ವಿಜಯಾನಂದ ಕಾಶಪ್ಪನವರ್ ಮತ್ತು ಆನಂದ ಕೆಂಭಾವಿ 
ರಾಜ್ಯ

ಸಚಿವ ವಿಜಯಾನಂದ ಕಾಶಪ್ಪನವರ್ ವಿರುದ್ಧ ಅವಹೇಳನಕಾರಿ ಪೋಸ್ಟ್: ಸರ್ಕಾರಿ ಶಾಲಾ ಶಿಕ್ಷಕ‌ ಅಮಾನತು

ಶಿಕ್ಷಕನ ಈ ನಡೆಗೆ ಹಿರೇಮಸಳಿ ಗ್ರಾಮಸ್ಥರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಜವಾಬ್ದಾರಿಯುತ ಹುದ್ದೆಯಲ್ಲಿದ್ದುಕೊಂಡು ಇಂತಹ ನಿಂದನಾತ್ಮಕ ಪೋಸ್ಟ್ ಹಾಕಿದ ಶಿಕ್ಷಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಇಂಡಿ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರು.

ವಿಜಯಪುರ: ರಾಜ್ಯ ಸರ್ಕಾರದ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ವಿಜಯಾನಂದ ಕಾಶಪ್ಪನವರ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ನಿಂದನಾತ್ಮಕ ಸಂದೇಶ ಹಂಚಿಕೊಂಡ ಆರೋಪದ ಮೇರೆಗೆ ಸರ್ಕಾರಿ ಶಾಲೆಯ ಸಹ ಶಿಕ್ಷಕರೊಬ್ಬರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ಅಮಾನತುಗೊಳಿಸಲಾಗಿದೆ.

​ಅಮಾನತುಗೊಂಡ ಶಿಕ್ಷಕನನ್ನು ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಹಿರೇಮಸಳಿ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯ ಸಹ ಶಿಕ್ಷಕ ಆನಂದ ಕೆಂಭಾವಿ ಎಂದು ಗುರುತಿಸಲಾಗಿದೆ. ​

ಸಚಿವ ಸಂಪುಟ ರಚನೆ ಹಿನ್ನೆಲೆಯಲ್ಲಿ ನೂತನ ಸಚಿವರಾಗಿ ವಿಜಯಾನಂದ ಕಾಶಪ್ಪನವರ ಪ್ರಮಾಣ ವಚನ ಸ್ವೀಕರಿಸುವಾಗಿನ ಫೋಟೊವನ್ನು ಬಳಸಿಕೊಂಡು, "ಸಚಿವರಿಗೆ ಕನ್ನಡದಲ್ಲಿ ಮಾತನಾಡಲು ಬರುವುದಿಲ್ಲ" ಎಂಬಿತ್ಯಾದಿ ಅವಹೇಳನಕಾರಿ ಹಾಗೂ ನಿಂದನಾತ್ಮಕ ಸಂದೇಶಗಳನ್ನು ಶಿಕ್ಷಕ ಕೆಂಭಾವಿ ವಾಟ್ಸಾಪ್ ಆಪ್ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದರು ಎಂದು ಆರೋಪಿಸಲಾಗಿದೆ.

ಶಿಕ್ಷಕನ ಈ ನಡೆಗೆ ಹಿರೇಮಸಳಿ ಗ್ರಾಮಸ್ಥರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಜವಾಬ್ದಾರಿಯುತ ಹುದ್ದೆಯಲ್ಲಿದ್ದುಕೊಂಡು ಇಂತಹ ನಿಂದನಾತ್ಮಕ ಪೋಸ್ಟ್ ಹಾಕಿದ ಶಿಕ್ಷಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಇಂಡಿ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರು.

ಗ್ರಾಮಸ್ಥರ ದೂರಿನ ಮೇರೆಗೆ ಇಂಡಿ ಬಿಇಒ ಅವರು ನೀಡಿದ ಶಿಫಾರಸ್ಸು ವರದಿಯನ್ನು ಆಧರಿಸಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಂಜುನಾಥ ಗುಳೇದಗುಡ್ಡ ಅವರು ಸಹ ಶಿಕ್ಷಕ ಆನಂದ ಕೆಂಭಾವಿ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಫಾರಂ-7 ದುರ್ಬಳಕೆ ಆರೋಪ: ಕ್ರಮಕ್ಕೆ ಚು.ಆಯೋಗ ಸೂಚನೆ, ಐತಿಹಾಸಿಕ ದಿನ ಎಂದ ಸಿಎಂ ಡಿಕೆಶಿ

‘ನಿಮ್ಮ ಪ್ರಾರ್ಥನೆಗೆ ಧನ್ಯವಾದ’: ಭಾರತದ ಹೀರೋ ಪೈಲಟ್ ಸ್ಮಿತ್ ಮಚ್ಚರ್ ಅಪಾಯದಿಂದ ಪಾರು!

ರಕ್ತದ ಮಡುವಿನಲ್ಲಿ ಪೈಲಟ್`ಗಳು, ಫ್ಲೈಟ್ ಲ್ಯಾಂಡ್ ಮಾಡಿದ ಪ್ಲಂಬರ್; FlyDubai ವಿಮಾನ ಪತನವಾಗದಿದ್ದದ್ದೇ ಅಚ್ಚರಿ!

ICC Cricket World Cup 2027 ವೇಳಾಪಟ್ಟಿ; ಅ.7ರಿಂದ ಭಾರತದ ಅಭಿಯಾನ ಆರಂಭ, 3 ಬಾರಿ ಬದ್ಧ ಶತ್ರುಗಳ ಕದನ?

‘ನೈಸ್ ಅಕ್ರಮ ಮರೆಮಾಚಲು ಈ ಡ್ರಾಮಾ’: ಚುನಾವಣಾ ಆಯೋಗದ ಮುಂದೆ ಸಿಎಂ, ಸಚಿವರ ಧರಣಿಗೆ ಕುಮಾರಸ್ವಾಮಿ ಕಿಡಿ