ಸಂಗ್ರಹ ಚಿತ್ರ 
ರಾಜ್ಯ

ಬಳ್ಳಾರಿ: ಅಜೀಂ ಬಿಟ್ಟು ಸೋಹೈಲ್ ಜೊತೆ ಮದುವೆಗೆ ಸಿದ್ಧತೆ; ಹಳೇ ಪ್ರಿಯಕರನ ಕಾಟಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ!

ಹಳೇ ಲವರ್ ಬಿಟ್ಟು ಹೊಸ ಲವರ್ ಜೊತೆ ಮದುವೆಗೆ ಸಿದ್ಧತೆ ನಡೆಸಿದ್ದ ಯುವತಿಯೊಬ್ಬಳು ಹಳೇ ಲವರ್ ಕಾಟಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಳ್ಳಾರಿಯ ಕೌಲ್ ಬಜಾರ್ ನಲ್ಲಿ ನಡೆದಿದೆ.

ಬಳ್ಳಾರಿ: ಹಳೇ ಲವರ್ ಬಿಟ್ಟು ಹೊಸ ಲವರ್ ಜೊತೆ ಮದುವೆಗೆ ಸಿದ್ಧತೆ ನಡೆಸಿದ್ದ ಯುವತಿಯೊಬ್ಬಳು ಹಳೇ ಲವರ್ ಕಾಟಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಳ್ಳಾರಿಯ ಕೌಲ್ ಬಜಾರ್ ನಲ್ಲಿ ನಡೆದಿದೆ.

ಬೆಂಗಳೂರಿನಲ್ಲಿ ಐಟಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಕೌಲ್ ಬಜಾರ್ ನಿವಾಸಿ ಅಜೀಂ ನನ್ನು ಪ್ರೀತಿಸುತ್ತಿದ್ದಳು. ಆತನ ವರ್ತನೆಯಿಂದ ಬೇಸತ್ತು ಬಳಿಕ ಅಜೀಂ ಸ್ನೇಹಿತ ಸೋಹೈಲ್ ಜೊತೆ ಪ್ರೀತಿಯಲ್ಲಿ ಬಿದ್ದಿದ್ದಳು. ಅಲ್ಲದೆ ಮದುವೆಯಾಗಲು ಸಿದ್ಧತೆ ನಡೆಸಿದ್ದಳು. ಈ ವಿಚಾರ ತಿಳಿದು ಕೋಪಗೊಂಡ ಅಜೀಂ, ತನ್ನ ಜೊತೆಗಿರುವ ಖಾಸಗಿ ಫೋಟೊ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದನು.

ಇದರಿಂದ ಮನನೊಂದ ಯುವತಿ ಲೈವ್ ವಿಡಿಯೋ ಮಾಡಿ ಆತ್ಮಹತ್ಯೆಗೆ ಶರನಾಗಿದ್ದಾಳೆ. ಆತ್ಮಹತ್ಯೆಗೂ ಮುನ್ನ ಹೊಸ ಲವರ್ ಗೆ ಕರೆ ಮಾಡಿ ಘಟನೆ ಬಗ್ಗೆ ವಿವರಿಸಿದ್ದಾಳೆ. ಅಲ್ಲದೆ ವಿಡಿಯೋದಲ್ಲಿ ತನ್ನ ಆತ್ಮಹತ್ಯೆಗೆ ಕಾರಣರಾದವರಿಗೆ ಶಿಕ್ಷೆ ನೀಡುವಂತೆ ಮನವಿ ಮಾಡಿದ್ದಾಳೆ.

ಇನ್ನು ಮಗಳು ಆತ್ಮಹತ್ಯೆ ಮಾಡಿಕೊಂಡಿರುವುದಕ್ಕೆ ಇಬ್ಬರು ಲವರ್ ಗಳ ಕಾಟ ಕಾರಣ. ಪ್ರೀತಿ ಹೆಸರಲ್ಲಿ ಮಗಳ ತಲೆ ಕೆಡಿಸಿ ತಮ್ಮ ಕುಕೃತ್ಯಕ್ಕೆ ಬಳಸಿಕೊಂಡಿದ್ದಾರೆ. ಇದರಿಂದ ಬೇಸತ್ತು ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಯುವತಿ ಪೋಷಕರು ಕೌಲ್ ಬಜಾರ್ ಠಾಣೆಯಲ್ಲಿ ದೂರು ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೋದಿ, ಶಾ, ಜ್ಞಾನೇಶ್ ಕುಮಾರ್ ದೇಶದ್ರೋಹಿಗಳು'; ನೂರಕ್ಕೆ ನೂರರಷ್ಟು ಎಲ್ಲಾ ಚುನಾವಣೆಗಳಲ್ಲೂ ಅಕ್ರಮ; ಸಂಚುಕೋರರಿಗೆ ಶಿಕ್ಷೆಯಾಗಬೇಕು: ರಾಹುಲ್ ಗಾಂಧಿ

ಶ್ವೇತ ಭವನದಲ್ಲಿ ಕ್ಸಿ ಜಿನ್ ಪಿಂಗ್- ಟ್ರಂಪ್ ಮಹತ್ವದ ಸಭೆ: AI ಮಾನವನ ನಿಯಂತ್ರಣದಲ್ಲಿರಬೇಕು; ಅಮೆರಿಕಕ್ಕೆ ಚೀನಾ ಆಗ್ರಹ!

'ಎನ್‌ಕೌಂಟರ್'ನಲ್ಲಿ ನನ್ನನ್ನು ಕೊಲ್ಲಬಹುದು: ಜೀವ ಭಯದಲ್ಲಿ ಸೋನಂ ವಾಂಗ್‌ಚುಕ್!

'ಹಿಂದುತ್ವ ಯಾರ ವಿರುದ್ಧವೂ ಅಲ್ಲ; ಅದು ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯುತ್ತದೆ': ಉಪರಾಷ್ಟ್ರಪತಿ ರಾಧಾಕೃಷ್ಣನ್

ಲೀವರ್ ಕ್ಯಾನ್ಸರ್ ಗೆ 'ವೆಲ್ ಕಮ್' ಖ್ಯಾತಿಯ ಹಿರಿಯ ಬಾಲಿವುಡ್ ನಟ ಮುಷ್ತಾಕ್ ಖಾನ್ ಬಲಿ!