ನಿಖಿಲ್ ಕುಮಾರಸ್ವಾಮಿ  
ರಾಜ್ಯ

ಬಿಡದಿ ಟೌನ್‌ಶಿಪ್ ಯೋಜನೆಗೆ ವಿರೋಧ: ಜೆಡಿಎಸ್ ನಿಂದ ಆ.9ರಿಂದ ಮೂರು ದಿನ ಬೈರಮಂಗಲದಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ವರೆಗೆ ಪಾದಯಾತ್ರೆ-Video

ಈ ಕುರಿತು ವಿಡಿಯೊ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿರುವ ಅವರು, ಬೈರಮಂಗಲದಿಂದ ಫ್ರೀಡಂ ಪಾರ್ಕ್‌ವರೆಗೆ ರೈತರ ಜೊತೆ ಪಾದಯಾತ್ರೆ ಮಾಡುತ್ತೇವೆ. ಈ ಮೂಲಕ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಪ್ರಯತ್ನ ಮಾಡುತ್ತಿದ್ದೇವೆ ಎಂದು ತಿಳಿಸಿದರು.

ರಾಮನಗರ: ಬಿಡದಿ ಟೌನ್‌ಶಿಪ್ ಯೋಜನೆಯನ್ನು ವಿರೋಧಿಸಿ ಜೆಡಿಎಸ್ ವತಿಯಿಂದ ಆಗಸ್ಟ್ 9, 10 ಮತ್ತು 11 ರಂದು ಬೈರಮಂಗಲದಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ವರೆಗೆ 38 ಕಿ.ಮೀ ಬೃಹತ್ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ.

ಈ ಕುರಿತು ವಿಡಿಯೊ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿರುವ ಅವರು, ಬೈರಮಂಗಲದಿಂದ ಫ್ರೀಡಂ ಪಾರ್ಕ್‌ವರೆಗೆ ರೈತರ ಜೊತೆ ಪಾದಯಾತ್ರೆ ಮಾಡುತ್ತೇವೆ. ಈ ಮೂಲಕ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಪ್ರಯತ್ನ ಮಾಡುತ್ತಿದ್ದೇವೆ ಎಂದು ತಿಳಿಸಿದರು.

ರೈತರು ಸಂಪೂರ್ಣವಾಗಿ ಈ ಟೌನ್‌ಶಿಪ್ ಯೋಜನೆಯನ್ನು ವಿರೋಧಿಸುತ್ತಿದ್ದಾರೆ. ಆದರೆ ಈ ಸರ್ಕಾರಕ್ಕೆ ಕಣ್ಣು ಕಾಣುತ್ತಿಲ್ಲ, ಕಿವಿಯೂ ಕೇಳುತ್ತಿಲ್ಲ. ರೈತರ ವಿರುದ್ಧ ಸರ್ಕಾರದ ನಡೆ ಇದೆ. ಹಾಗಾಗಿ ನಾವು ರೈತರ ಪರ ನಿಲ್ಲುವ ಕೆಲಸ ಮಾಡುತ್ತಿದ್ದೇವೆ ಎಂದು ನಿಖಿಲ್ ತಿಳಿಸಿದರು.

ಕಳೆದ ಜುಲೈ 30, 31 ಮತ್ತು ಆಗಸ್ಟ್ 1 ರಂದು ಪಾದಯಾತ್ರೆ ಹಮ್ಮಿಕೊಳ್ಳಲಾಗಿತ್ತು. ಆದರೆ ಅಜ್ಜಿ ಚೆನ್ನಮ್ಮ ಅವರ ಅಗಲಿಕೆ ದುಃಖದ ಹಿನ್ನೆಲೆಯಲ್ಲಿ ಪಾದಯಾತ್ರೆಯನ್ನು ಮುಂದೂಡಲಾಗಿತ್ತು, ಆದರೆ ಈಗ ಆಗಸ್ಟ್ 9 ರಿಂದ 11 ರವರೆಗೆ 3 ದಿನಗಳ ಕಾಲ ಪಾದಯಾತ್ರೆ ನಡೆಯಲಿದೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Hormuz ಜಲಸಂಧಿ ಬಿಕ್ಕಟ್ಟು ಶೀಘ್ರದಲ್ಲೇ ಅಂತ್ಯ: ಅಂತಿಮ ಘಟ್ಟದಲ್ಲಿ ಅಮೆರಿಕ–ಇರಾನ್ ಶಾಂತಿ ಒಪ್ಪಂದ, ಇಂದೇ ಅಧಿಕೃತ ಘೋಷಣೆ ಸಾಧ್ಯತೆ..!

Yemen ಕರಾವಳಿಯಲ್ಲಿ ಭಾರತೀಯ ಧ್ವಜದ ವಾಣಿಜ್ಯ ಹಡಗಿನ ಮೇಲೆ ಕ್ಷಿಪಣಿ ದಾಳಿ; ಸಮುದ್ರದಲ್ಲಿ ಮುಳುಗಿದ ಹಡಗು, 13 ಮಂದಿ ಭಾರತೀಯರು ಸೇರಿ ಎಲ್ಲಾ 14 ಸಿಬ್ಬಂದಿ ರಕ್ಷಣೆ..!

Hormuz ಜಲಸಂಧಿ ವಿವಾದ: 'ನಮ್ಮ ಒಪ್ಪಿಗೆ ಇಲ್ಲದೆ ಹಡಗು ಸಂಚಾರಕ್ಕೆ ಅವಕಾಶವೇ ಇಲ್ಲ'; ಯಾರ ಅನುಮತಿ ಬೇಕಿಲ್ಲ ಎಂದ ಅಮೆರಿಕಕ್ಕೆ Iran ತಿರುಗೇಟು..!

ಮಾಧ್ಯಮಗಳ ಧ್ವನಿ ಅಡಗಿಸಲು ಪಾಕ್‌ ಮುಂದು? ಅನುಮತಿ ಇಲ್ಲದೆ ವರದಿಗಾರಿಕೆಗೆ ನಿಷೇಧ; ಸತ್ಯ ಮುಚ್ಚಿಡಲು ವಿದೇಶಿ ಮಾಧ್ಯಮಗಳ ರೆಕ್ಕೆ ಕತ್ತರಿಸಿದ ಸರ್ಕಾರ..!

Los Angeles ಭೇಟಿಗೂ ಮುನ್ನ ಟ್ರಂಪ್‌ಗೆ ಆಘಾತ; ಗಾಲ್ಫ್‌ ಮೈದಾನದಲ್ಲಿ ಶಸ್ತ್ರಸಜ್ಜಿತ ವ್ಯಕ್ತಿ ಬಂಧನ, ಹತ್ಯೆಗೆ ಸಂಚು ಶಂಕೆ..!