ಹೈಕೋರ್ಟ್ ಸಾಂದರ್ಭಿಕ ಚಿತ್ರ 
ರಾಜ್ಯ

ಖರ್ಗೆ ಕುಟುಂಬದ ಟ್ರಸ್ಟ್ ಗೆ ನಿವೇಶನ ಆರೋಪ: ಲೋಕಾಯುಕ್ತಕ್ಕೆ ಹೈಕೋರ್ಟ್ ನೋಟಿಸ್!

ಪರಿಶಿಷ್ಟ ಜಾತಿಗೆ ಸೇರಿದ ಟ್ರಸ್ಟ್ ಎಂದು ಉಲ್ಲೇಖಿಸಿ ಖರ್ಗೆ ಮತ್ತು ಅವರ ಕುಟುಂಬಸ್ಥರ ಸಿದ್ದಾರ್ಥ ವಿಹಾರ ಟ್ರಸ್ಟ್ ಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಬಿಟಿಎಂ ಲೇಔಟ್ ನಲ್ಲಿ ಎರಡು ಎಕರೆ ನಿವೇಶನ ಮಂಜೂರು ಮಾಡಿರುವ ಆರೋಪ ಇದಾಗಿದೆ.

ಬೆಂಗಳೂರು: ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬದ ಟ್ರಸ್ಟ್ ಗೆ ಕಾನೂನುಬಾಹಿರವಾಗಿ ನಿವೇಶನ ಮಂಜೂರು ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತಕ್ಕೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.

ಪರಿಶಿಷ್ಟ ಜಾತಿಗೆ ಸೇರಿದ ಟ್ರಸ್ಟ್ ಎಂದು ಉಲ್ಲೇಖಿಸಿ ಖರ್ಗೆ ಮತ್ತು ಅವರ ಕುಟುಂಬಸ್ಥರ ಸಿದ್ದಾರ್ಥ ವಿಹಾರ ಟ್ರಸ್ಟ್ ಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಬಿಟಿಎಂ ಲೇಔಟ್ ನಲ್ಲಿ ಎರಡು ಎಕರೆ ನಿವೇಶನ ಮಂಜೂರು ಮಾಡಿರುವ ಆರೋಪ ಇದಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮಲ್ಲಿಕಾರ್ಜುನ ಖರ್ಗೆ, ರಾಧಾಕೃಷ್ಣ, ರಾಧಾಬಾಯಿ ಖರ್ಗೆ, ರಾಹುಲ್ ಖರ್ಗೆ, ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಸಚಿವ ಎಂ.ಬಿ. ಪಾಟೀಲ್​​ ವಿರುದ್ಧ ದೂರು ದಾಖಲಾಗಿತ್ತು.

ಈ ಕುರಿತು ದೂರುದಾರ ವಿಜಯರಾಘವ ಮರಾಠೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ಹೈಕೋರ್ಟ್ ಈ ಮಹತ್ವದ ನಿರ್ದೇಶನ ನೀಡಿದೆ.

ಜನಪ್ರತಿನಿಧಿಗಳ ಸೆಷನ್ಸ್ ನ್ಯಾಯಾಲಯ ನೀಡಿರುವ ಆದೇಶವನ್ನು ರದ್ದುಗೊಳಿಸಬೇಕು ಎಂದು ಕೋರಿ ವಿಜಯ ರಾಘವ ಮರಾಠೆ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ವಿಚಾರಣೆಯನ್ನು ಶುಕ್ರವಾರ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯ ಪೀಠ, ಲೋಕಾಯುಕ್ತ ಪೊಲೀಸರಿಗೆ ನೋಟಿಸ್ ಜಾರಿಗೊಳಿಸುವಂತೆ ಆದೇಶಿಸಿದ್ದು, ವಿಚಾರಣೆಯನ್ನು ಇದೇ 18ಕ್ಕೆ ಮುಂದೂಡಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

SIR ವಿವಾದ: ಫಾರ್ಮ್‌-6 ನಿಯಮ ಸರಳಗೊಳಿಸಿದ ಚುನಾವಣಾ ಆಯೋಗ, ಪಟ್ಟಿಯಿಂದ ಹೊರಗುಳಿದವರ ಸೇರ್ಪಡೆಗೆ ವಿಶೇಷ ಅಭಿಯಾನಕ್ಕೆ ಸೂಚನೆ..!

CEC ವಿರುದ್ಧ ಪ್ರತಿಭಟನೆಗೆ ಬ್ರೇಕ್: ನವದೆಹಲಿಯಲ್ಲಿ ಬಿಎನ್‌ಎಸ್‌ಎಸ್ ಸೆಕ್ಷನ್ 163 ಜಾರಿ, ಎಲ್ಲೆಡೆ ಭದ್ರತೆ ಹೆಚ್ಚಳ..!

ಗಾಂಧಿ ಜಯಂತಿ: ರಾಜಘಾಟ್‌ನಲ್ಲಿ ಮಹಾತ್ಮ ಗಾಂಧಿಗೆ, ವಿಜಯ್ ಘಾಟ್‌ನಲ್ಲಿ ಲಾಲ್ ಬಹದ್ದೂರ್ ಶಾಸ್ತ್ರಿಗೆ ಪ್ರಧಾನಿ ಮೋದಿ ನಮನ..!

FlyDubai ವಿಮಾನ ಪತನ ಯತ್ನದ ಹಿಂದೆ ಇರಾನ್ ಕೈವಾಡ..? ತುಂಬಾ ಕಠಿಣ ಹೊಡೆತ ಬೀಳಲಿದೆ; ಟ್ರಂಪ್ ಕಠಿಣ ಎಚ್ಚರಿಕೆ

ಫಾರಂ-7 ದುರ್ಬಳಕೆ ಆರೋಪ: ಕ್ರಮಕ್ಕೆ ಚು.ಆಯೋಗ ಸೂಚನೆ, ಐತಿಹಾಸಿಕ ದಿನ ಎಂದ ಸಿಎಂ ಡಿಕೆಶಿ