ಸಿಎಂ ಡಿಕೆ ಶಿವಕುಮಾರ್ 
ರಾಜ್ಯ

ಆದಿವಾಸಿ, ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿಶೇಷ ಆಯೋಗ- ಸಿಎಂ ಡಿಕೆ ಶಿವಕುಮಾರ್!

ಅಗತ್ಯ ಮೂಲಸೌಕರ್ಯಗಳನ್ನು ಸಮರ್ಪಕವಾಗಿ ಒದಗಿಸುವುದರ ಜೊತೆಗೆ, ಯುವಜನರಿಗೆ ಕೌಶಲ್ಯಾಭಿವೃದ್ಧಿ ಮತ್ತು ಉದ್ಯೋಗಾವಕಾಶಗಳನ್ನು ಕಲ್ಪಿಸುವುದೇ ಸರ್ಕಾರದ ಮುಖ್ಯ ಉದ್ದೇಶವಾಗಿದೆ ಎಂದು ಅವರು ಹೇಳಿದ್ದಾರೆ.

ಬೆಂಗಳೂರು: ಆದಿವಾಸಿ, ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ವಿಶೇಷ ಆಯೋಗ ರಚಿಸಲು ಸರ್ಕಾರ ನಿರ್ಧರಿಸಿದೆ.

ಈ ಕುರಿತು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಕರ್ನಾಟಕದಲ್ಲಿ ವಾಸಿಸುತ್ತಿರುವ ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳು ಇಂದಿಗೂ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಹಲವು ಸವಾಲುಗಳನ್ನು ಎದುರಿಸುತ್ತಿವೆ. ಈ ಹಿನ್ನೆಲೆಯಲ್ಲಿ ಅವರ ಅಭಿವೃದ್ಧಿ, ಹಕ್ಕುಗಳ ರಕ್ಷಣೆ ಹಾಗೂ ಸಾಮಾಜಿಕ ನ್ಯಾಯವನ್ನು ಒದಗಿಸುವ ಸಲುವಾಗಿ ವಿಶೇಷ ಆಯೋಗವನ್ನು ರಚಿಸಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.

ಉತ್ತಮ ಶಿಕ್ಷಣ, ಪೌಷ್ಟಿಕ ಆಹಾರ, ಗುಣಮಟ್ಟದ ಆರೋಗ್ಯ ಸೇವೆ, ವಸತಿ, ಕುಡಿಯುವ ನೀರು, ರಸ್ತೆ, ವಿದ್ಯುತ್ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಸಮರ್ಪಕವಾಗಿ ಒದಗಿಸುವುದರ ಜೊತೆಗೆ, ಯುವಜನರಿಗೆ ಕೌಶಲ್ಯಾಭಿವೃದ್ಧಿ ಮತ್ತು ಉದ್ಯೋಗಾವಕಾಶಗಳನ್ನು ಕಲ್ಪಿಸುವುದೇ ಸರ್ಕಾರದ ಮುಖ್ಯ ಉದ್ದೇಶವಾಗಿದೆ ಎಂದು ಅವರು ಹೇಳಿದ್ದಾರೆ.

ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಬದುಕಿನಲ್ಲಿ ಹೊಸ ಭರವಸೆ ಮೂಡಿಸುವುದರ ಜೊತೆಗೆ ಸಮಾನ ಅವಕಾಶಗಳನ್ನು ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೇವೇಗೌಡರ ಪತ್ನಿ ಚೆನ್ನಮ್ಮ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ; ಸರ್ಕಾರಿ ಗೌರವ ಸಮರ್ಥಿಸಿಕೊಂಡ CM; ಡಿಕೆಶಿ ಹೇಳಿದ್ದೇನು?

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿರೋಧಿಸಿ ಕರೆ ನೀಡಿದ್ದ ಕರ್ನಾಟಕ ಬಂದ್ ಗೆ ನೀರಸ ಪ್ರತಿಕ್ರಿಯೆ! ಸಿಗದ ಜನಬೆಂಬಲ, ಬಹುತೇಕ ಕಡೆ ಸಹಜ ಜನಜೀವನ

ಹೈಕೋರ್ಟ್‌ನಲ್ಲೂ ನಟ ದರ್ಶನ್‌ಗೆ ಭಾರೀ ಹಿನ್ನಡೆ: ಪ್ರದೋಷ್ ಮಾಫಿ ಸಾಕ್ಷಿ ಪ್ರಶ್ನಿಸಿದ್ದ ಮೇಲ್ಮನವಿ ಅರ್ಜಿ ವಜಾ!

ಬೆಂಗಳೂರು: ಸ್ಯಾಂಡಲ್‌ವುಡ್‌ ಖ್ಯಾತ ನಟಿಯ ತಂಗಿ ಮೇಲೆ ಅತ್ಯಾಚಾರ ಆರೋಪ; ಯುವಕನ ಬಂಧನ!

ರೇಣುಕಾಸ್ವಾಮಿ ಕೊಲೆ ಪ್ರಕರಣ: ವಿಡಿಯೋ ಕಾನ್ಫರೆನ್ಸ್‌ ವೇಳೆ ಪವಿತ್ರಾಗೌಡ ಹೆಡ್‌ಫೋನ್ ಬಳಕೆ: ನ್ಯಾಯಾಧೀಶರ ಫುಲ್ ಕ್ಲಾಸ್!