ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸಿಎಂ ಡಿಕೆ ಶಿವಕುಮಾರ್ ಮತ್ತಿತರರು 
ರಾಜ್ಯ

ಕರ್ನಾಟಕ ಹೈಕೋರ್ಟ್: 6 ನೂತನ ಹೆಚ್ಚುವರಿ ನ್ಯಾಯಾಧೀಶರ ಪ್ರಮಾಣವಚನ ಸ್ವೀಕಾರ!

ಲೋಕಭವನದ ಗ್ಲಾಸ್ ಹೌಸ್‌ನಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಎಲ್ಲರಿಗೂ ಪ್ರಮಾಣ ವಚನ ಬೋಧಿಸಿದರು.

ಬೆಂಗಳೂರು: ರಾಜ್ಯ ಹೈಕೋರ್ಟ್ ನ ಹೆಚ್ಚುವರಿ ನ್ಯಾಯಾಧೀಶರಾಗಿ ಆರು ಜನ ವಕೀಲರು ಭಾನುವಾರ ಪ್ರಮಾಣ ವಚನ ಸ್ವೀಕರಿಸಿದರು.

ಲೋಕಭವನದ ಗ್ಲಾಸ್ ಹೌಸ್‌ನಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಎಲ್ಲರಿಗೂ ಪ್ರಮಾಣ ವಚನ ಬೋಧಿಸಿದರು.

ರಾಘವೇಂದ್ರ ಸೀತಾರಾಮ್ ಶ್ರೀವತ್ಸ, ಹೇಮ ಕುಲಕರ್ಣಿ, ​ಸುಬ್ರಹ್ಮಣ್ಯ ರಂಗರಾವ್, ತಡಗವಾಡಿ ಪ್ರಕಾಶ್ ವಿವೇಕಾನಂದ, ಲಕ್ಷ್ಮೇಶ್ವರ ಪ್ರಮೋದ್ ​ಮತ್ತು ಹೊಂಬೇಗೌಡ ಶಾಂತಿ ಭೂಷಣ್ ಅವರು ನೂತನ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದರೊಂದಿಗೆ ಹೈಕೋರ್ಟ್ ನ್ಯಾಯಮೂರ್ತಿಗಳ ಸಂಖ್ಯೆ ಈಗ 57ಕ್ಕೆ ಏರಿಕೆಯಾಯಿತು.

ಈ ಸಮಾರಂಭದಲ್ಲಿ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾದ ವಿಭು ಬಖ್ರು, ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಹಲವು ಗಣ್ಯರು, ನ್ಯಾಯಾಂಗ ಕ್ಷೇತ್ರದ ಹಿರಿಯ ಅಧಿಕಾರಿಗಳು ಮತ್ತು ಆಹ್ವಾನಿತರು ಉಪಸ್ಥಿತರಿದ್ದರು.​

ಪ್ರಮಾಣ ವಚನ ಸ್ವೀಕರಿಸಿದ ನೂತನ ನ್ಯಾಯಮೂರ್ತಿಗಳಿಗೆ ರಾಜ್ಯಪಾಲರು ಹಾಗೂ ಆಗಮಿಸಿದ್ದ ಗಣ್ಯರು ಶುಭ ಕೋರಿ ಅಭಿನಂದನೆ ಸಲ್ಲಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

JPSC-PT ರದ್ದುಗೊಳಿಸಲು ಜಾರ್ಖಂಡ್ ಸರ್ಕಾರ ಒಪ್ಪಿದ್ರೂ 6ನೇ ಸುತ್ತಿನ ಮಾತುಕತೆ ವಿಫಲ, ಪ್ರತಿಭಟನೆ ಮುಂದುವರಿಕೆ!

"ಹಮಾಸ್ ನಿಶ್ಯಸ್ತ್ರಗೊಳಿಸುದೇ ಅಂತಿಮ ಗುರಿ": ಟ್ರಂಪ್ ಗಾಜಾ ಶಾಂತಿ ಯೋಜನೆ ತಿರಸ್ಕರಿಸಿದ ಇಸ್ರೇಲ್!

ಪಾಕಿಸ್ತಾನಿಗಳು ಭಾರತೀಯರ ಹೃದಯ ವೈರಿಗಳಲ್ಲ: RSS ಮುಖ್ಯಸ್ಥ ಮೋಹನ್ ಭಾಗವತ್

ರಷ್ಯಾ-ಭಾರತ ನಡುವೆ ನೇರ ರೈಲು ಸಂಪರ್ಕ? ರಷ್ಯಾದಿಂದ ಮಹತ್ವದ ಪ್ರಸ್ತಾವನೆ!

ರಸಪ್ರಶ್ನೆ ಸ್ಪರ್ಧೆಯಲ್ಲಿ ವಿ.ಡಿ. ಸಾವರ್ಕರ್ ಹೊಗಳಿದ ಪ್ರಶ್ನೆ! ಕೇರಳದ ಶಿಕ್ಷಕ ಅಮಾನತು!