ಕೊಲೆಗಾತಿ ಪತ್ನಿ, ಪ್ರಿಯಕರ ಹಾಗೂ ಹತ್ಯೆಗೀಡಾದ ಪತಿ 
ರಾಜ್ಯ

ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನ ಕೊಲೆ: ಆರು ತಿಂಗಳ ಬಳಿಕ ಕೊಲೆಗಾತಿ ಪತ್ನಿ, ಪ್ರಿಯಕರನ ಬಂಧನ!

ಮೃತರನ್ನು ರಾಘು ಗಾವಡೆ (40) ಎಂದು ಗುರುತಿಸಲಾಗಿದೆ. ಕುರಿ ಕಾಯುವ ಕೆಲಸ ಮಾಡಿಕೊಂಡಿದ್ದ ಇವರನ್ನು ಸಂಚು ರೂಪಿಸಿ ಆತನ ಹೆಂಡತಿ ಬಂಗಾರಿ ಗಾವಡೆ ಹಾಗೂ ರಾಮಾ ರಾಣ ಹೊಲಕ್ಕೆ ಕರೆಸಿಕೊಂಡು, ಹತ್ಯೆ ಮಾಡಿದ್ದು, ಬಳಿಕ ಶವವನ್ನು ಸಾಗಿಸಿರುವುದಾಗಿ ತನಿಖೆಯಲ್ಲಿ ತಿಳಿದುಬಂದಿದೆ

ಚಿಕ್ಕೋಡಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನನ್ನು ಕೊಲೆಗೈದು ಕಥೆ ಕಟ್ಟಿದ್ದ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು 6 ತಿಂಗಳ ಬಳಿಕ ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲೆ ಚಿಕ್ಕೋಡಿಯಲ್ಲಿ ಈ ಘಟನೆ ನಡೆದಿದೆ.

ಮೃತರನ್ನು ರಾಘು ಗಾವಡೆ (40) ಎಂದು ಗುರುತಿಸಲಾಗಿದೆ. ಕುರಿ ಕಾಯುವ ಕೆಲಸ ಮಾಡಿಕೊಂಡಿದ್ದ ಇವರನ್ನು ಸಂಚು ರೂಪಿಸಿ ಆತನ ಹೆಂಡತಿ ಬಂಗಾರಿ ಗಾವಡೆ ಹಾಗೂ ರಾಮಾ ರಾಣ ಹೊಲಕ್ಕೆ ಕರೆಸಿಕೊಂಡು, ಹತ್ಯೆ ಮಾಡಿದ್ದು, ಬಳಿಕ ಶವವನ್ನು ಸಾಗಿಸಿರುವುದಾಗಿ ತನಿಖೆಯಲ್ಲಿ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹತ್ಯೆ ಬಳಿಕ ಪತಿ ಕುರಿ ಕಾಯಲು ಬೇರೆ ಜಿಲ್ಲೆಗೆ ತೆರಳಿದ್ದಾನೆ ಎಂದು ಪತ್ನಿ ಕುಟುಂಬಸ್ಥರನ್ನು ನಂಬಿಸಿದ್ದಳು. ಇದರಿಂದಾಗಿ ಆರಂಭದಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು.

ಮೃತ ರಾಘು ಅವರ ಸಹೋದರ ನೀಡಿದ ದೂರಿನ ಆಧಾರದ ಮೇಲೆ ತನಿಖೆ ನಡೆಸಿದ ಪೊಲೀಸರು, ಪ್ರಕರಣದ ನಿಜವಾದ ಸತ್ಯವನ್ನು ಪತ್ತೆ ಹಚ್ಚಿದ್ದಾರೆ.

ಆರೋಪಿ ರಾಘು ಗಾವಡೆ ಸಹೋದರ ಸಂಬಂಧಿಯಾಗಿದ್ದ. ಆತನ ಜೊತೆ ಆರೋಪಿ ಬಂಗಾರಿ ಅಕ್ರಮ ಸಂಬಂಧ ಹೊಂದಿದ್ದಳು. ಇದಕ್ಕೆ ಅಡ್ಡಿಯಾಗಿದ್ದ ಗಂಡನನ್ನು ಇಬ್ಬರು ಸೇರಿ ಹತ್ಯೆ ಮಾಡಿದ್ದರು ಎಂಬುದು ಆರೋಪಿಗಳ ವಿಚಾರಣೆ ವೇಳೆ ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಿವಿ ಘಟಿಕೋತ್ಸವಕ್ಕೆ CJI ಸೂರ್ಯಕಾಂತ್ ಗೆ ಆಹ್ವಾನ: ಅವರಿಂದ ಪದವಿಪತ್ರ ಸ್ವೀಕರಿಸಲ್ಲ ಎಂದ NALSAR ವಿದ್ಯಾರ್ಥಿಗಳು!

"ಹಮಾಸ್ ನಿಶ್ಯಸ್ತ್ರಗೊಳಿಸುದೇ ಅಂತಿಮ ಗುರಿ": ಟ್ರಂಪ್ ಗಾಜಾ ಶಾಂತಿ ಯೋಜನೆ ತಿರಸ್ಕರಿಸಿದ ಇಸ್ರೇಲ್!

ಪಾಕ್ ನಲ್ಲಿ ಮತ್ತೆ 'ದುರಂಧರ್' ಆಟ: ಲಷ್ಕರ್ ಕಮಾಂಡರ್ ನಿಗೂಢ ಸಾವು, ಊಟ ಮಾಡಿ ಮಸೀದಿ ಬಳಿ ಕುಸಿದು ಬಿದ್ದ Qari Saeed Abdul Aziz

ಅಮೆರಿಕದ ಜೊತೆ ನೇರ ಮಾತುಕತೆ ಇಲ್ಲ: ಇರಾನ್ ವಿದೇಶಾಂಗ ಸಚಿವ ಅರಾಘ್ಚಿ ಸ್ಪಷ್ಟನೆ

ಬಾರಾಮತಿಯಲ್ಲಿ ಮತ್ತೆ ತರಬೇತಿ ವಿಮಾನ ಪತನ; ಅಜಿತ್ ಪವಾರ್ ದುರಂತದ ಬಳಿಕ 2ನೇ ಘಟನೆ