ಘಟನಾ ಸ್ಥಳದಲ್ಲಿರುವ ಪೊಲೀಸರು 
ರಾಜ್ಯ

ಯಾದಗಿರಿ: ಕೆಮಿಕಲ್ ಫ್ಯಾಕ್ಟರಿಯಲ್ಲಿ ಅನಿಲ ಸೋರಿಕೆ; ಉಸಿರುಗಟ್ಟಿ ಮೂವರು ಕಾರ್ಮಿಕರ ದುರ್ಮರಣ, ಇಬ್ಬರ ಸ್ಥಿತಿ ಗಂಭೀರ; Video

ಹೈದರಾಬಾದ್ ಮೂಲದ ಕಂಪನಿಯ ಘಟಕದಲ್ಲಿ ಈ ಅವಘಡ ಸಂಭವಿಸಿದ್ದು, ಕೆಮಿಕಲ್ ಸ್ಕ್ರಬರ್‌ನಿಂದ ವಿಷಕಾರಿ ಅನಿಲ ಸೋರಿಕೆಯಾಗಿದೆ ಎಂದು ತಿಳಿದುಬಂದಿದೆ.

ಯಾದಗಿರಿ: ಜಿಲ್ಲೆಯ ಕಡೆಯಚೂರು-ಬಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ ಔಷಧ ಉತ್ಪಾದನಾ ಘಟಕದಲ್ಲಿ ಬುಧವಾರ ಸಂಭವಿಸಿದ ರಾಸಾಯನಿಕ ಸೋರಿಕೆ ದುರಂತದಲ್ಲಿ ಮೂವರು ಕಾರ್ಮಿಕರು ಉಸಿರುಗಟ್ಟಿ ಮೃತಪಟ್ಟಿದ್ದು, ಇನ್ನಿಬ್ಬರು ಅಸ್ವಸ್ಥಗೊಂಡಿದ್ದಾರೆ.

ಕಡೆಯಚೂರು-ಬಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ ಸಿ.ಐ.ಎಲ್. ಲ್ಯಾಬೊರೇಟರಿ ಪ್ರೈವೇಟ್ ಲಿಮಿಟೆಡ್ ಎಂಬ ಔಷಧ ತಯಾರಿಕಾ ಕಂಪನಿಯಲ್ಲಿ ಈ ದುರ್ಘಟನೆ ಸಂಭವಿಸಿದೆ.

ಘಟಕದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ರಾಸಾಯನಿಕ ಸೋರಿಕೆಯಾಗಿದ್ದು, ವಿಷಕಾರಿ ಅನಿಲದಿಂದ ಉಸಿರುಗಟ್ಟಿ ಮೂವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರನ್ನು ತೆಲಂಗಾಣದ ಕಟ್ಲಾ ಗಣೇಶ್, ಮಧ್ಯಪ್ರದೇಶದ ವಿಕ್ರಮ್ ಸಿಂಗ್ ಮತ್ತು ಸಂಜಯ್ ಸಿಂಗ್ ಎಂದು ಗುರುತಿಸಲಾಗಿದೆ.

ಘಟನೆಯಲ್ಲಿ ಆಂಧ್ರಪ್ರದೇಶ ಮೂಲದ ಮಂಚಲ್ ಹೇಮಂತ್ ಮತ್ತು ಮಂಚಲ್ ಶಿವಕುಮಾರ್ ಎಂಬ ಇಬ್ಬರು ಕಾರ್ಮಿಕರು ಅಸ್ವಸ್ಥಗೊಂಡಿದ್ದು, ಅವರನ್ನು ರಾಯಚೂರಿನ ರಿಮ್ಸ್ (RIMS) ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯದ ಮೇಲೆ ವೈದ್ಯರು ನಿಗಾ ವಹಿಸಿದ್ದಾರೆ.

ಈ ಘಟನೆ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಮಾಹಿತಿ ತಿಳಿಯುತ್ತಿದ್ದಂತೆ ಉತ್ತರ-ಪೂರ್ವ ವಲಯ ಐಜಿಪಿ ಶಾಂತನು ಸಿನ್ಹಾ, ಯಾದಗಿರಿ ಜಿಲ್ಲಾಧಿಕಾರಿ ರಾಹುಲ್ ಪಾಂಡ್ವೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್ ಸೇರಿದಂತೆ ಎನ್‌ಡಿಆರ್‌ಎಫ್ ಹಾಗೂ ಎಸ್‌ಡಿಆರ್‌ಎಫ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು.

ಈ ಕುರಿತು ಪ್ರತಿಕ್ರಿಯಿಸಿದ ಎಸ್‌ಪಿ ಪೃಥ್ವಿಕ್ ಶಂಕರ್ ಅವರು, ಸಿ.ಐ.ಎಲ್. ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಆಡಳಿತ ಮಂಡಳಿ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ತಿಳಿಸಿದ್ದಾರೆ.

ರಾಸಾಯನಿಕ ಸೋರಿಕೆಗೆ ಕಾರಣವೇನು ಎಂಬುದರ ಕುರಿತು ಪೊಲೀಸರು ಹಾಗೂ ಸಂಬಂಧಿತ ಇಲಾಖೆಗಳು ತನಿಖೆ ಆರಂಭಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿ SIR: ವಿದೇಶಾಂಗ ಸಚಿವ ಜೈಶಂಕರ್, ಎಲ್.ಕೆ ಅಡ್ವಾಣಿ ಸೇರಿದಂತೆ ಹಲವು ಮತದಾರರಿಗೆ ನೋಟಿಸ್; CEO ಕೊಟ್ಟ ಸ್ಪಷ್ಟನೆ ಏನು?

ಇದು ಎಂತಹ ವಿಶೇಷ ತೀವ್ರ ಪರಿಷ್ಕರಣೆ? ಅರ್ಹರನ್ನು ಕಿತ್ತುಹಾಕಿ, ಅನರ್ಹರನ್ನು ಸೇರಿಸುವುದೇ SIR: ಕಪಿಲ್ ಸಿಬಲ್ ಕಿಡಿ!

ಟಾಟಾ ಸನ್ಸ್ ಅಧ್ಯಕ್ಷರಾಗಿ ಎನ್ ಚಂದ್ರಶೇಖರನ್ ಮರುನೇಮಕ ಪ್ರಶ್ನಿಸಿದ ಟಾಟಾ ಟ್ರಸ್ಟ್ಸ್!

ಸಿಎಂ ಡಿಕೆ ಶಿವಕುಮಾರ್‌ ನೂರು ದಿನಗಳ ಆಡಳಿತಕ್ಕೆ ಬಿಜೆಪಿ ನಾಯಕ ಫಿದಾ! ಏನಂದ್ರು ಗೊತ್ತಾ?

ಅಂತಹ ಮನಸ್ಥಿತಿ ಇದ್ದಾಗ ಮೊದಲೇ ಅದರಿಂದ ದೂರ ಇರಬೇಕಿತ್ತು: ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಮಹದೇವಪ್ಪ ಟಾಂಗ್!