ಸಾಂದರ್ಭಿಕ ಚಿತ್ರ 
ರಾಜ್ಯ

ವಾಹನ ಸವಾರರ ಗಮನಕ್ಕೆ: ಬೆಂಗಳೂರಿನ ಕೆಆರ್ ಮಾರ್ಕೆಟ್ ಫ್ಲೈಓವರ್‌ ಮೂರು ತಿಂಗಳು ಬಂದ್; ಇಲ್ಲಿದೆ ಕಾರಣ...

ಕೆಆರ್ ಮಾರ್ಕೆಟ್ ಫ್ಲೈಓವರ್‌ನಿಂದ ಚಾಮರಾಜಪೇಟೆ ಕಡೆಗೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಸಂಪೂರ್ಣವಾಗಿ ಬಂದ್ ಮಾಡಲಾಗುತ್ತಿದ್ದು, ಈ ಭಾಗದಲ್ಲಿ ಸಂಚರಿಸುವ ವಾಹನ ಸವಾರರು ಕಡ್ಡಾಯವಾಗಿ ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಬೆಂಗಳೂರು ಸಂಚಾರಿ ಪೊಲೀಸರು ಸೂಚಿಸಿದ್ದಾರೆ.

ಬೆಂಗಳೂರು: ರಾಜಧಾನಿ ಬೆಂಗಳೂರಿನ ಪ್ರಮುಖ ಸಂಚಾರ ಮಾರ್ಗಗಳಲ್ಲಿ ಒಂದಾದ ಕೆಆರ್ ಮಾರ್ಕೆಟ್ ಫ್ಲೈಓವರ್‌ನಲ್ಲಿ ವೈಟ್‌ಟಾಪಿಂಗ್ ಕಾಮಗಾರಿ ರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ಮೂರು ತಿಂಗಳ ಕಾಲ ಈ ಮಾರ್ಗದಲ್ಲಿ ವಾಹನ ಸಂಚಾರವನ್ನು ಸಂಪೂರ್ಣವಾಗಿ ಸಂಪೂರ್ಣವಾಗಿ ಬಂದ್ ಮಾಡಲು ನಿರ್ಧರಿಸಲಾಗಿದೆ.

ಕೆಆರ್ ಮಾರ್ಕೆಟ್ ಫ್ಲೈಓವರ್‌ನಿಂದ ಚಾಮರಾಜಪೇಟೆ ಕಡೆಗೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಸಂಪೂರ್ಣವಾಗಿ ಬಂದ್ ಮಾಡಲಾಗುತ್ತಿದ್ದು, ಈ ಭಾಗದಲ್ಲಿ ಸಂಚರಿಸುವ ವಾಹನ ಸವಾರರು ಕಡ್ಡಾಯವಾಗಿ ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಬೆಂಗಳೂರು ಸಂಚಾರಿ ಪೊಲೀಸರು ಸೂಚಿಸಿದ್ದಾರೆ.

ರಸ್ತೆ ಬಲವರ್ಧನೆ ಹಾಗೂ ದೀರ್ಘಾವಧಿ ಗುಣಮಟ್ಟವನ್ನು ಹೆಚ್ಚಿಸುವ ಉದ್ದೇಶದಿಂದ ಈ ಕಾಮಗಾರಿ ಕೈಗೊಳ್ಳಲಾಗುತ್ತಿದೆ ಎಂದು ಬೆಂಗಳೂರು ಸಂಚಾರ ಪೊಲೀಸರು ತಿಳಿಸಿದ್ದಾರೆ.

ಪ್ರತಿದಿನ ಸಾವಿರಾರು ವಾಹನಗಳು ಸಂಚರಿಸುವ ಈ ಫ್ಲೈಓವರ್ ಬಂದ್ ಆಗುವುದರಿಂದ ನಗರದ ಹಲವು ಭಾಗಗಳಲ್ಲಿ ವಾಹನ ದಟ್ಟಣೆ ಹೆಚ್ಚುವ ಸಾಧ್ಯತೆ ಇದೆ. ಕೆಆರ್ ಮಾರ್ಕೆಟ್, ಚಾಮರಾಜಪೇಟೆ, ಟೌನ್ ಹಾಲ್, ಮೆಜೆಸ್ಟಿಕ್ ಮತ್ತು ಮೈಸೂರು ರಸ್ತೆ ಭಾಗಗಳಿಗೆ ತೆರಳುವ ಪ್ರಯಾಣಿಕರು ತಮ್ಮ ಪ್ರಯಾಣವನ್ನು ಮುಂಚಿತವಾಗಿ ಯೋಜಿಸಿಕೊಳ್ಳುವಂತೆ ಪೊಲೀಸ್ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಸಂಚಾರದ ಅಡಚಣೆಯನ್ನು ಕಡಿಮೆ ಮಾಡಲು ವಾಹನ ಸವಾರರು ಪರ್ಯಾಯ ರಸ್ತೆಗಳನ್ನು ಬಳಸುವಂತೆ ಬೆಂಗಳೂರು ಸಂಚಾರ ಪೊಲೀಸರು ಸಲಹೆ ನೀಡಿದ್ದಾರೆ. ಮೈಸೂರು ರಸ್ತೆ, ಟೌನ್ ಹಾಲ್, ಚಾಮರಾಜಪೇಟೆ ಮತ್ತು ಮೆಜೆಸ್ಟಿಕ್ ಕಡೆಗೆ ತೆರಳುವವರು ಸಮೀಪದ ಪರ್ಯಾಯ ಸಂಪರ್ಕ ಮಾರ್ಗಗಳನ್ನು ಆಯ್ಕೆ ಮಾಡಿಕೊಳ್ಳುವುದು ಉತ್ತಮ ಎಂದು ಸೂಚಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣ: ಎ-14 ಪ್ರದೋಶ್ ಮಾಫಿ ಸಾಕ್ಷಿ ವಿಚಾರಣೆ, ದರ್ಶನ್ ಗೆ "ಕಂಟಕವಾಗುತ್ತಾ? ಆ.10 ಕ್ಕೆ ಆದೇಶ ಕಾಯ್ದಿರಿಸಿದ ನ್ಯಾಯಾಧೀಶರು!

'ಕ್ಯಾ ಬೋಲ್ತಿ ಪಬ್ಲಿಕ್': ನೀಟ್ ನಂತರ CJPಯ ಮುಂದಿನ ಟಾರ್ಗೆಟ್ ನಿರುದ್ಯೋಗ; ಜನರ ಧ್ವನಿಯಾಗಲು ದೇಶಾದ್ಯಂತ ಅಭಿಯಾನ

ಪಿಂಚಣಿದಾರರ ದೂರುಗಳ ಪರಿಹಾರ ಸಮಯ ಸರಾಸರಿ 21 ದಿನಗಳಿಗೆ ಇಳಿಕೆ: ರಾಜ್ಯಸಭೆಗೆ ಸರ್ಕಾರದ ಮಾಹಿತಿ

ಕಿರಿಯ ಸಹೋದ್ಯೋಗಿ ಮೇಲೆ ಅತ್ಯಾಚಾರ: ‘Tehelka’ ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ 10 ವರ್ಷ ಕಠಿಣ ಜೈಲು ಶಿಕ್ಷೆ

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೊಂದು ಶಾಕ್; ಪ್ರದೋಷ್ ಬಳಿಕ ಕೋರ್ಟ್‌ಲ್ಲಿ ಸತ್ಯ ಹೇಳಲು ಮುಂದಾದ ವಿನಯ್, ರವಿಶಂಕರ್!