ಅಪಘಾತಕ್ಕೆ ನಜ್ಜುಗುಜ್ಜಾದ ಕಾರು 
ರಾಜ್ಯ

ಚಿಕ್ಕಮಗಳೂರು: ಸಿಲಿಂಡರ್ ಲಾರಿಗೆ ಕಾರು ಡಿಕ್ಕಿ; ಮೂವರು ದುರ್ಮರಣ, ಇಬ್ಬರಿಗೆ ಗಂಭೀರ ಗಾಯ!

ಮೃತರನ್ನು ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕು ಹಳಿಲ್‌ಗದ್ದೆ ಗ್ರಾಮದವರಾದ ಜ್ಞಾನೇಶ, ಗುರು ಕಿರಣ್, ಮೋಹನ ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಇನ್ನಿಬ್ಬರು ಗಾಯಗೊಂಡಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಚಿಕ್ಕಮಗಳೂರು : ರಸ್ತೆ ಬದಿ ನಿಂತಿದ್ದ ಎಲ್ ಪಿಜಿ ಸಿಲಿಂಡರ್ ಸಾಗಿಸುತ್ತಿದ್ದ ಲಾರಿಗೆ ಕಾರು ಡಿಕ್ಕಿಯಾದ ಪರಿಣಾಮ ಮೂವರು ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ-ಚಾರ್ಮಾಡಿ ಘಾಟ್ ರಸ್ತೆಯ ಕೊಟ್ಟಿಗೆಹಾರ ಬಳಿ ಇಂದು ಮುಂಜಾನೆ ಸಂಭವಿಸಿದೆ.

ಮೃತರನ್ನು ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕು ಹಳಿಲ್‌ಗದ್ದೆ ಗ್ರಾಮದವರಾದ ಜ್ಞಾನೇಶ, ಗುರು ಕಿರಣ್, ಮೋಹನ ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಇನ್ನಿಬ್ಬರು ಗಾಯಗೊಂಡಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ತುಮಕೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರು ಕೊಟ್ಟಿಗೆಹಾರ ಬಳಿ ರಸ್ತೆ ಬದಿ ನಿಂತಿದ್ದ ಸಿಲಿಂಡರ್ ಲಾರಿಗೆ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಮೂವರು ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಸಾವನ್ನಪಿದ್ದಾರೆ.

ಅಪಘಾತದ ಶಬ್ದ ಕೇಳಿ ಸ್ಥಳೀಯರು ಕೂಡಲೇ ಕಾರಿನಲ್ಲಿ ಸಿಲುಕಿದ್ದ ಗಾಯಾಳುಗಳನ್ನು ಹೊರತೆಗೆದು ಆಸ್ಪತ್ರೆಗೆ ರವಾನಿಸಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ಆಸ್ಪತ್ರೆಗೆ ರವಾನಿಸಲಾಗಿದೆ.

ಸ್ಥಳಕ್ಕೆ ಬಣಕಲ್ ಠಾಣಾ ಪೊಲೀಸರು ಭೇಟಿ ನೀಡಿ ಪರಿಶಿಲನೆ ನಡೆಸಿದ್ದು, ಕಾರು ಚಾಲಕನ ಅತೀ ವೇಗ ಹಾಗೂ ನಿದ್ರೆ ಮಂಪರಿನಲ್ಲಿದ್ದ ಕಾರಣ ಅಪಘಾತ ನಡೆದಿರುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.

FCRA ಅಲ್ಲ.. ಸರ್ಕಾರದ ಅಜೆಂಡಾದಲ್ಲಿದೆ ಈ ನಾಲ್ಕು ಪ್ರಮುಖ ಮಸೂದೆಗಳು!

12 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಘೋಷಿಸಿದ CJP; ಯಾರಿಗೆ ಯಾವ ಹುದ್ದೆ? ಮುಖ್ಯಸ್ಥರು ಯಾರು? ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನಕ್ಕೆ ರಕ್ಷಣಾ ಮಾಹಿತಿ ಸೋರಿಕೆ: ಹನಿಟ್ರ್ಯಾಪ್‌ ಬಲೆಗೆ ಬಿದ್ದ IAF ವಿಂಗ್‌ ಕಮಾಂಡರ್‌ ಬಂಧನ

ಮಾನವ ಕಳ್ಳ ಸಾಗಣೆ: ಕೆಲಸ ಅರಸಿ ಪೋರ್ಚುಗಲ್ ಗೆ ಹೋಗಿದ್ದ ನಾಗ್ಪುರ ಮಹಿಳೆ ಬಿಯರ್ ಅಂಗಡಿ ಮಾಲೀಕನಿಗೆ ಮಾರಾಟ!

ಕರ್ನಾಟಕದಲ್ಲಿ ಅಕ್ರಮ ವಲಸಿಗರ ವಿರುದ್ಧ ಕಾರ್ಯಾಚರಣೆ.. 3 ತಿಂಗಳಲ್ಲಿ 1,000 ಮಂದಿ ಪತ್ತೆ: ಸಚಿವ Priyank Kharge ಹೇಳಿದ್ದೇನು?