ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ  
ರಾಜ್ಯ

80ನೇ ಸ್ವಾತಂತ್ರ‍್ಯ ದಿನಾಚರಣೆ – ಬೆಂಗಳೂರಿನ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ CM ಡಿ ಕೆ ಶಿವಕುಮಾರ್ ಧ್ವಜಾರೋಹಣ-Video

ಮುಖ್ಯಮಂತ್ರಿಗಳಾಗಿ ಡಿಕೆ ಶಿವಕುಮಾರ್‌ ಮೊದಲ ಬಾರಿಗೆ ಸಾರ್ವಜನಿಕ ಕಾರ್ಯಕ್ರಮದಲ್ಲಿ ನೆರವೇರಿಸಿದ ಧ್ವಜಾರೋಹಣ ಇದಾಗಿದೆ.

ಬೆಂಗಳೂರು: ಇಂದು ಶನಿವಾರ, 2026ನೇ ಇಸವಿ ಆಗಸ್ಟ್ 15 ದೇಶದೆಲ್ಲೆಡೆ 80ನೇ ಸ್ವಾತಂತ್ರ‍್ಯ ದಿನಾಚರಣೆಯ ಸಂಭ್ರಮ. ಇದರ ಅಂಗವಾಗಿ ಬೆಂಗಳೂರಿನ ಮಾಣೆಕ್ ಷಾ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರು ಧ್ವಜಾರೋಹಣ ನೆರವೇರಿಸಿದರು.

ಮುಖ್ಯಮಂತ್ರಿಗಳಾಗಿ ಡಿಕೆ ಶಿವಕುಮಾರ್‌ ಮೊದಲ ಬಾರಿಗೆ ಸಾರ್ವಜನಿಕ ಕಾರ್ಯಕ್ರಮದಲ್ಲಿ ನೆರವೇರಿಸಿದ ಧ್ವಜಾರೋಹಣ ಇದಾಗಿದೆ. ಸಿಎಂ ಧ್ವಜಾರೋಹಣ ನೆರವೇರಿಸುತ್ತಿದ್ದಂತೆ ವಂದೇ ಮಾತರಂ ಗೀತೆ ಹಾಗೂ ಪೊಲೀಸ್ ಬ್ಯಾಂಡ್ ನಿಂದ ರಾಷ್ಟ್ರಗೀತೆ ಪ್ರಸ್ತುತಿ ಪಡಿಸಲಾಯಿತು.ಬೆಳಗ್ಗೆ 9 ಗಂಟೆಗೆ ಧ್ವಜಾರೋಹಣ ನೆರವೇರಿಸಿದ ಬಳಿಕ ಸಿಎಂ ಡಿಕೆ ಶಿವಕುಮಾರ್ ತೆರೆದ ಜೀಪಿನಲ್ಲಿ ಮಾಣಿಕ್ ಶಾ ಪರೇಡ್ ಮೈದಾನದಲ್ಲಿ ಸಾಗಿ ಪೊಲೀಸ್ ಗೌರವ ವಂದನೆ ಸ್ವೀಕರಿಸಿದರು.‌

ಇದಕ್ಕೂ ಮುನ್ನ ಬೆಳಗ್ಗೆ ತಮ್ಮ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಮುಖ್ಯಮಂತ್ರಿಗಳು ಅದ್ದೂರಿಯಾಗಿ ಮತ್ತು ಭಕ್ತಿಪೂರ್ವಕವಾಗಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಿದರು. ದೇಶದೆಲ್ಲೆಡೆ ಸ್ವಾತಂತ್ರ್ಯ ಸಂಭ್ರಮ ಮನೆ ಮಾಡಿದ್ದ ಈ ದಿನದಂದು, ಡಿಸಿಎಂ ಅವರು ತಮ್ಮ ನಿವಾಸದಲ್ಲಿ ರಾಷ್ಟ್ರಧ್ವಜವನ್ನು ಹಾರಿಸುವ ಮೂಲಕ ದೇಶಕ್ಕೆ ಗೌರವ ಸಲ್ಲಿಸಿದರು. ಈ ಮಹತ್ವದ ಸಂದರ್ಭದಲ್ಲಿ, ಅವರ ಪತ್ನಿ ಶ್ರೀಮತಿ ಉಷಾ ಶಿವಕುಮಾರ್ ಅವರು ಅವರ ಜೊತೆಯಲ್ಲಿದ್ದು, ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ನಡೆದ ಈ ಸಮಾರಂಭದಲ್ಲಿ, ಸಿಎಂ ಡಿ.ಕೆ. ಶಿವಕುಮಾರ್ ಅವರು ಮಹಾತ್ಮ ಗಾಂಧಿ ಮತ್ತು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಈ ಮಹಾನ್ ನಾಯಕರಿಗೆ ಗೌರವ ನಮನ ಸಲ್ಲಿಸಿದರು. ಅವರ ತ್ಯಾಗ ಮತ್ತು ದೇಶಕ್ಕಾಗಿ ನೀಡಿದ ಕೊಡುಗೆಗಳನ್ನು ಸ್ಮರಿಸಲಾಯಿತು. ಧ್ವಜಾರೋಹಣದ ನಂತರ, ದೇಶಭಕ್ತಿ ಗೀತೆಯಾದ ವಂದೇ ಮಾತರಂ ಅನ್ನು ಭಕ್ತಿಯಿಂದ ಪಠಿಸಲಾಯಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

PM Modi's I-Day speech: 'ನಮ್ಮ ಕನಸು, ಸಂಕಲ್ಪಗಳು ದೊಡ್ಡದಾಗಿರಬೇಕು; 2047ರ ವೇಳೆಗೆ ದೇಶವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರ ಮಾಡಿಯೇ ತೀರುತ್ತೇವೆ: ಪ್ರಧಾನಿ ಮೋದಿ-Video

80th Independence Day|ಯುವಜನತೆ ಸಾಮರ್ಥ್ಯವನ್ನು ರಾಷ್ಟ್ರ ನಿರ್ಮಾಣಕ್ಕೆ ಬಳಸಿಕೊಳ್ಳಲಾಗುವುದು: ಪ್ರಧಾನಿ ಮೋದಿ-Video

ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗೆ ಪರೀಕ್ಷಾ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ- ಸ್ವಾತಂತ್ರ್ಯ ದಿನದ ಹಿನ್ನೆಲೆ ದೇಶವನ್ನುದ್ದೇಶಿಸಿ ರಾಷ್ಟ್ರಪತಿ ಮುರ್ಮು ಮಾತು

ಬೆಂಗಳೂರು: ಟೆಕ್ಕಿ ಪತ್ನಿ ಹತ್ಯೆಗೈದು ತಾನೂ ನೇಣಿಗೆ ಶರಣಾದ ಇಂಜಿನಿಯರ್; ತಾಯಿಗೆ ಕಳಿಸಿದ್ದ ವಾಯ್ಸ್ ಮೆಸೇಜ್‌ನಲ್ಲಿ ಸ್ಫೋಟಕ ಕಾರಣ ಬಹಿರಂಗ!

ರಾಜ್ಯ ಸಾರಿಗೆ ನೌಕರರಿಗೆ ವರಮಹಾಲಕ್ಷ್ಮಿ ಹಬ್ಬದ ಗಿಫ್ಟ್: ವೇತನ ಹಿಂಬಾಕಿ ಬಿಡುಗಡೆ