ತರುಣ್ ಸಾಗರ್ - ಮೇಘಾ 
ರಾಜ್ಯ

ಧಾರವಾಡದಲ್ಲಿ ಘೋರ ದುರಂತ: ಪ್ರೇಯಸಿ ಆತ್ಮಹತ್ಯೆ ಬೆನ್ನಲ್ಲೇ ಪ್ರಿಯಕರನೂ ನೇಣಿಗೆ ಶರಣು!

ನಗರದ ವಾಚ್ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದ ತರುಣ್ ಸಾಗರ್ ಇಂದು ದಾನೇಶ್ವರಿ ನಗರದ ಪಿಜಿ ಯೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಧಾರವಾಡ: ತನ್ನ ಪ್ರೇಯಸಿ ಆತ್ಮಹತ್ಯೆ ಮಾಡಿಕೊಂಡ ಸುದ್ದಿ ತಿಳಿದು, ಆಕೆಯ ಪ್ರಿಯಕರ ತರುಣ್ ಸಾಗರ್ ಕುರಕುರಿ(21) ಸಹ ನೇಣಿಗೆ ಶರಣಾದ ಘಟನೆ ದಾರುಣ ಘಟನೆ ಗುರುವಾರ ಧಾರವಾಡ ತಾಲೂಕಿನ ಕೋಟಬಾಗಿ ಗ್ರಾಮದಲ್ಲಿ ನಡೆದಿದೆ.

ನಗರದ ವಾಚ್ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದ ತರುಣ್ ಸಾಗರ್ ಇಂದು ದಾನೇಶ್ವರಿ ನಗರದ ಪಿಜಿ ಯೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ನಿನ್ನೆ ತರುಣ್ ಸಾಗರ್ ಪ್ರೇಯಸಿ ಮೇಘಾ ಗುಬ್ಬನ್ನವರ್(20) ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಳು. ಮನೆಯಲ್ಲಿ ಹೆಚ್ಚು ಮೊಬೈಲ್ ಬಳಸುತ್ತಿದ್ದೀಯ ಎಂದು ಬೈದಿದ್ದಕ್ಕೆ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಳು ಎನ್ನಲಾಗಿದೆ. ಮೇಘಾ ಆತ್ಮಹತ್ಯೆ ಸುದ್ದಿ ಕೇಳಿದ ತರುಣ್ ತನ್ನ ಸ್ನೇಹಿತನ ರೂಮ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

ತರುಣ್, ಗೆಳೆಯನ ರೂಮ್‌ನಲ್ಲಿ ಬಂದು ತಂಗಿದ್ದ‌. ಕಳೆದ ರಾತ್ರಿ ಗೆಳೆಯನ ಮುಂದೆ ಹುಡುಗಿ ಜೊತೆ ಜಗಳವಾಗಿದೆ, ಆಕೆಯ ಸಹೋದರನಿಗೆ ಈ ವಿಷಯ ಗೊತ್ತಾಗಿದೆ ಎಂದು ಹೇಳಿದ್ದ ಎನ್ನಲಾಗಿದೆ.

ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಮೇಘಾ ಹಾಗೂ ತರುಣ್ ಮಧ್ಯೆ ಪ್ರೀತಿ ಇತ್ತು ಎಂಬುದು ಇದೀಗ ಗೊತ್ತಾಗಿದೆ. ಈ‌ ಬಗ್ಗೆ ತರಣ್ ಸಾಗರ್ ಪೋಷಕರಿಗೆ ಕೇಳಿದರೆ ಪ್ರೇಮದ‌ ಬಗ್ಗೆ ಗೊತ್ತಿರಲಿಲ್ಲ. ಬೆಳಗ್ಗೆ ಫೋನ್‌ ಎತ್ತದೇ ಇದ್ದಾಗ ಹುಡುಕಾಟ ನಡೆಸಿದಾಗ, ಪ್ರಕರಣ ಬೆಳಕಿಗೆ ಬಂದಿದೆ ಎಂದು ತಿಳಿಸಿದ್ದಾರೆ.

ಸ್ಥಳಕ್ಕೆ ವಿದ್ಯಾಗಿರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Video: ಆಕಾಶದಲ್ಲೇ ಪೈಲಟ್‌ಗಳ ರಕ್ತಸಿಕ್ತ ಮಾರಮಾರಿ; ಇಸ್ರೇಲ್‌ಗೆ ತೆರಳುತ್ತಿದ್ದ ವಿಮಾನ ಸೌದಿಯಲ್ಲಿ ತುರ್ತು ಲ್ಯಾಂಡಿಂಗ್: ತಪ್ಪಿದ ದೊಡ್ಡ ದುರಂತ!

ವಿಧಾನಸೌಧದ ಮೆಟ್ಟಿಲುಗಳ ಮೇಲೆ ‘ಉರ್ದು ಹಬ್ಬ’ಕ್ಕೆ BJP ಆಕ್ಷೇಪ; ಸರ್ಕಾರಕ್ಕೆ 8 ಪ್ರಶ್ನೆಗಳನ್ನು ಕೇಳಿದ ಸುರೇಶ್ ಕುಮಾರ್

ಬೆಂಗಳೂರು: ವಿದ್ಯಾರ್ಥಿಗಳ ನಡುವಿನ ಗಲಾಟೆ ಕೊಲೆಯಲ್ಲಿ ಅಂತ್ಯ; ಬಿಕಾಂ ವಿದ್ಯಾರ್ಥಿಗೆ ಚಾಕುವಿನಿಂದ ಇರಿದ ಸಹಪಾಠಿ!

ಪಶುವೈದ್ಯಾಧಿಕಾರಿ ಪರೀಕ್ಷೆ: ಲಂಚಕ್ಕಾಗಿ ಪ್ರಶ್ನೆ ಪತ್ರಿಕೆ 'ಸೋರಿಕೆ ಮಾಡಿದ IAS ಅಧಿಕಾರಿ, ಪರೀಕ್ಷಾರ್ಥಿಗಳಿಂದ 30-40 ಲಕ್ಷ ರೂ ಸಂಗ್ರಹ- ಇಡಿ ಆರೋಪ!

CEC ಮನೆ ಗೇಟ್ ಮೇಲೆ 'ಗದ್ದರ್ ಜ್ಞಾನೇಶ್' ಬರಹ: 20 ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಕೊಲೆ ಯತ್ನ ಕೇಸ್; 6 ಮಂದಿ ಬಂಧನ!