ಸಿಲಿಕಾನ್ ಸಿಟಿಯಲ್ಲಿ ಹಸುಗಳಿಂದ ಟ್ರಾಫಿಕ್ ಜ್ಯಾಮ್! Online Desk
ರಾಜ್ಯ

ಸಿಲಿಕಾನ್ ಸಿಟಿಯಲ್ಲಿ ಹಸುಗಳಿಂದ ಟ್ರಾಫಿಕ್ ಜ್ಯಾಮ್! ಬಿಡಾಡಿ ದನಗಳ ಮಾಲೀಕನ ಮೇಲೆ FIR

ಬೆಂಗಳೂರಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ರಸ್ತೆಯಲ್ಲಿ ಹಸುಗಳು ರಸ್ತೆಗೆ ಬಂದಿದ್ದರಿಂದ ತೀವ್ರ ಟ್ರಾಫಿಕ್ ಜಾಮ್ ಉಂಟಾಗಿದ್ದು, ಈ ಹಿನ್ನೆಲೆಯಲ್ಲಿ ಹಸುಗಳ ಮಾಲೀಕನ ವಿರುದ್ಧ ಏರ್‌ಪೋರ್ಟ್ ಸಂಚಾರ ಪೊಲೀಸ್ ಠಾಣೆಯಲ್ಲಿ FIR ದಾಖಲಿಸಲಾಗಿದೆ. ಆ ಕುರಿತ ವರದಿ ಇಲ್ಲಿದೆ:

ಬೆಂಗಳೂರು: ಬೆಂಗಳೂರು ಭಾರತದಲ್ಲೇ ಅತಿ ಹೆಚ್ಚು ಟ್ರಾಫಿಕ್ ಜಾಮ್ ಎದುರಿಸುತ್ತಿರುವ ನಗರ ಹಾಗೂ ಜಾಗತಿಕ ಮಟ್ಟದಲ್ಲಿಯೂ ಎರಡನೇ ಸ್ಥಾನದಲ್ಲಿದೆ. ಅದರಲ್ಲೂ, ಇತ್ತೀಚಿನ ವರದಿಗಳ ಪ್ರಕಾರ, ಸಿಲಿಕಾನ್ ಸಿಟಿಯಲ್ಲಿ ವಾಹನ ಸವಾರರು ಕೇವಲ 10 ಕಿಲೋಮೀಟರ್ ದೂರ ಪ್ರಯಾಣಿಸಲು ಸರಾಸರಿ 35 ರಿಂದ 36 ನಿಮಿಷಗಳಿಗಿಂತ ಹೆಚ್ಚು ಕಾಲ ಬೇಕು ಎನ್ನಲಾಗಿದೆ. ಹೀಗೆಯೇ, ನಿನ್ನೆ ಕೂಡ ಬೆಂಗಳೂರಿನ ಹೃದಯಭಾಗದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಆದ್ರೆ, ಈ ಬಾರಿ ಟ್ರಾಫಿಕ್ ಜಾಮ್ ಗೆ ಕಾರಣವಾಗಿದ್ದು ಯಾವುದೊ ವಾಹನವಲ್ಲ, ಬದಲಾಗಿ ಹಸುಗಳು! ಆಮೇಲೆ ಏನಾಯಿತು ಗೊತ್ತಾ? ಆ ಕುರಿತ ವರದಿ ಇಲ್ಲಿದೆ:

ಏನಿದು ಘಟನೆ?

ಆಗಸ್ಟ್​​ 10ರ ಬೆಳಿಗ್ಗೆ ಮಾರತಹಳ್ಳಿ ಮತ್ತು HAL ವಿಮಾನ ನಿಲ್ದಾಣದ ಬಳಿಯ ಕಲಾಮಂದಿರದ ಮುಖ್ಯ ರಸ್ತೆಯಲ್ಲಿ ಮಾಲೀಕರಿಲ್ಲದೆ ಬಿಟ್ಟಿದ್ದ ದನಗಳು ರಸ್ತೆಯ ಮಧ್ಯದಲ್ಲಿ ಬಂದು ನಿಂತಿದ್ದವು. ಇದರಿಂದಾಗಿ ಐಟಿ ಕಾರಿಡಾರ್‌ಗೆ ಸಂಪರ್ಕಿಸುವ ಅತ್ಯಂತ ಬ್ಯುಸಿ ರಸ್ತೆಯಾದ ಹೊರ ವರ್ತುಲ ರಸ್ತೆಯಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟಾಯಿತು. ಅದರಂತೆ, ವಾಹನ ಸವಾರರು ಗಂಟೆಗಟ್ಟಲೆ ಸಂಚಾರ ದಟ್ಟಣೆಯಲ್ಲಿ ಸಿಲುಕಿಕೊಳ್ಳಬೇಕಾಯಿತು.

ಪೊಲೀಸರಿಂದ ಕಠಿಣ ಕಾನೂನು ಕ್ರಮ!

ಸಾರ್ವಜನಿಕರ ಮುಕ್ತ ಸಂಚಾರಕ್ಕೆ ಅಡ್ಡಿಪಡಿಸಿದ ಮತ್ತು ಜೀವಕ್ಕೆ ಅಪಾಯ ತಂದೊಡ್ಡಿದ ಆರೋಪದ ಮೇಲೆ, ಮಾರತ್ತಹಳ್ಳಿಯ ಅಶ್ವಥನಗರ ನಿವಾಸಿಯಾಗಿರುವ, ಹಸುಗಳ ಮಾಲೀಕ 40 ವರ್ಷದ ಸಂತೋಷ್ ಇ. ಎಂಬುವವರ ವಿರುದ್ಧ HAL ಏರ್‌ಪೋರ್ಟ್ ಸಂಚಾರಿ ಪೊಲೀಸರು ಸ್ವಯಂಪ್ರೇರಿತ FIR ದಾಖಲಿಸಿದ್ದಾರೆ. ಸಾರ್ವಜನಿಕ ರಸ್ತೆಯಲ್ಲಿ ಅಡಚಣೆ ಮತ್ತು ಅಪಾಯ ಉಂಟುಮಾಡಿದ್ದಕ್ಕಾಗಿ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 285 ರ ಅಡಿಯಲ್ಲಿ ಈ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜ್ಞಾನೇಶ್ ಕುಮಾರ್ ವಿರುದ್ಧ ದೆಹಲಿ, ಮುಂಬೈನಲ್ಲಿ ಬೃಹತ್ ಪ್ರತಿಭಟನೆ; 700 ಮಂದಿ ವಶಕ್ಕೆ

FlyDubai ಘಟನೆ ಹಿಂದೆ ಯಾವುದೇ ಶಕ್ತಿಯ ಕೈವಾಡವಿದ್ದರೂ ಡೋಂಟ್ ಕೇರ್; 'ಭಾರಿ ಬೆಲೆ' ತೆರಬೇಕಾಗುತ್ತೆ- ಇಸ್ರೇಲ್ ಪ್ರಧಾನಿ ನೆತನ್ಯಾಹು ಎಚ್ಚರಿಕೆ

ಬಿಹಾರ ಪ್ರವಾಹ: ವಾಯುಪಡೆಯ ಹೆಲಿಕಾಪ್ಟರ್‌ನಿಂದ ಪರಿಹಾರ ಸಾಮಗ್ರಿಯ ಪ್ಯಾಕೆಟ್ ಬಿದ್ದು ವೃದ್ಧ ಸಾವು!

Asian Games 2026: 44 ವರ್ಷಗಳ ಬರ ನೀಗಿಸಿದ ಮಹಿಳಾ ಪಡೆ; ಚೀನಾ ಮಣಿಸಿ ಚಿನ್ನ ಗೆದ್ದ ಭಾರತ!

CJP ಪ್ರತಿಭಟನೆಗೆ ಕೈಜೋಡಿಸಿದ ನಸೀರುದ್ದೀನ್ ಶಾ; ನಟನನ್ನು ಅಪ್ಪಿಕೊಂಡು ಕಣ್ಣೀರಿಟ್ಟ ಅಭಿಜೀತ್ ದೀಪ್ಕೆ; Video!