ಡಿ ಕೆ ಶಿವಕುಮಾರ್  
ರಾಜ್ಯ

ಒತ್ತಡವಿಲ್ಲ, ನಿಮ್ಮ ಇಚ್ಛೆಯಿದ್ದರೆ ಜಮೀನು ನೀಡಿ, ಪ್ರತಿ ಎಕರೆಗೆ 3 ಕೋಟಿ ರೂ ಪರಿಹಾರ ನೀಡುತ್ತೇವೆ: ಬಿಡದಿ ಟೌನ್ ಶಿಪ್ ಬಗ್ಗೆ CM ಡಿ ಕೆ ಶಿವಕುಮಾರ್-Video

ಬಿಡದಿ ಟೌನ್‌ಶಿಪ್‌ ವಿರೋಧಿಸಿ ಜೆಡಿಎಸ್‌ (JDS) ಪಾದಯಾತ್ರೆಗೆ ಮುಂದಾದ ಬೆನ್ನಲ್ಲೇ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಈ ಯೋಜನೆಯನ್ನು ಸಮರ್ಥಿಸಿ ಇಂದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ.

ಬೆಂಗಳೂರು: ಬಿಡದಿ ಭೂಸ್ವಾಧೀನ ಪ್ರಕ್ರಿಯೆಯನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ, ಮುಂದುವರಿಸುತ್ತಿದ್ದೇವೆ, ರೈತರು ಜಮೀನು ನೀಡುವುದು ಸಂಪೂರ್ಣವಾಗಿ ಐಚ್ಛಿಕವಾಗಿದ್ದು, ಯೋಜನೆಗೆ ಜಮೀನು ನೀಡಲು ಇಷ್ಟವಿಲ್ಲದ ಯಾರ ಮೇಲೆಯೂ ಒತ್ತಡ ಹೇರುವುದಿಲ್ಲ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಹೇಳಿದ್ದಾರೆ.

ಬಿಡದಿ ಟೌನ್‌ಶಿಪ್‌ ವಿರೋಧಿಸಿ ಜೆಡಿಎಸ್‌ (JDS) ಪಾದಯಾತ್ರೆಗೆ ಮುಂದಾದ ಬೆನ್ನಲ್ಲೇ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಈ ಯೋಜನೆಯನ್ನು ಸಮರ್ಥಿಸಿ ಇಂದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ.

ಬಹಳ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಬಿಡದಿ ಟೌನ್‌ಶಿಪ್‌ ಯೋಜನೆಗೆ (Bidadi Township Project) ಮರುಜೀವ ನೀಡಲಾಗುತ್ತಿದ್ದು, ಇದನ್ನು ವಿಶ್ವದರ್ಜೆಯ ರಸ್ತೆಗಳು, ಮೆಟ್ರೋ ಸಂಪರ್ಕ, ಅತ್ಯಾಧುನಿಕ ಕ್ರೀಡಾಂಗಣ, ಉದ್ಯಾನವನ ಹಾಗೂ ಸುಸಜ್ಜಿತ ವಸತಿ ಒಳಗೊಂಡ ಅತ್ಯಾಧುನಿಕ ಎಐ ಸಿಟಿಯಾಗಿ ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಡಿಯಲ್ಲಿ ಕೈಗೆತ್ತಿಕೊಳ್ಳಲಾಗಿರುವ ಈ ಬೃಹತ್ ಯೋಜನೆ ಬೆಂಗಳೂರು ದಕ್ಷಿಣ ಜಿಲ್ಲೆಯ ಚಿತ್ರಣವನ್ನೇ ಬದಲಿಸಲಿದೆ. ರೈತರ ಹಿತರಕ್ಷಣೆ ನಮ್ಮ ಪ್ರಮುಖ ಆದ್ಯತೆಯಾಗಿದೆ. ಹಿಂದಿನ ಸರ್ಕಾರ ಎಕರೆಗೆ ಕೇವಲ 25 ಲಕ್ಷ ರೂ. ನಿಗದಿಪಡಿಸಿದ್ದರೆ, ನಮ್ಮ ಸರ್ಕಾರ ಪ್ರತಿ ಎಕರೆಗೆ 3 ಕೋಟಿ ರೂ.ಗೂ ಹೆಚ್ಚು ಪರಿಹಾರ ನೀಡಲು ತೀರ್ಮಾನಿಸಿದೆ. ಹಣದ ಬದಲಾಗಿ ಭೂಮಿ ಬಯಸುವ ರೈತರಿಗೆ 50 ಶೇಕಡಾ ಅಭಿವೃದ್ಧಿಪಡಿಸಿದ ಜಾಗವನ್ನು ನೀಡುತ್ತೇವೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಯುವಜನತೆಗೆ ಅಪಾರ ಉದ್ಯೋಗಾವಕಾಶ ಸೃಷ್ಟಿಸಿ, ನಮ್ಮ ಅನ್ನದಾತರಿಗೆ ಗೌರವಯುತ ಜೀವನ ಒದಗಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಯೋಜನೆಯನ್ನು ಸಮರ್ಥಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕೋಮಾ ಸ್ಥಿತಿಯಲ್ಲಿ ಇರಾನ್‌ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ? ವದಂತಿ ಬೆನ್ನಲ್ಲೇ ದಿಢೀರ್ Video ಬಿಡುಗಡೆ ಮಾಡಿದ ಇರಾನ್; ಸತ್ಯ ಮುಚ್ಚಿಡುವ ಯತ್ನವೇ..?

ಇಡೀ ದೇಹಕ್ಕೆ ಹರಡಿದ cancer, Joe Biden ಆರೋಗ್ಯ ಮತ್ತಷ್ಟು ಕ್ಷೀಣ; BBC ಸಂದರ್ಶನದಲ್ಲಿ ಪುತ್ರ ಹಂಟರ್ ಕಳವಳ

ಭಾರತ-ಅಮೆರಿಕ ಸಂಬಂಧಗಳಿಗೆ ಹೊಸ ವೇಗ: ಪ್ರಧಾನಿ ಮೋದಿಗೆ ವ್ಯಾನ್ಸ್ ಕರೆ

KBC ವೇದಿಕೆಯಲ್ಲಿ ಆಮಿರ್ ಖಾನ್‌; ‘4ನೇ ಮದುವೆ ಯಾವಾಗ?’; ಕಾಲೆಳೆದ ನೆಟ್ಟಿಗರು, Amitabh bachchan ಶೋ Promoಗೆ ಕಮೆಂಟ್‌ಗಳ ಮಹಾಪೂರ..!

40 ಕೋಟಿ ಯುವಕರು ದೇಶದ ನಿಜವಾದ ಶಕ್ತಿ, ಆದರೆ ನಿರುದ್ಯೋಗ ತಾಂಡವವಾಡುತ್ತಿದೆ: ಉತ್ತರಪ್ರದೇಶದಲ್ಲಿ ರಾಹುಲ್ ಗಾಂಧಿ