ಸಾಂದರ್ಭಿಕ ಚಿತ್ರ  
ರಾಜ್ಯ

ಕರ್ನಾಟಕ ಬಂದ್‌ಗೆ ಖಾಸಗಿ ಶಾಲೆಗಳ ಸಂಘ ಬೆಂಬಲ ನೀಡುತ್ತಾ? ಆಗಸ್ಟ್ 13ರರದು ಶಾಲೆಗಳು ಇರುತ್ತಾ?

ಬಂದ್‌ಗೆ ಸಾಂಕೇತಿಕ ಬೆಂಬಲ ಸೂಚಿಸುವ ಸಲುವಾಗಿ ಶಾಲಾ ಆಡಳಿತ ಮಂಡಳಿ ಸದಸ್ಯರು, ಶಿಕ್ಷಕರು ಹಾಗೂ ಬೋಧಕೇತರ ಸಿಬ್ಬಂದಿ ಕಪ್ಪು ರಿಬ್ಬನ್ ಅಥವಾ ಕಪ್ಪು ಪಟ್ಟಿಯನ್ನು ಧರಿಸಲಿದ್ದಾರೆ ಎಂದು ಸಂಘಟನೆ ತಿಳಿಸಿದೆ.

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಕನ್ನಡ ಸಂಘಟನೆಗಳು ನಾಳೆ ಗುರುವಾರ ಆಗಸ್ಟ್ 13ರಂದು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಕರ್ನಾಟಕದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಸಹಭಾಗಿತ್ವ ನಿರ್ವಹಣಾ ಸಂಘವು ನೀಡಿದ್ದ ಬೆಂಬಲವನ್ನು ವಾಪಸ್ ಪಡೆದಿದೆ.

ಆಗಸ್ಟ್ 13ರಂದು ಶಾಲೆಗಳನ್ನು ಬಂದ್ ಮಾಡುವುದಿಲ್ಲ ಎಂದು ಸಂಘಟನೆ ತಿಳಿಸಿದೆ. ಆದರೆ, ಬಂದ್‌ಗೆ ನೈತಿಕ ಬೆಂಬಲ ನೀಡುವುದಾಗಿ ಸ್ಪಷ್ಟಪಡಿಸಿದೆ.

ಶಾಲೆಗಳನ್ನು ಮುಚ್ಚಲು ಸಾಧ್ಯವಾಗದಿರುವುದಕ್ಕೆ ಕಾರಣ ನೀಡಿರುವ ಸಂಘಟನೆ, ವಿಶೇಷ ತೀವ್ರ ಪರಿಷ್ಕರಣೆ (SIR) ಕಾರ್ಯಕ್ಕೆ ಶಿಕ್ಷಕರನ್ನು ನಿಯೋಜಿಸಿರುವುದರಿಂದ ಈಗಾಗಲೇ ಶೈಕ್ಷಣಿಕ ಚಟುವಟಿಕೆಗಳು ತೀವ್ರವಾಗಿ ಬಾಧಿತವಾಗಿವೆ ಎಂದು ತಿಳಿಸಿದೆ.

ಈಗಾಗಲೇ ಶಿಕ್ಷಕರ ತೀವ್ರ ಕೊರತೆ ಎದುರಿಸುತ್ತಿರುವ ಸರ್ಕಾರಿ ಅನುದಾನಿತ ಶಾಲೆಗಳಿಗೆ ಶಾಲೆಗಳನ್ನು ಮುಚ್ಚುವುದರಿಂದ ಮತ್ತಷ್ಟು ಸಮಸ್ಯೆಯಾಗಲಿದೆ ಎಂದು ಸಂಘಟನೆ ಹೇಳಿದೆ.

ಆದರೆ, ಬಂದ್‌ಗೆ ಸಾಂಕೇತಿಕ ಬೆಂಬಲ ಸೂಚಿಸುವ ಸಲುವಾಗಿ ಶಾಲಾ ಆಡಳಿತ ಮಂಡಳಿ ಸದಸ್ಯರು, ಶಿಕ್ಷಕರು ಹಾಗೂ ಬೋಧಕೇತರ ಸಿಬ್ಬಂದಿ ಕಪ್ಪು ರಿಬ್ಬನ್ ಅಥವಾ ಕಪ್ಪು ಪಟ್ಟಿಯನ್ನು ಧರಿಸಲಿದ್ದಾರೆ ಎಂದು ಸಂಘಟನೆ ತಿಳಿಸಿದೆ.

ಕಾವೇರಿ ವಿವಾದದ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲು ಶಾಲೆಗಳು ಇದನ್ನು ಒಂದು ಅವಕಾಶವಾಗಿ ಬಳಸಿಕೊಳ್ಳಬಹುದು. 5ರಿಂದ 12ನೇ ತರಗತಿಯ ವಿದ್ಯಾರ್ಥಿಗಳಿಗೆ ಬೆಳಗಿನ ಪ್ರಾರ್ಥನಾ ಸಭೆಯಲ್ಲಿ ಅಥವಾ ತರಗತಿಗಳಲ್ಲಿ ಕಾವೇರಿ ವಿವಾದಕ್ಕೆ ಸಂಬಂಧಿಸಿದ ವಾಸ್ತವಾಂಶಗಳನ್ನು ತಿಳಿಸಬಹುದು ಎಂದು ಶಾಲೆಗಳ ಸಂಘಟನೆ ತಿಳಿಸಿದೆ.

ನಾಳೆ ಶಾಲಾ ಬಸ್‌ಗಳು, ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಸುರಕ್ಷತೆಯನ್ನು ಖಚಿತಪಡಿಸುವಂತೆ ಕನ್ನಡ ಸಂಘಟನೆಗಳು ಹಾಗೂ ಸರ್ಕಾರಕ್ಕೆ ಸಂಘಟನೆ ಮನವಿ ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026: ಇತಿಹಾಸ ಬರೆದ ಮೈಸೂರಿನ ಪ್ರಣವಿ ಅರಸ್; ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳಾ ಗಾಲ್ಫರ್

'ಅಭಿವೃದ್ಧಿಶೀಲ ರಾಷ್ಟ್ರಗಳ ಕೈಕಟ್ಟಬೇಡಿ, ಡಂಪಿಂಗ್ ವಿರುದ್ಧ ಸಾಕ್ಷ್ಯಾಧಾರಿತ ಕ್ರಮ ಕೈಗೊಳ್ಳಿ': G20 ಸಭೆಯಲ್ಲಿ ಭಾರತ ಕೆಂಡ

ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿ ಅಪಾಯಕ್ಕೆ ಸಿಲುಕಿದ ಪ್ರಯಾಣಿಕ, ಕ್ಷಣಮಾತ್ರದಲ್ಲಿ ಎಚ್ಚೆತ್ತ RPF ಕಾನ್‌ಸ್ಟೆಬಲ್, ರಕ್ಷಣೆ-Video

ಏಷ್ಯನ್ ಗೇಮ್ಸ್ 2026 ಫೈನಲ್: ಅಭಿಷೇಕ್ ಶರ್ಮಾ, ತಿಲಕ್ ವರ್ಮಾ ಭರ್ಜರಿ ಅರ್ಧ ಶತಕ, ಪಾಕ್ ಗೆಲ್ಲಲು 212 ರನ್ ಗಳ ಗುರಿ ನೀಡಿದ ಭಾರತ!

'ಅವನು ಆಡಿದ್ರೂ, ಆಡದಿದ್ದರೂ ಏನೂ ವ್ಯತ್ಯಾಸವಾಗಲ್ಲ’: ಭಾರತದ ಯುವ ಆಟಗಾರನ ಕುರಿತು ಕಡ್ಡಿ ಮುರಿದಂತೆ ಹೇಳಿದ Ajinkya Rahane!