ಬೆಂಗಳೂರು: ಯೋಗೇಶ್ ಗೌಡ ಕೊಲೆ ಕೇಸ್‌ನಲ್ಲಿ ವಿನಯ್ ಕುಲಕರ್ಣಿಗೆ ವಿಧಿಸಲಾಗಿದ್ದ ಜೀವಾವಧಿ ಶಿಕ್ಷೆಗೆ ಹೈಕೋರ್ಟ್ ತಡೆ ನೀಡಿದ ಹಿನ್ನೆಲೆ ಶಾಸಕ ಸ್ಥಾನ ಅನರ್ಹತೆ ರದ್ದುಗೊಂಡಿದೆ. ವಿಧಾನಸಭೆ ಕಾರ್ಯದರ್ಶಿ ವಿನಯ್ ಕುಲಕರ್ಣಿ ಶಾಸಕ ಸ್ಥಾನ ಮರುಸ್ಥಾಪನೆ ಮಾಡುವುದಾಗಿ ಆದೇಶ ಹೊರಡಿಸಿದ್ದಾರೆ.
ಕೋರ್ಟ್‌ನ ಮುಂದಿನ ಆದೇಶದವರೆಗೆ ವಿನಯ್ ಕುಲಕರ್ಣಿ ಅವರ ಅನರ್ಹತೆ ರದ್ದುಗೊಳಿಸಲಾಗುವುದು. ಜೊತೆಗೆ ಶಾಸಕ ಸ್ಥಾನ ಮರು ಸ್ಥಾಪನೆ ಮಾಡಲಾಗುವುದು ಎಂದು ವಿಧಾನಸಭೆ ಕಾರ್ಯದರ್ಶಿ ತಿಳಿಸಿದ್ದಾರೆ.
ಮಾಜಿ ಸಚಿವ ವಿನಯ್ ಕುಲಕರ್ಣಿ ಅವರು ಶಿಕ್ಷೆ ಅಮಾನತ್ತಿನಲ್ಲಿ ಇರಿಸಿ ಜಾಮೀನು ನೀಡುವಂತೆ ಕೋರಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ, ಜೀವಾವಧಿ ಶಿಕ್ಷೆಗೆ ತಡೆಯಾಜ್ಞೆ ನೀಡಿ, ವಿನಯ್ ಕುಲಕರ್ಣಿ ಸೇರಿ 10 ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿತ್ತು.