ಎಐ ಸೃಷ್ಟಿತ ಚಿತ್ರ 
ರಾಜ್ಯ

ಪೊಲೀಸ್ ಪರೀಕ್ಷಾ ಕೇಂದ್ರದಲ್ಲಿ ಹೃದಯಸ್ಪರ್ಶಿ ಕ್ಷಣ; ಅಳುತ್ತಿದ್ದ ಕಂದಮ್ಮನಿಗೆ ಜೋಲಿ ತೂಗಿ, ತಾಯಿಯ ಕನಸಿಗೆ ಕೈಜೋಡಿಸಿದ ಮಹಿಳಾ ಪೊಲೀಸ್ ಸಿಬ್ಬಂದಿ..!

ತಾಯಿ ಪರೀಕ್ಷಾ ಕೇಂದ್ರಕ್ಕೆ ತನ್ನ ಎಂಟು ತಿಂಗಳ ಮಗುವಿನೊಂದಿಗೆ ಬಂದಿದ್ದು, ಪರೀಕ್ಷಾ ಕೊಠಡಿಗೆ ಪ್ರವೇಶಿಸುವ ಮುನ್ನ ಮಗು ಜೋರಾಗಿ ಅಳಲು ಆರಂಭಿಸಿದೆ. ಈ ವೇಳೆ ತಾಯಿ ಆತಂಕಕ್ಕೊಳಗಾಗಿದ್ದಾರೆ.

ಬೆಂಗಳೂರು: ಪೊಲೀಸ್ ಕಾನ್ಸ್ಟೆಬಲ್ ನೇಮಕಾತಿ ಪರೀಕ್ಷೆ ಬರೆಯಲು ಬಂದಿದ್ದ ಮಹಿಳಾ ಅಭ್ಯರ್ಥಿಯೊಬ್ಬರ 8 ತಿಂಗಳ ಮಗುವನ್ನು ಮಹಿಳಾ ಪೊಲೀಸರೇ ಜೋಗುಳ ಹಾಡಿ ತಾಯಿಯಂತೆ ಪೋಷಿಸಿದ ಹೃದಯಸ್ಪರ್ಶಿ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.

ಭಾನುವಾರ (ಆಗಸ್ಟ್ 2, 2026) ನಗರದ ಚೆನ್ನಮ್ಮನಕೆರೆ (ಸಿ.ಕೆ.) ಅಚುಕಟ್ಟು ವ್ಯಾಪ್ತಿಯ ಕೃಷ್ಣ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಈ ಘಟನೆ ನಡೆದಿದ್ದು, ಕರ್ತವ್ಯದ ನಡುವೆಯೂ ತಾಯ್ತನ ಮೆರೆದ ಮಹಿಳಾ ಸಿಬ್ಬಂದಿಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಪ್ರಶಂಸೆ ವ್ಯಕ್ತವಾಗುತ್ತಿದೆ.

ತಾಯಿ ಪರೀಕ್ಷಾ ಕೇಂದ್ರಕ್ಕೆ ತನ್ನ ಎಂಟು ತಿಂಗಳ ಮಗುವಿನೊಂದಿಗೆ ಬಂದಿದ್ದು, ಪರೀಕ್ಷಾ ಕೊಠಡಿಗೆ ಪ್ರವೇಶಿಸುವ ಮುನ್ನ ಮಗು ಜೋರಾಗಿ ಅಳಲು ಆರಂಭಿಸಿದೆ. ಈ ವೇಳೆ ತಾಯಿ ಆತಂಕಕ್ಕೊಳಗಾಗಿದ್ದಾರೆ.

ಇದನ್ನು ಗಮನಿಸಿದ ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯ ಮಹಿಳಾ ಸಿಬ್ಬಂದಿ, "ನೀವು ಯಾವುದೇ ಆತಂಕವಿಲ್ಲದೆ ಪರೀಕ್ಷೆ ಬರೆಯಿರಿ, ಮಗುವನ್ನು ನಾವು ನೋಡಿಕೊಳ್ಳುತ್ತೇವೆ" ಎಂದು ಧೈರ್ಯ ತುಂಬಿದ್ದಾರೆ.

ಬಳಿಕ ಮಗುವನ್ನು ತಮ್ಮ ಆರೈಕೆಗೆ ತೆಗೆದುಕೊಂಡು, ಸೀರೆಯಿಂದ ಜೋಲಿ ಕಟ್ಟಿ ತೂಗಿದ್ದಾರೆ.. ಮಗು ಅಳುವುದನ್ನು ನಿಲ್ಲಿಸಲು ಚಪ್ಪಾಳೆ ತಟ್ಟುತ್ತಾ, ಆಟವಾಡಿಸುತ್ತಾ ಸಮಾಧಾನಪಡಿಸಿದ್ದಾರೆ.

ಈ ದೃಶ್ಯವನ್ನು ಯಾರೋ ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದು, ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮಹಿಳಾ ಪೊಲೀಸ್ ಸಿಬ್ಬಂದಿಯ ಈ ಮಾನವೀಯ ನಡೆಗೆ ಸಾರ್ವಜನಿಕರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಪರೀಕ್ಷೆ ಮುಗಿದ ಬಳಿಕ ತಾಯಿ ತಮ್ಮ ಮಗುವನ್ನು ಸುರಕ್ಷಿತವಾಗಿ ನೋಡಿಕೊಂಡಿದ್ದಕ್ಕಾಗಿ ಮಹಿಳಾ ಪೊಲೀಸ್ ಸಿಬ್ಬಂದಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಈ ಘಟನೆ ಪೊಲೀಸ್ ಸಿಬ್ಬಂದಿಯ ಕರ್ತವ್ಯನಿಷ್ಠೆಯ ಜೊತೆಗೆ ಅವರ ಮಾನವೀಯ ಮುಖವನ್ನೂ ಅನಾವರಣಗೊಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮುಸ್ಲಿಮರು ಕಾಫಿರರೊಂದಿಗೆ ಸ್ನೇಹ ಬೆಳೆಸಬಾರದು’: ಭಾರತ-ಅಫ್ಘಾನ್ ಗೆಳತನಕ್ಕೆ Pak ಅಸೂಯೆ, Quran ಉಲ್ಲೇಖಿಸಿ ವಿಷ ಕಾರಿದ ಸೇನಾ ವಕ್ತಾರ..!

Iran ಮೇಲಿನ ದಾಳಿ ತಡೆಗೆ ಗಲ್ಫ್ ರಾಷ್ಟ್ರಗಳ ಸಲಹೆಯೇ ಪ್ರಮುಖ ಕಾರಣ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ: ಇನ್ಸ್‌ಪೆಕ್ಟರ್, ಡಿವೈಎಸ್‌ಪಿ ವರ್ಗಾವಣೆ ನಿಯಮ ಪರಿಷ್ಕರಣೆ, 5 ವರ್ಷಗಳ 'Cooling period' ಜಾರಿ

ಸಿಎಂ ಡಿಕೆ ಶಿವಕುಮಾರ್ ಕಾಂಗ್ರೆಸ್ ನಾಯಕರಿಗಿಂತ ಹೆಚ್ಚಾಗಿ ಸ್ಟಾಲಿನ್ ಮಾತು ಕೇಳ್ತಾರೆ; ಕಾವೇರಿ ಜಲ ವಿವಾದದ ನಡುವೆ ತಮಿಳುನಾಡು ಸಚಿವ ಆರೋಪ!

ಸ್ವರ್ಗಕ್ಕೂ ಮೀರಿದ ಸೌಂದರ್ಯ! ಹಿಮಾಲಯದ ಮಡಿಲಲ್ಲಿ ಅಡಗಿದೆ ಭಾರತದ ಕೊನೆಯ ಹಳ್ಳಿ Chitkul; ಪ್ರವಾಸಕ್ಕೂ ಮುನ್ನ ಇದನ್ನೊಮ್ಮೆ ಓದಿ..!