ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ಅವರ ನಿರ್ದೇಶನದ ಮೇರೆಗೆ ಬ್ಯಾಟರಾಯನಪುರ ಮತ್ತು ಯಲಹಂಕ ವಿಭಾಗಗಳಲ್ಲಿರುವ ತಿನಿಸು ಮಳಿಗೆಗಳು ಮತ್ತು ಹೋಟೆಲ್‌ಗಳಲ್ಲಿ ತಪಾಸಣೆ ನಡೆಸಲಾಯಿತು. 
ರಾಜ್ಯ

ಆಹಾರ ಸುರಕ್ಷತಾ ನಿಯಮ ಉಲ್ಲಂಘನೆ: ಬೆಂಗಳೂರಿನ 6 ಹೋಟೆಲ್‌ಗಳಿಗೆ 1.6 ಲಕ್ಷ ರೂ. ದಂಡ..!

ಈ ವೇಳೆ ತ್ಯಾಜ್ಯವನ್ನು ಸರಿಯಾಗಿ ವಿಂಗಡಿಸದಿರುವುದು, ಅಸ್ವಚ್ಛ ವಾತಾವರಣ, ನೊಣಗಳ ಕಾಟ ಹಾಗೂ ಏಕಬಳಕೆ ಪ್ಲಾಸ್ಟಿಕ್‌ ಬಳಕೆ ಸೇರಿದಂತೆ ಹಲವು ನಿಯಮ ಉಲ್ಲಂಘನೆಗಳು ಪತ್ತೆಯಾಗಿವೆ.

ಬೆಂಗಳೂರು: ಆಹಾರ ಸುರಕ್ಷತೆ, ಸ್ವಚ್ಛತೆ ಹಾಗೂ ಘನತ್ಯಾಜ್ಯ ನಿರ್ವಹಣಾ ನಿಯಮಗಳನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಉತ್ತರ ನಗರ ಪಾಲಿಕೆ (ಬಿಎನ್‌ಸಿಸಿ) ಗುರುವಾರ ಆರು ಹೋಟೆಲ್‌ಗಳು ಮತ್ತು ಆಹಾರ ಮಳಿಗೆಗಳಿಗೆ ಒಟ್ಟು 1.6 ಲಕ್ಷ ರೂ. ದಂಡ ವಿಧಿಸಿದೆ.

ಆಯುಕ್ತ ಪೊಮ್ಮಲ ಸುನಿಲ್‌ ಕುಮಾರ್‌ ಅವರ ನಿರ್ದೇಶನದ ಮೇರೆಗೆ ಬ್ಯಾಟರಾಯನಪುರ ಹಾಗೂ ಯಲಹಂಕ ವಿಭಾಗಗಳ ವ್ಯಾಪ್ತಿಯ ಹೋಟೆಲ್‌ಗಳು ಮತ್ತು ಆಹಾರ ಮಳಿಗೆಗಳಲ್ಲಿ ತಪಾಸಣೆ ನಡೆಸಲಾಯಿತು.

ಈ ವೇಳೆ ತ್ಯಾಜ್ಯವನ್ನು ಸರಿಯಾಗಿ ವಿಂಗಡಿಸದಿರುವುದು, ಅಸ್ವಚ್ಛ ವಾತಾವರಣ, ನೊಣಗಳ ಕಾಟ ಹಾಗೂ ಏಕಬಳಕೆ ಪ್ಲಾಸ್ಟಿಕ್‌ ಬಳಕೆ ಸೇರಿದಂತೆ ಹಲವು ನಿಯಮ ಉಲ್ಲಂಘನೆಗಳು ಪತ್ತೆಯಾಗಿವೆ.

ಪೀಪೈ ಬ್ರೂವರಿ ಆ್ಯಂಡ್‌ ಕಿಚನ್‌ಗೆ ರೂ.80,000 ದಂಡ ವಿಧಿಸಲಾಗಿದ್ದು, ಇದು ಅತಿ ಹೆಚ್ಚು ದಂಡವಾಗಿದೆ. ತಪಾಸಣೆ ವೇಳೆ ಅವಧಿ ಮೀರಿದ ಅಡುಗೆ ಎಣ್ಣೆ, ಸರಿಯಾಗಿ ಮುಚ್ಚಿಡದ ಹಾಗೂ ಲೇಬಲ್‌ ಇಲ್ಲದ ಮಾಂಸವನ್ನು ಶೀತಲೀಕರಣ ಘಟಕದಲ್ಲಿ ಸಂಗ್ರಹಿಸಿಟ್ಟಿರುವುದು ಪತ್ತೆಯಾಗಿದೆ. ಅಲ್ಲದೆ, ಮಾಂಸ ಖರೀದಿಸಿದ ದಿನಾಂಕ ನಮೂದಿಸಿರುವ ಬಿಲ್‌ ಕೂಡ ಇರಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಯಾಟ್‌ ಸೆಂಟ್ರಿಕ್‌ಗೆ ರೂ.40,000 ದಂಡ ವಿಧಿಸಲಾಗಿದೆ. ಇಲ್ಲಿ ತ್ಯಾಜ್ಯವನ್ನು ಸರಿಯಾಗಿ ವಿಂಗಡಿಸದಿರುವುದು ಹಾಗೂ ನೊಣಗಳ ಕಾಟ ಕಂಡುಬಂದಿದ್ದು, ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಹಾಗೂ ಘನತ್ಯಾಜ್ಯ ನಿರ್ವಹಣಾ ನಿಯಮಗಳನ್ನು ಉಲ್ಲಂಘಿಸಿರುವುದು ಪತ್ತೆಯಾಗಿದೆ.

ತಲಶ್ಶೇರಿ ರೆಸ್ಟೋರೆಂಟ್‌ಗೆ ರೂ.20,000 ದಂಡ ವಿಧಿಸಲಾಗಿದೆ. ತ್ಯಾಜ್ಯ ವಿಂಗಡಣೆಯಲ್ಲಿ ಲೋಪ, ನೊಣಗಳ ಕಾಟ, ಅಸ್ವಚ್ಛ ಪರಿಸರ ಹಾಗೂ ಏಕಬಳಕೆ ಪ್ಲಾಸ್ಟಿಕ್‌ ಬಳಕೆ ಕಂಡುಬಂದಿದೆ.

ಚಿಕ್ಕಪೇಟೆ ದೊನ್ನೆ ಬಿರಿಯಾನಿಗೆ ರೂ.5,000 ದಂಡ ವಿಧಿಸಲಾಗಿದ್ದು, ಇಲ್ಲಿಯೂ ಇದೇ ರೀತಿಯ ನಿಯಮ ಉಲ್ಲಂಘನೆಗಳು ಪತ್ತೆಯಾಗಿವೆ.

ನಂದನಾ ಪ್ಯಾಲೇಸ್‌ಗೆ ರೂ.15,000 ದಂಡ ವಿಧಿಸಲಾಗಿದ್ದು, ತ್ಯಾಜ್ಯ ವಿಂಗಡಣೆಯಲ್ಲಿ ಲೋಪ, ಏಕಬಳಕೆ ಪ್ಲಾಸ್ಟಿಕ್‌ ಬಳಕೆ ಮತ್ತು ಅಸ್ವಚ್ಛ ಪರಿಸ್ಥಿತಿಗಳು ಕಂಡುಬಂದಿವೆ. ಸ್ವಾತಿ ಹೋಟೆಲ್‌ಗೆ ಅಸ್ವಚ್ಛ ಪರಿಸ್ಥಿತಿಯ ಹಿನ್ನೆಲೆಯಲ್ಲಿ ನೋಟಿಸ್‌ ಜಾರಿ ಮಾಡಲಾಗಿದೆ.

ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ (ಎಫ್‌ಡಿಎ) ಹೊರಡಿಸಿರುವ ಪ್ರಕಟಣೆಯ ಪ್ರಕಾರ, ಆಗಸ್ಟ್‌ 7ರಂದು ನಡೆದ ಆಹಾರ ಸುರಕ್ಷತಾ ಜಾರಿ ಕಾರ್ಯಾಚರಣೆ ವೇಳೆ ರಾಡಿಸನ್‌ ಬ್ಲೂ ಅಟ್ರಿಯಾ ಹೋಟೆಲ್‌ನಿಂದ 105 ಕೆ.ಜಿ. ಅವಧಿ ಮೀರಿದ ಆಹಾರ ಪದಾರ್ಥಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಉತ್ತರಾಖಂಡ: ಚಮೋಲಿಯಲ್ಲಿ ನಿರ್ಮಾಣ ಹಂತದ ಸುರಂಗ ಕುಸಿತ; 7 ಕಾರ್ಮಿಕರು ಸಾವು, 14 ಜನರಿಗೆ ಗಾಯ, 22 ಮಂದಿ ರಕ್ಷಣೆ-Video

Iran ಮುಗಿಸಲು ಅಮೆರಿಕ ಮಾಸ್ಟರ್ ಪ್ಲ್ಯಾನ್: ಜಾಗತಿಕ ಇತಿಹಾಸದಲ್ಲೇ ಹಿಂದೆಂದೂ ಕಾಣದ ಭೀಕರ 'ಆರ್ಥಿಕ ಯುದ್ಧ' ಘೋಷಣೆ!

ಸ್ವಾತಂತ್ರ್ಯೋತ್ಸವಕ್ಕೆ ಸಿಲಿಕಾನ್ ಸಿಟಿ ಸಜ್ಜು: ವಿಧಾನಸೌಧದ ಮುಂದೆ ‘ಫ್ರೀಡಂ ಹಬ್ಬ’ಕ್ಕೆ ಭರದ ಸಿದ್ಧತೆ, 18 ಸಾವಿರಕ್ಕೂ ಹೆಚ್ಚು ಮಂದಿ ನೋಂದಣಿ..!

ದೇಶ ವಿಭಜನೆಯ ಸಂತ್ರಸ್ತರನ್ನು ಸ್ಮರಿಸಿದ ಪ್ರಧಾನಿ ಮೋದಿ; ಸಾಮರಸ್ಯ, ಸಹೋದರತ್ವಕ್ಕೆ ಕರೆ

ಪರಿಷತ್ ಸಭಾಪತಿ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಕೌಂಟರ್; ನಾಮಪತ್ರ ಸಲ್ಲಿಸಿದ BJP ಅಭ್ಯರ್ಥಿ; ಸ್ಪೀಕರ್ ಚುನಾವಣೆ ಬಹಿಷ್ಕಾರ