ಅತ್ಯಾಚಾರ (ಸಾಂದರ್ಭಿಕ ಚಿತ್ರ) 
ರಾಜ್ಯ

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ: ಶಿಕ್ಷಕನಿಗೆ 25 ವರ್ಷ ಜೈಲು, 1 ಲಕ್ಷ ರೂ ದಂಡ..!

ಆರೋಪಿ ಹಾಜಿಮಲಾಂಗ್ ಲಾ ಅವಧಿ ಮುಗಿದ ಬಳಿಕ ತನ್ನ ತರಗತಿಯ ವಿದ್ಯಾರ್ಥಿಗಳಿಗೆ ಟ್ಯೂಷನ್‌ ನೀಡುತ್ತಿದ್ದ. ಈ ವೇಳೆ ಕೆಲವು ವಿದ್ಯಾರ್ಥಿಗಳನ್ನು ರಾತ್ರಿ ಶಾಲೆಯಲ್ಲೇ ಉಳಿಯುವಂತೆ ಮಾಡುತ್ತಿದ್ದ.

ಕಲಬುರಗಿ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಖಾಸಗಿ ಶಾಲೆಯ ಶಿಕ್ಷಕನಿಗೆ ಕಲಬುರಗಿಯ ವಿಶೇಷ ಪೋಕ್ಸೋ ನ್ಯಾಯಾಲಯ 25 ವರ್ಷಗಳ ಜೈಲು ಶಿಕ್ಷೆ ಹಾಗೂ ರೂ.1 ಲಕ್ಷ ದಂಡ ವಿಧಿಸಿದೆ.

ವಿಶೇಷ ಸರ್ಕಾರಿ ಅಭಿಯೋಜಕ ಶಾಂತವೀರ ತುಪ್ಪದ್ ಗುರುವಾರ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ಈ ವಿಚಾರ ತಿಳಿಸಲಾಗಿದೆ.

ಆರೋಪಿ ಹಾಜಿಮಲಾಂಗ್ ಲಾ ಅವಧಿ ಮುಗಿದ ಬಳಿಕ ತನ್ನ ತರಗತಿಯ ವಿದ್ಯಾರ್ಥಿಗಳಿಗೆ ಟ್ಯೂಷನ್‌ ನೀಡುತ್ತಿದ್ದ. ಈ ವೇಳೆ ಕೆಲವು ವಿದ್ಯಾರ್ಥಿಗಳನ್ನು ರಾತ್ರಿ ಶಾಲೆಯಲ್ಲೇ ಉಳಿಯುವಂತೆ ಮಾಡುತ್ತಿದ್ದ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

2024ರ ಮೇ ತಿಂಗಳಲ್ಲಿ ಬಾಲಕಿಯನ್ನು ಶಾಲಾ ಕಟ್ಟಡದಲ್ಲಿರುವ ಕೊಠಡಿಗೆ ಬರುವಂತೆ ಹೇಳಿದ ಆರೋಪಿ, ಅಲ್ಲಿ ಆಕೆಯ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ್ದ. ಈ ವಿಚಾರವನ್ನು ಯಾರಿಗಾದರೂ ತಿಳಿಸಿದರೆ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದ ಎನ್ನಲಾಗಿದೆ.

ಆದರೆ, ಬಾಲಕಿ ಘಟನೆ ಕುರಿತು ಮಹಿಳಾ ಶಿಕ್ಷಕಿಯೊಬ್ಬರಿಗೆ ಮಾಹಿತಿ ನೀಡಿದ್ದಳು. ಬಳಿಕ ಯಡ್ರಾಮಿ ಪೊಲೀಸ್‌ ಠಾಣೆಯಲ್ಲಿ ಹಾಜಿಮಲಾಂಗ್ ವಿರುದ್ಧ ಪ್ರಕರಣ ದಾಖಲಾಗಿತ್ತು.

ಕಲಬುರಗಿ ಸಹಾಯಕ ಪೊಲೀಸ್‌ ಆಯುಕ್ತ ಬಿಂದುಮಣಿ ಆರ್‌.ಎನ್‌. ಅವರ ಮೇಲ್ವಿಚಾರಣೆಯಲ್ಲಿ ತನಿಖೆ ನಡೆದಿದ್ದು, ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ಪೋಕ್ಸೋ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಲಾಗಿತ್ತು.

ನ್ಯಾಯಾಧೀಶ ಎಸ್‌.ಎಲ್‌. ಚೌಹಾಣ್‌ ಅವರು ಎರಡೂ ಕಡೆಯ ವಾದಗಳನ್ನು ಆಲಿಸಿ, ಸಾಕ್ಷಿಗಳನ್ನು ಪರಿಶೀಲಿಸಿದ ಬಳಿಕ ಮಂಗಳವಾರ ತೀರ್ಪು ಪ್ರಕಟಿಸಿದರು.

ಇದೇ ವೇಳೆ, ಸಂತ್ರಸ್ತ ಬಾಲಕಿಗೆ ರೂ.6 ಲಕ್ಷ ಪರಿಹಾರ ನೀಡುವಂತೆ ನ್ಯಾಯಾಧೀಶರು ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಸೂಚಿಸಿದ್ದಾರೆ. ತೀರ್ಪು ಪ್ರಕಟವಾದ ಒಂದು ತಿಂಗಳೊಳಗೆ ಪರಿಹಾರದ ಮೊತ್ತವನ್ನು ಪಾವತಿಸುವಂತೆ ಆದೇಶಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇವ್ರು ಊರುಬಿಟ್ಟು ಊರಿಗೆ ಬಂದು ಆಸ್ತಿ ಮಾಡಬಹುದು, ನಾವು ಮಾಡ್ಬಾರ್ದ? ಪಾರ್ಟ್-2ನಲ್ಲಿ ಏನಿದೆ ಅಂತ ಗೊತ್ತು: HDK ಆರೋಪಕ್ಕೆ CM ಡಿಕೆಶಿ ತಿರುಗೇಟು

'ಆಂತರಿಕ ವಿಚಾರದಲ್ಲಿ ಮೂಗು ತೂರಿಸಬೇಡ'; ಟರ್ಕಿಗೆ ಭಾರತ ಖಡಕ್ ಎಚ್ಚರಿಕೆ, ಆಗಿದ್ದೇನು?

11 ದಿನಗಳ ಹಿಂದಷ್ಟೇ ನಾಪತ್ತೆಯಾಗಿದ್ದ ನವವಿವಾಹಿತೆ ಕೆರೆಯಲ್ಲಿ ಶವವಾಗಿ ಪತ್ತೆ, ಪೊಲೀಸ್ ತನಿಖೆ!

ಬರದಿಂದ ಕೆಂಗೆಟ್ಟ ಕರ್ನಾಟಕಕ್ಕೆ ಕೇಂದ್ರದ ನೆರವಿನ ನಿರೀಕ್ಷೆ: ಅಕ್ಟೋಬರ್ 3 ರಿಂದ ಕೇಂದ್ರ ತಂಡದ ಸಮೀಕ್ಷೆ- ಎಚ್.ಡಿ ಕುಮಾರಸ್ವಾಮಿ

ರಷ್ಯಾಗೆ ಮರ್ಮಾಘಾತ; ಪರಮಾಣು ಸಾಮರ್ಥ್ಯದ ಯುದ್ಧವಿಮಾನ ಪತನ-ಬೆಂಕಿಗಾಹುತಿ, 6 ಮಂದಿ ಸಜೀವ ದಹನ, ಓರ್ವ ಪಾರು! Video