ಅಪಘಾತ (ಸಾಂದರ್ಭಿಕ ಚಿತ್ರ) 
ರಾಜ್ಯ

ಮಂಗಳೂರಿನಲ್ಲಿ ಕಾರು ಡಿಕ್ಕಿ: ರಸ್ತೆ ಬದಿಯಲ್ಲಿ ನಿಂತಿದ್ದ ಪಾದಚಾರಿ ಸ್ಥಿತಿ ಗಂಭೀರ

ಭಾರಿ ವಾಹನ ಸಂಚಾರದ ನಡುವೆ ತಲಪಾಡಿಯಲ್ಲಿ ಶರಣಪ್ಪ ಅವರು ಮತ್ತಿಬ್ಬರೊಂದಿಗೆ ರಸ್ತೆ ವಿಭಜಕದ ಬಳಿ ನಿಂತು ಮಾತನಾಡುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಂಗಳೂರು: ನಗರದ ಹೊರವಲಯದಲ್ಲಿ ಗುರುವಾರ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ 50 ವರ್ಷದ ಪಾದಚಾರಿಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಾಯಗೊಂಡ ವ್ಯಕ್ತಿಯನ್ನು ಗದಗ ನಿವಾಸಿ ಶರಣಪ್ಪ ಎಂದು ಗುರುತಿಸಲಾಗಿದೆ. ಭಾರಿ ವಾಹನ ಸಂಚಾರದ ನಡುವೆ ತಲಪಾಡಿಯಲ್ಲಿ ಶರಣಪ್ಪ ಅವರು ಮತ್ತಿಬ್ಬರೊಂದಿಗೆ ರಸ್ತೆ ವಿಭಜಕದ ಬಳಿ ನಿಂತು ಮಾತನಾಡುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಜಾಗರೂಕ ಹಾಗೂ ನಿರ್ಲಕ್ಷ್ಯದ ರೀತಿಯಲ್ಲಿ ಚಲಾಯಿಸಲಾಗುತ್ತಿತ್ತು ಎನ್ನಲಾದ ಕೇರಳ ನೋಂದಣಿಯ ಕಾರು ಶರಣಪ್ಪ ಅವರಿಗೆ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ ಅವರು ಹಲವು ಅಡಿ ದೂರಕ್ಕೆ ಎಸೆಯಲ್ಪಟ್ಟಿದ್ದಾರೆ.

ಶರಣಪ್ಪ ಅವರಿಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಂಗಳೂರು ದಕ್ಷಿಣ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಘಟನೆಯ ಕುರಿತು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜ್ಞಾನೇಶ್ ಕುಮಾರ್ ವಿರುದ್ಧ ದೆಹಲಿ, ಮುಂಬೈನಲ್ಲಿ ಬೃಹತ್ ಪ್ರತಿಭಟನೆ; 700 ಮಂದಿ ವಶಕ್ಕೆ

FlyDubai ಘಟನೆ ಹಿಂದೆ ಯಾವುದೇ ಶಕ್ತಿಯ ಕೈವಾಡವಿದ್ದರೂ ಡೋಂಟ್ ಕೇರ್; 'ಭಾರಿ ಬೆಲೆ' ತೆರಬೇಕಾಗುತ್ತೆ- ಇಸ್ರೇಲ್ ಪ್ರಧಾನಿ ನೆತನ್ಯಾಹು ಎಚ್ಚರಿಕೆ

ಬಿಹಾರ ಪ್ರವಾಹ: ವಾಯುಪಡೆಯ ಹೆಲಿಕಾಪ್ಟರ್‌ನಿಂದ ಪರಿಹಾರ ಸಾಮಗ್ರಿಯ ಪ್ಯಾಕೆಟ್ ಬಿದ್ದು ವೃದ್ಧ ಸಾವು!

Asian Games 2026: 44 ವರ್ಷಗಳ ಬರ ನೀಗಿಸಿದ ಮಹಿಳಾ ಪಡೆ; ಚೀನಾ ಮಣಿಸಿ ಚಿನ್ನ ಗೆದ್ದ ಭಾರತ!

CJP ಪ್ರತಿಭಟನೆಗೆ ಕೈಜೋಡಿಸಿದ ನಸೀರುದ್ದೀನ್ ಶಾ; ನಟನನ್ನು ಅಪ್ಪಿಕೊಂಡು ಕಣ್ಣೀರಿಟ್ಟ ಅಭಿಜೀತ್ ದೀಪ್ಕೆ; Video!