಿಸಿವೆ.

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ರಾಜಕೀಯಕ್ಕಿಂತ ರಾಜ್ಯದ ರೈತರು ಮತ್ತು ಜನರ ಹಿತವೇ ಸರ್ಕಾರಕ್ಕೆ ಮುಖ್ಯವಾಗಿದ್ದು, ರಾಜ್ಯದ ಹಿತಾಸಕ್ತಿ ವಿಚಾರದಲ್ಲಿ ಎಲ್ಲ ಪಕ್ಷಗಳು ಒಗ್ಗಟ್ಟಾಗಿ ನಿಲ್ಲಬೇಕಾದ ಅಗತ್ಯವಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭಾನುವಾರ ಹೇಳಿದ್ದಾರೆ.

ಕಾವೇರಿ ನದಿ ನೀರಿನ ಹಂಚಿಕೆ ಕುರಿತಂತೆ ಗೃಹ ಕಚೇರಿ 'ಕೃಷ್ಣಾ'ದಲ್ಲಿ ಭಾನುವಾರ ನಡೆದ ಸರ್ವಪಕ್ಷ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, "ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ ಸಮಸ್ಯೆಯನ್ನು ನಾವೆಲ್ಲರೂ ವರ್ಷಗಳಿಂದ ಎದುರಿಸುತ್ತಲೇ ಬಂದಿದ್ದೇವೆ. ಇಂತಹ ಸಂದರ್ಭದಲ್ಲಿ ರಾಜಕೀಯ ಬದಿಗಿಟ್ಟು ರಾಜ್ಯದ ಹಿತವನ್ನು ಕಾಪಾಡುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಹೇಳಿದರು.

ರಾಜ್ಯದ ಹಿತಾಸಕ್ತಿ ವಿಚಾರದಲ್ಲಿ ಎಲ್ಲ ರಾಜಕೀಯ ಪಕ್ಷಗಳು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಿದ ಇತಿಹಾಸ ಕರ್ನಾಟಕಕ್ಕಿದೆ. ರಾಜ್ಯದ ಜನರಿಗೆ ಕುಡಿಯುವ ನೀರು ಒದಗಿಸುವುದು ಸರ್ಕಾರದ ಮೊದಲ ಆದ್ಯತೆಯಾಗಿದ್ದು, ಈ ನಿಲುವಿಗೆ ಎಲ್ಲ ಪಕ್ಷಗಳೂ ಸಹಮತ ವ್ಯಕ್ತಪಡಿಸಿವೆ ಎಂದು ತಿಳಿಸಿದರು.

ಸಿಡಬ್ಲ್ಯುಆರ್‌ಸಿ (CWRC) ಹಾಗೂ ಸಿಡಬ್ಲ್ಯುಎಂಎ (CWMA) ಸಭೆಗೂ ಮುನ್ನವೇ ಕೇಂದ್ರ ಸಚಿವರಾದ ಸಿ.ಆರ್. ಪಾಟೀಲ್, ಪ್ರಹ್ಲಾದ್ ಜೋಶಿ, ವಿ. ಸೋಮಣ್ಣ ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಮತ್ತು ಜಗದೀಶ್ ಶೆಟ್ಟರ್ ಅವರನ್ನು ಭೇಟಿ ಮಾಡಿ ರಾಜ್ಯದ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಟ್ಟಿದ್ದೆ. ಅವರು ಕೂಡ ಕೇಂದ್ರದ ಮಟ್ಟದಲ್ಲಿ ಕರ್ನಾಟಕದ ಪರವಾಗಿ ಧ್ವನಿ ಎತ್ತಿದ್ದು, ಅವರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದು ಹೇಳಿದರು.

ಇದೇ ವೇಳೆ, ದೆಹಲಿಯಲ್ಲಿ ನಡೆದ ಕರ್ನಾಟಕದ ಸಂಸದರ ಸಭೆಯಲ್ಲೂ ಪಕ್ಷಭೇದ ಮರೆತು ಎಲ್ಲರೂ ರಾಜ್ಯದ ಪರವಾಗಿ ನಿಲ್ಲುವ ಭರವಸೆ ನೀಡಿರುವುದಕ್ಕೆ ಕೃತಜ್ಞತೆ ವ್ಯಕ್ತಪಡಿಸಿದರು.

ಸಭೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಬಿ.ಎಸ್. ಯಡಿಯೂರಪ್ಪ, ಎಚ್.ಡಿ. ಕುಮಾರಸ್ವಾಮಿ, ಡಿ.ವಿ. ಸದಾನಂದ ಗೌಡ, ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರಾದ ವಿ. ಸೋಮಣ್ಣ ಮತ್ತು ಶೋಭಾ ಕರಂದ್ಲಾಜೆ, ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಸಚಿವರಾದ ರಾಮಲಿಂಗಾ ರೆಡ್ಡಿ, ಕೃಷ್ಣ ಭೈರೇಗೌಡ, ಎಂ.ಬಿ. ಪಾಟೀಲ್, ಕೆ.ಜೆ. ಜಾರ್ಜ್, ಕರ್ನಾಟಕದ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ, ಸಂಸದ ಗೋವಿಂದ ಕಾರಜೋಳ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಸಚಿವ ಎಚ್.ಕೆ. ಪಾಟೀಲ್, ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ನಿವೃತ್ತ ನ್ಯಾಯಮೂರ್ತಿ ನಾಗಮೋಹನದಾಸ್, ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಸೇರಿದಂತೆ ಹಿರಿಯ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಭಾಗವಹಿಸಿದ್ದರು.

BJP ಕೋರ್ ಕಮಿಟಿ ಸಭೆ

ಸರ್ವಪಕ್ಷ ಸಭೆಗೆ ಮುನ್ನ ಬಿಜೆಪಿ ಕೋರ್ ಕಮಿಟಿ ಸಭೆ ನಡೆಸಿ, ಸಭೆಯಲ್ಲಿ ಮಂಡಿಸಬೇಕಾದ ವಿಷಯಗಳ ಕುರಿತು ಚರ್ಚೆ ನಡೆಸಲಾಯಿತು.

ನಂತರ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಲೆನಾಡು ಮತ್ತು ಕೊಡಗು ಭಾಗದಿಂದ ಜಲಾಶಯಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದುಬರುತ್ತಿದೆ. ಇಂತಹ ಸಂದರ್ಭದಲ್ಲಿ ತಮಿಳುನಾಡಿಗೆ ತರಾತುರಿಯಲ್ಲಿ ನೀರು ಹರಿಸಿ ಅದನ್ನು ಸಾಧನೆ ಎಂದು ಬಿಂಬಿಸಿಕೊಳ್ಳುವುದು ಸರಿಯಲ್ಲ ಎಂದು ಟೀಕಿಸಿದರು.

ರಾಜ್ಯದ ಜನರಿಗೆ ಕುಡಿಯುವ ನೀರು ಒದಗಿಸುವುದು, ಬೆಂಗಳೂರು, ಮೈಸೂರು, ಮಂಡ್ಯ ಸೇರಿದಂತೆ ಕಾವೇರಿ ಕೊಳ್ಳದ ಪ್ರದೇಶಗಳ ಅಗತ್ಯತೆ ಪೂರೈಸುವುದು ಹಾಗೂ ರೈತರ ಮುಂಗಾರು ಬೆಳೆಗಳಿಗೆ ನೀರು ಒದಗಿಸುವುದು ಸರ್ಕಾರದ ಮೊದಲ ಆದ್ಯತೆಯಾಗಬೇಕು. ರೈತರ ಕಾಲುವೆಗಳಿಗೆ ಇನ್ನೂ ಒಂದು ಹನಿ ನೀರು ಹರಿಸದೇ ತಮಿಳುನಾಡಿಗೆ ನೀರು ಬಿಡುವುದು ಸರಿಯಾದ ಕ್ರಮವಲ್ಲ ಎಂದು ಅಭಿಪ್ರಾಯಪಟ್ಟರು.

ಸರ್ಕಾರ ಸರ್ವಪಕ್ಷ ಸಭೆಯಲ್ಲಿ ಕೈಗೊಳ್ಳುವ ನಿರ್ಧಾರಗಳು ಹಾಗೂ ಮುಂದಿನ ಕ್ರಮಗಳನ್ನು ಗಮನಿಸಿ ಬಿಜೆಪಿಯ ಮುಂದಿನ ನಿಲುವು ನಿರ್ಧರಿಸಲಾಗುವುದು ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮಧ್ಯಪ್ರಾಚ್ಯ ರಾಷ್ಟ್ರಗಳ ಮನವಿಗೆ ಮಣಿದ Trump: ಕೊನೆ ಕ್ಷಣದಲ್ಲಿ Iran ಮೇಲಿನ ದಾಳಿಗೆ ಬ್ರೇಕ್‌; ಒಪ್ಪಂದವಾದರೆ ಯುದ್ಧ ಅಂತ್ಯ, ಇಲ್ಲದಿದ್ದರೆ ಭಾರೀ ದಾಳಿ ಎಚ್ಚರಿಕೆ..!

'ನೀರು-ರಕ್ತ ಒಟ್ಟಿಗೆ ಹರಿಯಲು ಸಾಧ್ಯವಿಲ್ಲ'; ನಿಮ್ಮ ದುರ್ವರ್ತನೆಯಿಂದಲೇ ಸಿಂಧು ಜಲ ಒಪ್ಪಂದ ಅಮಾನತು: ಪಾಕಿಸ್ತಾನಕ್ಕೆ ಭಾರತ ತಿರುಗೇಟು

ಭಾರತ-ಚೀನಾ ಗಡಿ ವ್ಯಾಪಾರಕ್ಕೆ ಮರುಜೀವ: 6 ವರ್ಷಗಳ ಬಳಿಕ ನಾಥೂ ಲಾ ಗಡಿಯಲ್ಲಿ ವ್ಯಾಪಾರ ಚಟುವಟಿಕೆ ಪುನರಾರಂಭ..!

ಸಕಲೇಶಪುರ: ರೈಲ್ವೆ ಹಳಿ ಮೇಲೆ ಗುಡ್ಡ ಕುಸಿತ; ರೈಲು ಸಂಚಾರ ಸಂಪೂರ್ಣ ಸ್ಥಗಿತ; ಕಾನ್ಸ್ಟೇಬಲ್ ಪರೀಕ್ಷಾರ್ಥಿಗಳ ಪರದಾಟ

ಬೆದರಿಕೆಗಳಿಗೆ ಹೆದರಲ್ಲ, ಮತ್ತೆ ದಾಳಿ ನಡೆದರೆ ತಕ್ಕ ಪ್ರತಿಕ್ರಿಯೆ: ಅಮೆರಿಕಾಗೆ ಇರಾನ್ ತಿರುಗೇಟು, ನೆರೆಹೊರೆಯ ರಾಷ್ಟ್ರಗಳೊಂದಿಗೆ ತುರ್ತು ಮಾತುಕತೆ..!