ಹೆಚ್ ವಿಶ್ವನಾಥ್  
ರಾಜ್ಯ

ತಮ್ಮ ಪುತ್ರನ ಪ್ರಭಾವ ಕುಗ್ಗುತ್ತದೆಂದು ತನ್ವೀರ್ ಸೇಠ್ ಗೆ ಸಚಿವ ಸ್ಥಾನ ತಪ್ಪಿಸಿದ ಮಾಜಿ ಸಿಎಂ: ಎಚ್ ವಿಶ್ವನಾಥ್

ಸಚಿವರ ಪ್ರಮಾಣ ವಚನ ಸಮಾರಂಭಕ್ಕೆ ಸಿದ್ದರಾಮಯ್ಯ ಹೋಗಬೇಕಿತ್ತು. ಆದರೆ ದುರಂಹಕಾರದ ನಡೆಯಿಂದ ಸಿದ್ದರಾಮಯ್ಯ ಹೋಗಲಿಲ್ಲ ಎಂದು ಎಂಎಲ್ ಸಿ ಹೆಚ್.ವಿಶ್ವನಾಥ್ ಹರಿಹಾಯ್ದರು.

ಮೈಸೂರು: ಹಿರಿಯ ಶಾಸಕ ತನ್ವೀರ್ ಸೇಠ್ ಅವರಿಗೆ ಸಚಿವ ಸ್ಥಾನ ಕೈ ತಪ್ಪುವುದರಲ್ಲಿ ನಮ್ಮ ಜಿಲ್ಲೆ ಮಾಜಿ ಸಿಎಂ ಕೈವಾಡವಿದೆ ಎಂದು ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಆರೋಪಿಸಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಹೆಚ್.ವಿಶ್ವನಾಥ್, ತನ್ವೀರ್ ಸೇಠ್ ಗೆ ಸಚಿವ ಸ್ಥಾನ ಕೈತಪ್ಪುವದರಲ್ಲಿ ಮಾಜಿ ಸಿಎಂ ಕೈವಾಡವಿದೆ. ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತಕ್ಕೆ ಅನುಗುಣವಾಗಿ ಸಂಪುಟವಿದೆ. ಆದರೆ ಹಿರಿಯ ರಾಜಕಾರಣಿ ತನ್ವೀರ್ ಗೆ ಸಚಿವ ಸ್ಥಾನ ಕೊಡಬೇಕಿತ್ತು.

ತನ್ವೀರ್ ಗೆ ಸಚಿವ ಸ್ಥಾನ ನೀಡಿದರೇ ತಮ್ಮ ಪುತ್ರನ ಪ್ರಭಾವ ಕುಗ್ಗುತ್ತೆ ಎಂದು ಸಚಿವ ಸ್ಥಾನ ತಪ್ಪಿಸಿದ್ದಾರೆ. ತಮ್ಮ ಸ್ವಾರ್ಥಕ್ಕಾಗಿ ಕರ್ನಾಟಕ ರಾಜ್ಯವನ್ನು ಹಾಳು ಮಾಡಿಯಾಗಿದೆ ಎಂದು ವಾಗ್ದಾಳಿ ನಡೆಸಿದರು.

ಸಚಿವರ ಪ್ರಮಾಣ ವಚನ ಸಮಾರಂಭಕ್ಕೆ ಸಿದ್ದರಾಮಯ್ಯ ಹೋಗಬೇಕಿತ್ತು. ಆದರೆ ದುರಂಹಕಾರದ ನಡೆಯಿಂದ ಸಿದ್ದರಾಮಯ್ಯ ಹೋಗಲಿಲ್ಲ ಎಂದು ಎಂಎಲ್ ಸಿ ಹೆಚ್.ವಿಶ್ವನಾಥ್ ಹರಿಹಾಯ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರಧಾನಿ ಮೋದಿ Video ಡಿಲೀಟ್: Facebook ಮೇಲೆ ಗದಾ ಪ್ರಹಾರ, Mark Zuckerberg ಕ್ಷಮೆಯಾಚನೆಗೆ ಸಂಸದೀಯ ಸಮಿತಿ ಪಟ್ಟು! ಹೇಳಿದ್ದೇನು?

Repo Rate ಶೇ. 5.25 ಯಥಾಸ್ಥಿತಿ ಮುಂದುವರಿಕೆ, GDP ಬೆಳವಣಿಗೆ ಶೇ. 6.7: RBI ವಿತ್ತೀಯ ನೀತಿ ಪ್ರಕಟ

ಪ್ರಾಣ ಉಳಿಸಿದ ಹೀರೋಗೆ ಪ್ರವಾಹವೇ ಕಂಟಕ: ತನ್ನ ಲೈಫ್ ಜಾಕೆಟ್ ಕೊಟ್ಟು ಜೀವ ರಕ್ಷಿಸಿದ ತರಬೇತುದಾರನ ದುರಂತ ಸಾವು!

Hormuz ಜಲಸಂಧಿ ಬಿಕ್ಕಟ್ಟು ಶೀಘ್ರದಲ್ಲೇ ಅಂತ್ಯ: ಅಂತಿಮ ಘಟ್ಟದಲ್ಲಿ ಅಮೆರಿಕ–ಇರಾನ್ ಶಾಂತಿ ಒಪ್ಪಂದ, ಇಂದೇ ಅಧಿಕೃತ ಘೋಷಣೆ ಸಾಧ್ಯತೆ..!

'ಸಾವು ಉತ್ತಮ': ಉದಯನಿಧಿ ಸ್ಟಾಲಿನ್ ಬಂಧನ ಬೆನ್ನಲ್ಲೇ ನಟಿ nivetha pethuraj ಪೋಸ್ಟ್ ವೈರಲ್!