ಅದ್ವೈತ್ ಉಪಾಧ್ಯಾಯ 
ರಾಜ್ಯ

ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್‌ಗೆ ಹೋಗಿದ್ದ ಬೆಂಗಳೂರಿನ ಟೆಕ್ಕಿ ನಾಪತ್ತೆ: ಡ್ರೋನ್ ಮೂಲಕ ಶೋಧ ಕಾರ್ಯ; ಹಲವು ಅನುಮಾನ

ನಾಪತ್ತೆಯಾಗಿರುವ ಟೆಕ್ಕಿಯನ್ನು ಬೆಂಗಳೂರಿನ 31 ವರ್ಷದ ಅದ್ವೈತ್ ಉಪಾಧ್ಯಾಯ ಎಂದು ಗುರುತಿಸಲಾಗಿದ್ದು, ನಿನ್ನೆ ಬೆಳಗ್ಗೆಯಿಂದ ಕಾಣೆಯಾಗಿದ್ದಾರೆ.

ಬೆಂಗಳೂರು: ಪ್ರಸಿದ್ಧ ಪ್ರವಾಸಿ ತಾಣವಾದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಶಿವಗಂಗೆ ಬೆಟ್ಟದಲ್ಲಿ ಟ್ರೆಕ್ಕಿಂಗ್‌ಗೆ ಹೋಗಿದ್ದ ಬೆಂಗಳೂರಿನ ಟೆಕ್ಕಿಯೊಬ್ಬರು ನಿಗೂಢವಾಗಿ ನಾಪತ್ತೆಯಾಗಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

ನಾಪತ್ತೆಯಾಗಿರುವ ಟೆಕ್ಕಿಯನ್ನು ಬೆಂಗಳೂರಿನ 31 ವರ್ಷದ ಅದ್ವೈತ್ ಉಪಾಧ್ಯಾಯ ಎಂದು ಗುರುತಿಸಲಾಗಿದ್ದು, ನಿನ್ನೆ ಬೆಳಗ್ಗೆಯಿಂದ ಕಾಣೆಯಾಗಿದ್ದಾರೆ. ಅವರ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿರುವುದರಿಂದ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಶುಕ್ರವಾರ ಬೆಳಗ್ಗೆ ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್‌ಗೆ ಬಂದಿದ್ದ ಅದ್ವೈತ್, ಬೆಟ್ಟದ ಪಾರ್ಕಿಂಗ್‌ನಲ್ಲಿ ಬುಲೆಟ್ ಬೈಕ್ ಪಾರ್ಕ್ ಮಾಡಿ ಬೆಟ್ಟ ಏರಿದ ನಂತರ ನಾಪತ್ತೆಯಾಗಿದ್ದಾರೆ.

ಈ ಸಂಬಂಧ ವೈಟ್‌ಫೀಲ್ಡ್ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದ್ದು, ಶಿವಗಂಗೆ ಬೆಟ್ಟದ ಶಾಂತಲಾ ಡ್ರಾಪ್‌ನಲ್ಲಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ. ಡ್ರೋನ್ ಕ್ಯಾಮೆರಾ ಬಿಟ್ಟು ಪರಿಶೀಲನೆ ನಡೆಸಲಾಗುತ್ತಿದೆ.

ಶಿವಗಂಗೆ ಬೆಟ್ಟ ಸಮುದ್ರದ ಮಟ್ಟದಿಂದ 4,800 ಅಡಿ ಎತ್ತರದಲ್ಲಿದೆ. ಅಪಾಯಕಾರಿ ರೀತಿಯಲ್ಲಿ ಶಾಂತಲಾ ಡ್ರಾಪ್ ಇದೆ. ಮರಗಿಡಗಳು ಕಲ್ಲು ಬಂಡೆಗಳಿಂದ ಕೂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಒಪ್ಪಂದಕ್ಕೆ ಬನ್ನಿ, ಇಲ್ಲವೇ ನರಕಕ್ಕೆ ಹೋಗಿ': ವಿಶ್ವಸಂಸ್ಥೆಯಲ್ಲಿ Iran ವಿರುದ್ಧ Trump ಗುಡುಗು; India-Pak ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಚಾರ..!

ಆರ್ಥಿಕ ಸಂಕಷ್ಟದಲ್ಲಿ ರಾಜ್ಯ ಸರ್ಕಾರ: ಯಾವ ಯೋಜನೆ ಕೈಬಿಡಬೇಕು, ಯಾವುದು ಜಾರಿಗೆ ತರಬೇಕೆಂಬುದು ನನಗೆ ಗೊತ್ತು; ಹಣಕಾಸು ಇಲಾಖೆ ಸಲಹೆ ಬೆನ್ನಲ್ಲೇ ಡಿಕೆಶಿ ಸ್ಪಷ್ಟನೆ

ನ್ಯೂನತೆಗಳನ್ನು ಸರಿಪಡಿಸಲು ಕಸ್ತೂರಿರಂಗನ್ ವರದಿಯ ವ್ಯಾಪ್ತಿಗೆ ಬರುವ ಪ್ರದೇಶಗಳಲ್ಲಿ ಭೌತಿಕ ಪರಿಶೀಲನೆ: ಸಿಎಂ ಶಿವಕುಮಾರ್

ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ: 'ಉದರನಿಮಿತ್ತಂ ಬಹುಕೃತ ವೇಷಂ' ಕರ್ನಾಟಕ ನನ್ನ ಕರ್ಮ ಭೂಮಿ- ಅನಂತ್ ನಾಗ್ ಭಾವುಕ ಮಾತು!

ರಾಜ್ಯದಲ್ಲಿ ಬರಪೀಡಿತ ತಾಲೂಕುಗಳ ಸಂಖ್ಯೆ 177ಕ್ಕೆ ಏರಿಕೆ!