ಸಾಂದರ್ಭಿಕ ಚಿತ್ರ 
ರಾಜ್ಯ

ಪಾಕ್ ಮೂಲದ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಶಂಕೆ: ಮೂವರ ಬಂಧನ; ಮುಸ್ಲಿಮರ ಪರ ಸೇಡು ತೀರಿಸಿಕೊಳ್ಳಲು ಬಯಸಿದ್ದ ಆರೋಪಿ!

ಸೆಕ್ಯುರಿಟಿ ಗಾರ್ಡ್ ಅಸಫುಲ್ ಮಲ್ಲಿಕ್, ಟಿಟಿಪಿ ಸದಸ್ಯನೊಬ್ಬನಿಗೆ ಧ್ವನಿ ಕರೆಗಳನ್ನು ಮಾಡಿ ಆಡಿಯೊ ರೆಕಾರ್ಡಿಂಗ್‌ಗಳನ್ನು ಕಳುಹಿಸಿದ್ದ ಎಂದು ಹೆಬ್ಬಗೋಡಿ ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು: ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವ ಶಂಕೆಯ ಮೇಲೆ ಬೆಂಗಳೂರು ಮತ್ತು ಕಲಬುರಗಿಯಲ್ಲಿ ಮೂವರು ವ್ಯಕ್ತಿಗಳನ್ನು ಬಂಧಿಸಲಾಗಿದೆ.

ತೆಹ್ರೀಕ್-ಎ-ತಾಲಿಬಾನ್ ಪಾಕಿಸ್ತಾನ್ (ಟಿಟಿಪಿ) ಜೊತೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ಬೆಂಗಳೂರಿನಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ 23 ವರ್ಷದ ಪಶ್ಚಿಮ ಬಂಗಾಳದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ.

ಕಲಬುರಗಿಯ ಹೊರವಲಯದಲ್ಲಿರುವ ಕಸಾಯಿಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಉತ್ತರ ಪ್ರದೇಶದ ಸೀತಾಪುರದ ಇಬ್ಬರು ಸಾಮಾಜಿಕ ಮಾಧ್ಯಮಗಳ ಮೂಲಕ ಭಯೋತ್ಪಾದಕರೆಂದು ಹೇಳಲಾಗುವ ವ್ಯಕ್ತಿಗಳೊಂದಿಗೆ ಸಂಪರ್ಕ ಸಾಧಿಸಿದ ಆರೋಪದ ಮೇಲೆ ಬಂಧಿಸಲಾಗಿದೆ.

ಸೆಕ್ಯುರಿಟಿ ಗಾರ್ಡ್ ಅಸಫುಲ್ ಮಲ್ಲಿಕ್, ಟಿಟಿಪಿ ಸದಸ್ಯನೊಬ್ಬನಿಗೆ ಧ್ವನಿ ಕರೆಗಳನ್ನು ಮಾಡಿ ಆಡಿಯೊ ರೆಕಾರ್ಡಿಂಗ್‌ಗಳನ್ನು ಕಳುಹಿಸಿದ್ದ ಎಂದು ಹೆಬ್ಬಗೋಡಿ ಪೊಲೀಸರು ತಿಳಿಸಿದ್ದಾರೆ. ಉತ್ತರ 24 ಪರಗಣದ ಮಲ್ಲಿಕ್, ಜಿಗಾನಿಯ ಎಪಿಸಿ ಸರ್ಕಲ್ ಬಳಿ ವಾಸಿಸುತ್ತಿದ್ದ. ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದ ಖಾಸಗಿ ಸಂಸ್ಥೆಯಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು.

ಮಾಹಿತಿದಾರರೊಬ್ಬರ ಸುಳಿವು ಆಧರಿಸಿ ಮಂಗಳವಾರ ಪೊಲೀಸರು ಬಂಧಿಸಿದ್ದಾರೆ. "ವಿಚಾರಣೆಯ ಸಮಯದಲ್ಲಿ, ಆರೋಪಿಯು ಪಾಕಿಸ್ತಾನದ ಮಸೀದಿಗಳು ಮತ್ತು ಜನರ ಮೇಲೆ ಪಾಕಿಸ್ತಾನ ಸೇನೆ ನಡೆಸಿದ ದೌರ್ಜನ್ಯಗಳ ಬಗ್ಗೆ ಕೋಪಗೊಂಡಿದ್ದಾಗಿ ಹೇಳಿದ್ದಾನೆ. ಆರೋಪಿ ಮುಸ್ಲಿಮರಿಗಾಗಿ 'ಸೇಡು ತೀರಿಸಿಕೊಳ್ಳಲು' ಬಯಸಿದ್ದನು

ಆರೋಪಿಯು ಇಸ್ರೇಲ್-ಪ್ಯಾಲೆಸ್ಟೈನ್ ಸಂಘರ್ಷದ ಬಗ್ಗೆಯೂ ಕೋಪ ವ್ಯಕ್ತಪಡಿಸಿದ್ದಾನೆ. ಪಾಕಿಸ್ತಾನ ಸೇನೆಯು ಇಸ್ರೇಲ್ ಅನ್ನು ಬೆಂಬಲಿಸುತ್ತಿದೆ ಮತ್ತು ಪ್ಯಾಲೆಸ್ಟೀನಿಯನ್ ಮುಸ್ಲಿಮರಿಗೆ ಸಹಾಯ ಮಾಡುತ್ತಿಲ್ಲ ಎಂದು ಆರೋಪಿಸಿದ್ದಾನೆ. ಭಾರತದಲ್ಲಿಯೂ ಮುಸ್ಲಿಮರು ಯಾವುದೇ ಸಮಸ್ಯೆಗಳನ್ನು ಎದುರಿಸಿದರೆ ಅವರ ಪರವಾಗಿ ಸೇಡು ತೀರಿಸಿಕೊಳ್ಳಲು ತಾನು ನಿರ್ಧರಿಸಿದ್ದೇನೆ ಎಂದು ಅವನು ಹೇಳಿದ್ದಾನೆ ಎಂದು ತನಿಖೆಗೆ ಸಂಬಂಧಿಸಿದ ಅಧಿಕಾರಿಯೊಬ್ಬರು ತಿಳಿಸಿದ್ದಾನೆ.

ನಂತರ ಮಲ್ಲಿಕ್ ಫೇಸ್‌ಬುಕ್‌ನಲ್ಲಿ ಅಫ್ಘಾನಿಸ್ತಾನದಲ್ಲಿರುವ ಇಮ್ರಾನ್ ಹೈದರ್ ಎಂಬ ವ್ಯಕ್ತಿಯನ್ನು ಸಂಪರ್ಕಿಸಿದನು. ಹೈದರ್‌ನ ಟಿಟಿಪಿಯೊಂದಿಗಿನ ಸಂಪರ್ಕವನ್ನು ಬಳಸಿಕೊಂಡು, ಪಾಕಿಸ್ತಾನ ಸೇನೆಯ ವಿರುದ್ಧ ಸೇಡು ತೀರಿಸಿಕೊಳ್ಳಲು ಭಯೋತ್ಪಾದಕ ಸಂಘಟನೆಗೆ ಸೇರುವ ಉದ್ದೇಶದಿಂದ ಅಫ್ಘಾನಿಸ್ತಾನಕ್ಕೆ ಪ್ರಯಾಣಿಸಲು ವೀಸಾ ಪಡೆಯಲು ವ್ಯವಸ್ಥೆ ಮಾಡಿದ್ದನು. ನಂತರ ಅವನು ಆರ್ಥಿಕ ತೊಂದರೆಗಳಿಂದಾಗಿ ತನ್ನ ಮನಸ್ಸನ್ನು ಬದಲಾಯಿಸಿದನು ಮತ್ತು ತನ್ನ ಕುಟುಂಬವನ್ನು ನೋಡಿಕೊಳ್ಳಲು ಬಯಸಿದನು.

ಪೊಲೀಸರು ಅವನ ಫೇಸ್‌ಬುಕ್ ಮತ್ತು ವಾಟ್ಸಾಪ್ ಖಾತೆಗಳನ್ನು ಪರಿಶೀಲಿಸಲು ಅವನ ಮೊಬೈಲ್ ಫೋನ್ ಅನ್ನು ಪರಿಶೀಲಿಸಿದಾಗ, ಅವರು ಹೈದರ್‌ ಜೊತೆಗಿನ ಚಾಟ್ ವಿವರಗಳನ್ನು ಕಂಡುಕೊಂಡಿದ್ದಾರೆ. ಅವನ ವಿರುದ್ಧ ಬಿಎನ್‌ಎಸ್‌ನ ಸೆಕ್ಷನ್ 113(3) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪಾಕಿಸ್ತಾನದಲ್ಲಿ ನೆಲೆಸಿರುವ ಶಂಕಿತ ಭಯೋತ್ಪಾದಕರೊಂದಿಗೆ ಸಂಪರ್ಕ ಸಾಧಿಸಿದ ಆರೋಪದ ಮೇಲೆ ಕಲಬುರಗಿಯ ಹೊರವಲಯದಲ್ಲಿರುವ ತಾವರಗೇರಾದಲ್ಲಿರುವ ಕಸಾಯಿಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಉತ್ತರ ಪ್ರದೇಶದ ಸೀತಾಪುರದ ಇಬ್ಬರು ನಿವಾಸಿಗಳನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ. ಬಂಧಿತರಾದ ಮೊಹಮ್ಮದ್ ಸಮೀರ್ ಮತ್ತು ಮೊಹಮ್ಮದ್ ಸಲ್ಮಾನ್ ಒಂದು ವರ್ಷದ ಹಿಂದೆ ಕಲಬುರಗಿಗೆ ಬಂದು ತಾವರಗೇರಾದಲ್ಲಿ ಬಾಡಿಗೆಗೆ ಪಡೆದ ವಸತಿಗೃಹದಲ್ಲಿ ವಾಸಿಸುತ್ತಿದ್ದರು.

ಕಲಬುರಗಿ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್‌ಡಿ ಮಾತನಾಡಿ, ಕಾನೂನುಬಾಹಿರ ಚಟುವಟಿಕೆಗಳಿಗಾಗಿ ಹಲವಾರು ವ್ಯಕ್ತಿಗಳ ಸಾಮಾಜಿಕ ಮಾಧ್ಯಮ ಖಾತೆಗಳನ್ನು ಮೇಲ್ವಿಚಾರಣೆ ಮಾಡುತ್ತಿದ್ದಾಗ ಸಮೀರ್ ವಾಟ್ಸಾಪ್ ಮತ್ತು ಫೇಸ್‌ಬುಕ್ ಮೂಲಕ ಪಾಕಿಸ್ತಾನ ಮೂಲದ ಭಯೋತ್ಪಾದಕ ಕಾರ್ಯಕರ್ತರೊಂದಿಗೆ ಸಂಪರ್ಕ ಸಾಧಿಸುತ್ತಿರುವುದು ಕಂಡುಬಂದಿದೆ.

ಸಲ್ಮಾನ್ ಪಾಕಿಸ್ತಾನ ಮೂಲದ ಭಯೋತ್ಪಾದಕರೊಂದಿಗೆ ಯಾವುದೇ ಸಂಪರ್ಕ ಹೊಂದಿದ್ದಾನೆಯೇ ಎಂಬುದು ಪೊಲೀಸರಿಗೆ ಇನ್ನೂ ಮಾಹಿತಿ ಸಿಕ್ಕಿಲ್ಲ ಎಂದು ಅವರು ಹೇಳಿದರು. ಆರೋಪಿಗಳ ವಿರುದ್ಧ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಉತ್ತರಾಖಂಡ: ಚಮೋಲಿಯಲ್ಲಿ ನಿರ್ಮಾಣ ಹಂತದ ಸುರಂಗ ಕುಸಿತ; 7 ಕಾರ್ಮಿಕರು ಸಾವು, 14 ಜನರಿಗೆ ಗಾಯ, 22 ಮಂದಿ ರಕ್ಷಣೆ-Video

Iran ಮುಗಿಸಲು ಅಮೆರಿಕ ಮಾಸ್ಟರ್ ಪ್ಲ್ಯಾನ್: ಜಾಗತಿಕ ಇತಿಹಾಸದಲ್ಲೇ ಹಿಂದೆಂದೂ ಕಾಣದ ಭೀಕರ 'ಆರ್ಥಿಕ ಯುದ್ಧ' ಘೋಷಣೆ!

'ಸಮಯವಿಲ್ಲ, ವಿಜಯನಗರ ಜಿಲ್ಲಾ ಉಸ್ತುವಾರಿ ಹೊಣೆ, ಧ್ವಜಾರೋಹಣ ನನಗೆ ಬೇಡ': ಜಮೀರ್ ಅಹ್ಮದ್ ಸಿಎಂಗೆ ಪತ್ರ

ಸ್ವಾತಂತ್ರ್ಯೋತ್ಸವಕ್ಕೆ ಸಿಲಿಕಾನ್ ಸಿಟಿ ಸಜ್ಜು: ವಿಧಾನಸೌಧದ ಮುಂದೆ ‘ಫ್ರೀಡಂ ಹಬ್ಬ’ಕ್ಕೆ ಭರದ ಸಿದ್ಧತೆ, 18 ಸಾವಿರಕ್ಕೂ ಹೆಚ್ಚು ಮಂದಿ ನೋಂದಣಿ..!

ದೇಶ ವಿಭಜನೆಯ ಸಂತ್ರಸ್ತರನ್ನು ಸ್ಮರಿಸಿದ ಪ್ರಧಾನಿ ಮೋದಿ; ಸಾಮರಸ್ಯ, ಸಹೋದರತ್ವಕ್ಕೆ ಕರೆ