ಶಿವಮೊಗ್ಗ: ಶಿವಮೊಗ್ಗದ ತಮ್ಮಡಿಹಳ್ಳಿಯ ಸರ್ಕಾರಿ ಪ್ರೌಢಶಾಲೆಯಲ್ಲಿ SSLC ವಿದ್ಯಾರ್ಥಿಯೊಬ್ಬ ಏಕಾಏಕಿ ಕುಸಿದುಬಿದ್ದು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಮೃತ ವಿದ್ಯಾರ್ಥಿಯನ್ನು 15 ವರ್ಷದ ಜಿ.ಕೆ ವಿನಯ್ ಎಂದು ಗುರುತಿಸಲಾಗಿದೆ. ಸದ್ಯ ವಿನಯ್ ಸಾವಿನ ಬಗ್ಗೆ ಪೋಷಕರು ಅನುಮಾನ ವ್ಯಕ್ತಪಡಿಸಿದ್ದಾರೆ.
ಶಾಲೆಯಲ್ಲಿ ಇಂದು ಕೆಲವರು ಚೆಸ್ ಆಡುತ್ತಿರುವುದನ್ನು ವಿನಯ್ ನೋಡುತ್ತ ನಿಂತಿದ್ದನು. ಆದರೆ ಅದೇನಾಯಿತು ದಿಢೀರ್ ಅಂತ ಕುಸಿದು ಬಿದ್ದಿದ್ದು ಕೂಡಲೇ ಶಿಕ್ಷಕರು ವಿನಯ್ ನನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಆತನ ಸ್ಥಿತಿ ಗಂಭೀರವಾಗಿದ್ದರಿಂದ ಪಿಹೆಚ್ಸಿ ಆಸ್ಪತ್ರೆಯಿಂದ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ. ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.