ಡಿ.ಕೆ ಶಿವಕುಮಾರ್ 
ರಾಜ್ಯ

ಕಾಮಗಾರಿ ವೀಕ್ಷಣೆಗೆ ಬಂದ ಕೆಂಗಲ್ ‌ಹನುಮಂತಯ್ಯ ಮೇಲೆ ಖೈದಿಗಳು ಚಪ್ಪಲಿ ಎಸೆದಿದ್ದರು; ವಿಧಾನಸೌಧ ಕಟ್ಟಿಸಿದವರು ಅದರಲ್ಲಿ ಕೂರಲಿಲ್ಲ: ಸಿಎಂ ಡಿಕೆಶಿ

ವಿಧಾನಸೌಧ ಕಟ್ಟಿಸಿದ ಕೆಂಗಲ್ ಹನುಮಂತಯ್ಯ ಅವರಿಗೇ ಇಲ್ಲಿ ಕುಳಿತುಕೊಳ್ಳಲು ಅವಕಾಶ ಸಿಗಲಿಲ್ಲ. ಕೆಂಪೇಗೌಡರು ಬೆಂಗಳೂರು ಕಟ್ಟಿದರು, ಹನುಮಂತಯ್ಯನವರು ವಿಧಾನಸೌಧ ಕಟ್ಟಿದರು, ನೀವು ಅವರಂತೆಯ ಸಾಕ್ಷಿ ಗುಡ್ಡೆ ಬಿಟ್ಟು ಹೋಗಬೇಕು ಎಂದು ಎಸ್ ಎಂ ಕೃಷ್ಣ ಅವರಲ್ಲಿ ಚರ್ಚೆ ನಡೆಸಿದೆ.

ಬೆಂಗಳೂರು: ಕೆಂಗಲ್ ‌ಹನುಮಂತಯ್ಯ ಅವರು ವಿಧಾನಸೌಧ ಕಟ್ಟಿಸಿದರು. ಆಗ ಇದನ್ನು ಖೈದಿಗಳು ಕಟ್ಟಿದರು. ಒಂದು ದಿನ ಕಟ್ಟಡ ಕಾಮಗಾರಿ ವೀಕ್ಷಣೆಗೆ ಬಂದ ಕೆಂಗಲ್ ‌ಹನುಮಂತಯ್ಯ ಅವರ ಮೇಲೆ ಖೈದಿಗಳು ಸಿಟ್ಟಿನಿಂದ ಚಪ್ಪಲಿ ಎಸೆದಿದ್ದರು. ವಿಧಾನಸೌಧ ಕಟ್ಟಿದ ಕೆಂಗಲ್ ಹನುಮಂತಯ್ಯ ಅವರಿಗೇ ಈ ಇಲ್ಲಿ ಕುಳಿತುಕೊಳ್ಳಲು ಅವಕಾಶ ಸಿಗಲಿಲ್ಲ" ಎಂದರು.

ವಿಧಾನ ಪರಿಷತ್ ನಲ್ಲಿ ಮಾತನಾಡಿದ ಅವರು , ಅವಕಾಶ ಎಲ್ಲರಿಗೂ ಸಿಗುವುದಿಲ್ಲ. ಸಿಕ್ಕಾಗ ಬಳಸಿಕೊಳ್ಳಬೇಕು. ಕೆಂಗಲ್ ‌ಹನುಮಂತಯ್ಯ ಅವರು ವಿಧಾನಸೌಧ ಕಟ್ಟಿಸಿದರು. ಆಗ ಇದನ್ನು ಖೈದಿಗಳು ಕಟ್ಟಿದರು. ಒಂದು ದಿನ ಕಟ್ಟಡ ಕಾಮಗಾರಿ ವೀಕ್ಷಣೆಗೆ ಬಂದ ಕೆಂಗಲ್ ‌ಹನುಮಂತಯ್ಯ ಅವರ ಮೇಲೆ ಖೈದಿಗಳು ಸಿಟ್ಟಿನಿಂದ ಚಪ್ಪಲಿ ಎಸೆದಿದ್ದು ಇತಿಹಾಸ.

ಇಷ್ಟೆಲ್ಲ ಆಗಿ, ವಿಧಾನಸೌಧ ಕಟ್ಟಿಸಿದ ಕೆಂಗಲ್ ಹನುಮಂತಯ್ಯ ಅವರಿಗೇ ಇಲ್ಲಿ ಕುಳಿತುಕೊಳ್ಳಲು ಅವಕಾಶ ಸಿಗಲಿಲ್ಲ. ಕೆಂಪೇಗೌಡರು ಬೆಂಗಳೂರು ಕಟ್ಟಿದರು, ಹನುಮಂತಯ್ಯನವರು ವಿಧಾನಸೌಧ ಕಟ್ಟಿದರು, ನೀವು ಅವರಂತೆಯ ಸಾಕ್ಷಿ ಗುಡ್ಡೆ ಬಿಟ್ಟು ಹೋಗಬೇಕು ಎಂದು ಎಸ್ ಎಂ ಕೃಷ್ಣ ಅವರಲ್ಲಿ ಚರ್ಚೆ ನಡೆಸಿದೆ.

ಅದರ ಫಲವೇ ಈ ವಿಕಾಸಸೌಧ. ವಿಕಾಸಸೌಧದ ಉದ್ಘಾಟನೆ ವೇಳೆ ಮುಖ್ಯಮಂತ್ರಿ ಅವರಿಗೆ ಕುರ್ಚಿ ಮೀಸಲಿಡಲಾಗಿತ್ತು. ಆ ಕುರ್ಚಿ ಮೇಲೆ ಲೋಕೋಪಯೋಗಿ ಸಚಿವರಾಗಿದ್ದ ಧರಂಸಿಂಗ್ ಅವರನ್ನು ಕೂರಿಸಿದರು. ಆಗ ನನಗೆ ಭವಿಷ್ಯ ಕಣ್ಣ ಮುಂದೆ ಬಂದಿತು. ನಂತರ ಧರ್ಮಸಿಂಗ್ ಅವರೇ ಮುಖ್ಯಮಂತ್ರಿಯಾದರು ಎಂದು ಇತಿಹಾಸ ನೆನಪಿಸಿಕೊಂಡರು.

"8 ಸಲ ವಿಧಾನಸಭೆಗೆ ಆಯ್ಕೆಯಾಗಿದ್ದೇನೆ. ಬಂಗಾರಪ್ಪ, ಎಸ್ ಎಂ ಕೃಷ್ಣ, ಸಿದ್ದರಾಮಯ್ಯ ಅವರುಗಳ ಜೊತೆ ಕೆಲಸ ಮಾಡಿದ್ದೇನೆ. ಆದರೆ, ಜೆ.ಎಚ್ ಪಟೇಲ್ ಅವರಷ್ಟು ಅತ್ಯಂತ ಹೃದಯ ವೈಶಾಲ್ಯತೆಯಿದ್ದ ನಾಯಕರನ್ನು ಇಂದಿಗೂ ನೋಡಿಲ್ಲ. ಬೊಮ್ಮಾಯಿ ಅವರ ಆಡಳಿತ ಹಾಗೂ ಅವರನ್ನು ಅಧಿಕಾರದ ಕುರ್ಚಿಯಿಂದ ಇಳಿಸಿದ್ದನ್ನು ಕಣ್ಣಾರೆ ನೋಡಿದ್ದೇನೆ.

ಬಂಗಾರಪ್ಪ ಅವರ ಕಾಲದಲ್ಲಿ ರೈತರ ಪಂಪ್ ಸೆಟ್ ಗಳಿಗೆ ಉಚಿತ ವಿದ್ಯುತ್ ನೀಡುವ ಯೋಜನೆ ಜಾರಿ ಬಂತು. ಈಗಲೂ ಅಂದು ಮುಂದುವರಿದಿದೆ. ಆಗ 1 ಸಾವಿರ ಕೋಟಿ ಮೀಸಲಿಡಲಾಗಿತ್ತು. ಈಗ ಅದು 20 ಸಾವಿರ ಕೋಟಿಯಾಗಿದೆ. ಬಂಗಾರಪ್ಪ ಅವರು ಇಂದು ಬದುಕಿಲ್ಲ. ಅವರು ಜಾರಿ ಮಾಡಿದ ಯೋಜನೆ ಜೀವಂತವಾಗಿದೆ.

ವೀರಪ್ಪ ಮೊಯ್ಲಿ ಅವರು ಸಿಇಟಿ ಪ್ರಾರಂಭ ಮಾಡಿದ ಶಿಕ್ಷಣ ವ್ಯವಸ್ಥೆಯಲ್ಲಿ ಬದಲಾವಣೆ ತಂದರು. ಇಂದು ಕರ್ನಾಟಕ ಈ ದೇಶಕ್ಕೆ ಎಂಜಿನಿಯರ್, ಡಾಕ್ಟರ್ ಗಳನ್ನು ನೀಡಿದ ರಾಜ್ಯವಾಗಿದೆ’ ಎಂದು ಬಣ್ಣಿಸಿದರು.

ಇತಿಹಾಸಗಳು ಬೇಕಾದಷ್ಟು ಸಂದರ್ಭಗಳನ್ನು ಸೃಷ್ಟಿಸುತ್ತವೆ. ವೀರೇಂದ್ರ ಪಾಟೀಲರ ಆಡಳಿತ, ದೇವರಾಜ ಅರಸು ಅವರು ಹೊಸ ನಾಯಕರನ್ನು ಹುಟ್ಟು ಹಾಕಿದರು. ಯುವಕರಿಗೆ ಪ್ರೋತ್ಸಾಹ ನೀಡಿದರು. ಆ ರೀತಿಯ ಅವಕಾಶ ಸೃಷ್ಟಿ ಮಾಡಿದ ನಾಯಕರನ್ನು ನಾನು ನೋಡಿಲ್ಲ. ಗುಂಡೂರಾವ್ ಅವರ ಆಡಳಿತ ದಿಟ್ಟ ನಿರ್ಧಾರಗಳು ಮಾದರಿ. ರಾಮಕೃಷ್ಣ ಹೆಗಡೆ ಅವರದ್ದು ಪರಿಶುದ್ದ ಆಡಳಿತಗಾರರು. ಬೊಮ್ಮಾಯಿ ಅವರ ಆಡಳಿತ ಹಾಗೂ ಅವರನ್ನು ಅಧಿಕಾರದ ಕುರ್ಚಿಯಿಂದ ಇಳಿಸಿದ್ದನ್ನು ಕಣ್ಣಾರೆ ನೋಡಿದ್ದೇನೆ" ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

Bigg Boss Kannada: ಟಾಸ್ಕ್ ವೇಳೆ ಕುಸಿದು ಬಿದ್ದ ನಟಿ ಸಂಗೀತಾ ಭಟ್; ಆರೋಗ್ಯದಲ್ಲಿ ಏರುಪೇರು! ವಿಡಿಯೋ ವೈರಲ್

42 ಎಸೆತ, 102 ರನ್: ವಿರಾಟ್ ಕೊಹ್ಲಿಯ ಸಾರ್ವಕಾಲಿಕ ದಾಖಲೆಯೇ ಉಡೀಸ್‌ ಮಾಡಿದ ಶ್ರೇಯಸ್ ಅಯ್ಯರ್‌!

ಹಾಸನದ ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ