ಬೆಂಗಳೂರು: ಲೋಕಾಯುಕ್ತ ಅಧಿಕಾರಿಗಳು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕಚೇರಿ ಮೇಲೆ ದಾಳಿ ನಡೆಸಿ 1.5 ಲಕ್ಷ ರೂಪಾಯಿ ನಗದು ವಶಕ್ಕೆ ಪಡೆದಿದ್ದಾರೆ. ಉಪ ಲೋಕಾಯುಕ್ತರಾದ ನ್ಯಾಯಮೂರ್ತಿ ಬಿ. ವೀರಪ್ಪ ಮತ್ತು ತಂಡ ದಾಳಿ ನಡೆಸಿದ್ದು ಜಿಲ್ಲಾ ಖಜಾನಾಧಿಕಾರಿ ಪ್ರಭಾವತಿಯವರ ಬಳಿ 1.5 ಲಕ್ಷ ರೂಪಾಯಿ ನಗದು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.