ಕರ್ನಾಟಕ ಲೋಕಸೇವಾ ಆಯೋಗ (KPSC) Online Desk
ರಾಜ್ಯ

ಸಂದರ್ಶನಕ್ಕೆ ಆಯ್ಕೆಯಾದ ಅಭ್ಯರ್ಥಿಗಳ ಮಾಹಿತಿ ಸೋರಿಕೆ: KPSCಯ ಇಬ್ಬರು ಸಿಬ್ಬಂದಿ ಬಂಧನ

1:3 ಅನುಪಾತದ ಅರ್ಹತಾ ಪಟ್ಟಿಯಲ್ಲಿದ್ದ ಅಭ್ಯರ್ಥಿಗಳ ಮೊಬೈಲ್ ಸಂಖ್ಯೆ ಹಾಗೂ ಇತರ ವಿವರಗಳನ್ನು ಆಯೋಗದ ಒಳಗಿನಿಂದಲೇ ಮಧ್ಯವರ್ತಿಗಳಿಗೆ ಒದಗಿಸಲಾಗಿರುವುದು ತನಿಖೆಯಲ್ಲಿ ಪತ್ತೆಯಾಗಿದೆ.

ಬೆಂಗಳೂರು: ಸದಾ ಅಕ್ರಮಗಳಿಂದಲೇ ಸದ್ದು ಮಾಡುವ ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ ಸಿ)ದ ನೇಮಕಾತಿ ಪ್ರಕ್ರಿಯೆಯಲ್ಲಿ ಈಗ ಮತ್ತೊಂದು ಗಂಭೀರ ಅಕ್ರಮ ಬೆಳಕಿಗೆ ಬಂದಿದ್ದು, ಸಂದರ್ಶನಕ್ಕೆ ಆಯ್ಕೆಯಾದ ಅಭ್ಯರ್ಥಿಗಳ ಮಾಹಿತಿ ಸೋರಿಕೆ ಮಾಡಿದ ಆರೋಪದ ಮೇಲೆ ಇಬ್ಬರು ಸಿಬ್ಬಂದಿಯನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಜಲಸಂಪನ್ಮೂಲ ಇಲಾಖೆಯ ಕಿರಿಯ ಎಂಜಿನಿಯರ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ 1:3 ಅನುಪಾತದ ಅರ್ಹತಾ ಪಟ್ಟಿಯಲ್ಲಿದ್ದ ಅಭ್ಯರ್ಥಿಗಳ ಮೊಬೈಲ್ ಸಂಖ್ಯೆ ಹಾಗೂ ಇತರ ವಿವರಗಳನ್ನು ಆಯೋಗದ ಒಳಗಿನಿಂದಲೇ ಮಧ್ಯವರ್ತಿಗಳಿಗೆ ಒದಗಿಸಲಾಗಿರುವುದು ತನಿಖೆಯಲ್ಲಿ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಕೆಪಿಎಸ್ ಸಿಯ ತಾಂತ್ರಿಕ ಸಹಾಯಕ ಶರಣಪ್ಪ ಅಡವಳ್ಳಿ ಮತ್ತು ಹಿರಿಯ ಸಹಾಯಕ ಸ್ವಾಮಿದಾಸ್ ಅವರನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸಲಾಗುತ್ತಿದೆ.

ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆಯುತ್ತಿದೆ ಎಂದು ಆರೋಪಿಸಿ ಕೆಲವು ಅಭ್ಯರ್ಥಿಗಳು ಆಯೋಗಕ್ಕೆ ದೂರು ನೀಡಿದ್ದರು. ಮಧ್ಯವರ್ತಿಗಳು ಕರೆ ಮಾಡಿ, “ನಾವು ಆಯೋಗದವರೇ, ಲಕ್ಷಾಂತರ ರೂಪಾಯಿ ನೀಡಿದರೆ ಉದ್ಯೋಗ ಖಚಿತ” ಎಂದು ಹೇಳಿರುವ ಆಡಿಯೋ ಹಾಗೂ ವಾಟ್ಸ್‌ಆಪ್ ದಾಖಲೆಗಳನ್ನು ಅವರು ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಆಯೋಗದ ಸಹಾಯಕ ಕಾರ್ಯದರ್ಶಿ ಬಿ.ಎನ್. ಶೋಭಾ ಅವರು ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ದೂರು ಆಧರಿಸಿ ತನಿಖೆ ಆರಂಭಿಸಿದ ಪೊಲೀಸರು ಮೊದಲ ಹಂತದಲ್ಲಿ ಮೂವರು ಮಧ್ಯವರ್ತಿಗಳನ್ನು ಬಂಧಿಸಿದ್ದರು. ಅವರ ವಿಚಾರಣೆ ವೇಳೆ ಮತ್ತೊಬ್ಬ ಆರೋಪಿಯ ಹೆಸರು ಬಹಿರಂಗವಾಗಿದ್ದು, ಬಳಿಕ ಅವರನ್ನೂ ವಶಕ್ಕೆ ಪಡೆಯಲಾಗಿದೆ. ಬಂಧಿತರ ಮಾಹಿತಿ ಆಧರಿಸಿ ಆಯೋಗದ ಒಳಗಿನಿಂದಲೇ ಮಾಹಿತಿ ಸೋರಿಕೆಯಾಗಿರುವುದು ಸ್ಪಷ್ಟವಾಗಿದ್ದು, ಇಬ್ಬರು ಸಿಬ್ಬಂದಿಯನ್ನು ಬಂಧಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಅಮಾಯಕ ಜೀವ ಬಲಿಯಾಗುತ್ತಿವೆ, ಇದು ಸಂಪೂರ್ಣ ಅಸಮರ್ಥನೀಯ’; ಹಡಗು, ನಾವಿಕರ ಮೇಲಿನ ದಾಳಿ ಖಂಡಿಸಿದ EAM Jaishankar

'ಭಯೋತ್ಪಾದಕ ದೇಶ ಕೂಡ ಪ್ರಶ್ನೆ ಕೇಳುತ್ತಿದೆ': ಪಾಕ್ ಪತ್ರಕರ್ತನ ಬೆವರಿಳಿಸಿದ ಎಸ್ ಜೈಶಂಕರ್! Video

ಜಂತರ್ ಮಂತರ್ ಪ್ರತಿಭಟನೆ: ಮಹಿಳೆಯ ಮಾರ್ಫ್ ಮಾಡಿದ ಚಿತ್ರ ತೆಗೆದುಹಾಕಲು Metaಗೆ ಹೈಕೋರ್ಟ್ ಸೂಚನೆ; CJP ನಾಯಕರಿಗೆ ನೋಟಿಸ್

Asian Games 2026: ಅಥ್ಲೆಟಿಕ್ಸ್‌ನಲ್ಲಿ ಭಾರತಕ್ಕೆ ಮೂರು ಪದಕ; ಬರಾನಿಕಾ ಎಲಂಗೋವನ್‌ ಐತಿಹಾಸಿಕ ಸಾಧನೆ

ಆಪರೇಷನ್ ಸಿಂಧೂರ್ ಎಫೆಕ್ಟ್: ಬ್ರಹ್ಮೋಸ್ ಕ್ಷಿಪಣಿ ಅಂದಾಕ್ಷಣ ಪಾಕಿಸ್ತಾನ ನಡುಗುತ್ತದೆ; ಗೃಹ ಸಚಿವ ಅಮಿತ್ ಶಾ