ಕರ್ನಾಟಕದಲ್ಲಿ ಗುಟ್ಕಾ, ತಂಬಾಕು ಪಾನ್ ಮಸಾಲಾ ಬ್ಯಾನ್ 
ರಾಜ್ಯ

ಸರ್ಕಾರದಿಂದ ಮಹತ್ವದ ಆದೇಶ: ಕರ್ನಾಟಕದಲ್ಲಿ ಗುಟ್ಕಾ, ತಂಬಾಕು ಪಾನ್ ಮಸಾಲಾ ಬ್ಯಾನ್

ಪಾನ್ ಮಸಾಲಾದೊಂದಿಗೆ ಮಿಶ್ರಣ ಮಾಡಲು ಅನುಕೂಲವಾಗುವಂತೆ ಪ್ರತ್ಯೇಕವಾಗಿ ಪ್ಯಾಕ್ ಮಾಡಿ ಮಾರಾಟ ಮಾಡುವ ತಂಬಾಕು ಉತ್ಪನ್ನಗಳಿಗೂ ಈ ನಿಷೇಧ ಅನ್ವಯವಾಗಲಿದೆ.

ಬೆಂಗಳೂರು: ಆಹಾರ ಸುರಕ್ಷತೆ ಮತ್ತು ಸಾರ್ವಜನಿಕ ಆರೋಗ್ಯದ ದೃಷ್ಟಿಯಿಂದ ಕರ್ನಾಟಕ ಸರ್ಕಾರ ಬುಧವಾರ ಮಹತ್ವದ ಆದೇಶ ಹೊರಡಿಸಿದ್ದು, ಪಾನ್ ಮಸಾಲಾ ಉತ್ಪನ್ನಗಳ ಮೇಲೆ ಒಂದು ವರ್ಷದ ನಿಷೇಧ ಹೇರಿದೆ.

ರಾಜ್ಯಾದ್ಯಂತ ಗುಟ್ಕಾ ಹಾಗೂ ತಂಬಾಕು ಅಥವಾ ನಿಕೋಟಿನ್ ಒಳಗೊಂಡ ಪಾನ್ ಮಸಾಲಾ ಉತ್ಪನ್ನಗಳ ಮೇಲೆ ಒಂದು ವರ್ಷದ ನಿಷೇಧ ಹೇರಲಾಗಿದ್ದು, ಗುಟ್ಕಾ ಹಾಗೂ ತಂಬಾಕು ಅಥವಾ ನಿಕೋಟಿನ್ ಒಳಗೊಂಡ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ, ದಾಸ್ತಾನು, ವಿತರಣೆ, ಸಾಗಣೆ ಮತ್ತು ಮಾರಾಟವನ್ನು ಆಹಾರ ಸುರಕ್ಷತಾ ಆಯುಕ್ತರು ನಿಷೇಧಿಸಿದ್ದಾರೆ.

ಇದಲ್ಲದೆ, ಪಾನ್ ಮಸಾಲಾದೊಂದಿಗೆ ಮಿಶ್ರಣ ಮಾಡಲು ಅನುಕೂಲವಾಗುವಂತೆ ಪ್ರತ್ಯೇಕವಾಗಿ ಪ್ಯಾಕ್ ಮಾಡಿ ಮಾರಾಟ ಮಾಡುವ ತಂಬಾಕು ಉತ್ಪನ್ನಗಳಿಗೂ ಈ ನಿಷೇಧ ಅನ್ವಯವಾಗಲಿದೆ.

ಈ ಕ್ರಮದಿಂದ ರಾಜ್ಯಾದ್ಯಂತ ಇಂತಹ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟಕ್ಕೆ ಒಂದು ವರ್ಷದ ಮಟ್ಟಿಗೆ ಸಂಪೂರ್ಣ ತಡೆ ಬೀಳಲಿದೆ. ಆದೇಶ ಉಲ್ಲಂಘಿಸುವ ತಯಾರಕರು, ವಿತರಕರು, ಚಿಲ್ಲರೆ ವ್ಯಾಪಾರಿಗಳು ಸೇರಿದಂತೆ ಸಂಬಂಧಪಟ್ಟವರ ವಿರುದ್ಧ ತಪಾಸಣೆ ನಡೆಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳು ಮುಂದಾಗುವ ನಿರೀಕ್ಷೆಯಿದೆ.

ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದಾದ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಬಳಕೆಯನ್ನು ನಿಯಂತ್ರಿಸುವ ಪ್ರಯತ್ನದ ಭಾಗವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಮಾರಾಟದ ಮೇಲಿನ ನಿಷೇಧ ಮತ್ತು ನಿರ್ಬಂಧಗಳು

“ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ, 2006ರ ಸೆಕ್ಷನ್ 30(2)(ಎ) ಹಾಗೂ ಆಹಾರ ಸುರಕ್ಷತೆ ಮತ್ತು ಗುಣಮಟ್ಟ (ಮಾರಾಟದ ಮೇಲಿನ ನಿಷೇಧ ಮತ್ತು ನಿರ್ಬಂಧಗಳು) ನಿಯಮಾವಳಿ, 2011ರ ನಿಯಮ 2.3.4ರ ಅಡಿಯಲ್ಲಿ ನೀಡಲಾಗಿರುವ ಅಧಿಕಾರವನ್ನು ಚಲಾಯಿಸಿ, ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ 10-08-2026ರಂದು ಸರ್ಕಾರದ ಅಧಿಸೂಚನೆ ಹೊರಡಿಸಿದೆ” ಎಂದು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಆಯುಕ್ತ ಕೆ. ಶ್ರೀನಿವಾಸ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಹೊಂದಿರುವ ಉತ್ಪನ್ನಗಳ ಮಾರಾಟ ಹಾಗೂ ವಿತರಣೆಯನ್ನು ಈ ಅಧಿಸೂಚನೆಯ ಮೂಲಕ ನಿಷೇಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ನಿಷೇಧಿತ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ತಯಾರಿಕೆ, ಮಾರಾಟ ಅಥವಾ ವಿತರಣೆ ನಡೆಯುತ್ತಿರುವುದು ಕಂಡುಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆ ಹಾಗೂ ಆರೋಗ್ಯಕರ ಮತ್ತು ವ್ಯಸನಮುಕ್ತ ಕರ್ನಾಟಕ ನಿರ್ಮಾಣಕ್ಕೆ ಸಹಕರಿಸುವಂತೆ ಇಲಾಖೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ.

ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಕರ್ನಾಟಕದಲ್ಲಿ ತಂಬಾಕು ಮತ್ತು/ಅಥವಾ ನಿಕೋಟಿನ್ ಹೊಂದಿರುವ ಉತ್ಪನ್ನಗಳ ಮಾರಾಟ ಹಾಗೂ ವಿತರಣೆಯನ್ನು ನಿಷೇಧಿಸಿ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಅಧಿಸೂಚನೆ ಹೊರಡಿಸಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

2026ರ ಆಗಸ್ಟ್ 10ರಂದು ಹೊರಡಿಸಿರುವ ಈ ಅಧಿಸೂಚನೆಯು ಜಾರಿಯಾದ ದಿನದಿಂದ ಒಂದು ವರ್ಷದವರೆಗೆ ರಾಜ್ಯಾದ್ಯಂತ ಜಾರಿಯಲ್ಲಿರಲಿದೆ ಎಂದು ಅವರು ತಿಳಿಸಿದ್ದಾರೆ.

ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಆಹಾರ ಸುರಕ್ಷತಾ ವಿಭಾಗವು ತಂಬಾಕು ಮತ್ತು/ಅಥವಾ ನಿಕೋಟಿನ್ ಹೊಂದಿರುವ ಉತ್ಪನ್ನಗಳ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆಹಾರ ಸುರಕ್ಷತಾ ಅಧಿಕಾರಿಗಳ ನೇತೃತ್ವದಲ್ಲಿ ವಿಶೇಷ ತಪಾಸಣೆ ಹಾಗೂ ಜಾರಿ ಕಾರ್ಯಾಚರಣೆಗಳನ್ನು ನಡೆಸಲಾಗುತ್ತಿದ್ದು, ಗುಟ್ಕಾ, ಪಾನ್ ಮಸಾಲಾ ಹಾಗೂ ತಂಬಾಕು ಮತ್ತು/ಅಥವಾ ನಿಕೋಟಿನ್ ಹೊಂದಿರುವ ಇತರ ನಿಷೇಧಿತ ಉತ್ಪನ್ನಗಳ ತಯಾರಿಕೆ, ದಾಸ್ತಾನು, ಸಾಗಣೆ, ವಿತರಣೆ ಮತ್ತು ಮಾರಾಟದ ಮೇಲೆ ನಿಗಾ ವಹಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

“ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ, 2006ರ ಸೆಕ್ಷನ್ 30(2)(ಎ) ಹಾಗೂ ಆಹಾರ ಸುರಕ್ಷತೆ ಮತ್ತು ಗುಣಮಟ್ಟ (ಮಾರಾಟದ ಮೇಲಿನ ನಿಷೇಧ ಮತ್ತು ನಿರ್ಬಂಧಗಳು) ನಿಯಮಾವಳಿ, 2011ರ ನಿಯಮ 2.3.4ರ ಅಡಿಯಲ್ಲಿ ನೀಡಲಾಗಿರುವ ಅಧಿಕಾರವನ್ನು ಚಲಾಯಿಸಿ, ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ 10-08-2026ರಂದು ಸರ್ಕಾರದ ಅಧಿಸೂಚನೆ ಹೊರಡಿಸಿದೆ” ಎಂದು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಆಯುಕ್ತ ಕೆ. ಶ್ರೀನಿವಾಸ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಹೊಂದಿರುವ ಉತ್ಪನ್ನಗಳ ಮಾರಾಟ ಹಾಗೂ ವಿತರಣೆಯನ್ನು ಈ ಅಧಿಸೂಚನೆಯ ಮೂಲಕ ನಿಷೇಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ನಿಷೇಧಿತ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ತಯಾರಿಕೆ, ಮಾರಾಟ ಅಥವಾ ವಿತರಣೆ ನಡೆಯುತ್ತಿರುವುದು ಕಂಡುಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆ ಹಾಗೂ ಆರೋಗ್ಯಕರ ಮತ್ತು ವ್ಯಸನಮುಕ್ತ ಕರ್ನಾಟಕ ನಿರ್ಮಾಣಕ್ಕೆ ಸಹಕರಿಸುವಂತೆ ಇಲಾಖೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

ಡಿಕೆ ಶಿವಕುಮಾರ್ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ: ಮುನಿಯಪ್ಪಗೆ ಸಮಾಜಕಲ್ಯಾಣ, ಜಮೀರ್ – ವಸತಿ ಖಾತೆ?

ಪರಪ್ಪನ ಅಗ್ರಹಾರ ಜೈಲಿನಲ್ಲೂ ಪ್ರಜ್ವಲ್ ರೇವಣ್ಣ ಬಳಿ ಮೊಬೈಲ್, ಪೆನ್‌ಡ್ರೈವ್ ಪತ್ತೆ: ಮಾಜಿ ಸಂಸದನ ವಿರುದ್ಧ ಕೇಸ್ ದಾಖಲು

ಮಳೆ ಕೊರತೆ, ಬಿತ್ತನೆ ವೈಫಲ್ಯ: ರಾಜ್ಯದಲ್ಲಿ 50 ಲಕ್ಷ ಟನ್ ಆಹಾರ ಧಾನ್ಯ ನಷ್ಟದ ಭೀತಿ

ಮಿಸ್ ಆಯ್ತು ಸಚಿವ ಸ್ಥಾನ; ‘ಶಕ್ತಿ ಪ್ರದರ್ಶನ’ಕ್ಕೆ ಸಜ್ಜಾದ ಸಿದ್ದರಾಮಯ್ಯ ಆಪ್ತರು! ಮೈಸೂರಿನಲ್ಲಿ ‘ಅಸಮಾಧಾನ’ ಸಭೆ!

'ನಾನೇ ಲಾಸ್ಟ್, ಇನ್ನು ಇರಾನ್ ನಂಬಲ್ಲ, ಹಾರ್ಮುಜ್ ಅಮೆರಿಕ ನಿಯಂತ್ರದಣದಲ್ಲಿದೆ': Donald Trump