ಬೆಂಗಳೂರು: ವಿಧಾನ ಸೌಧದ ಮುಂಭಾಗದಲ್ಲಿ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ 'ಫ್ರೀಡಂ ಹಬ್ಬ' ನಡೆಯುತ್ತಿದೆ.
ಈ ಹಿನ್ನೆಲೆಯಲ್ಲಿ ಜನದಟ್ಟಣೆ ನಿಯಂತ್ರಿಸಲು ಹಾಗೂ ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ವಿಧಾನಸೌಧ ಸೇರಿದಂತೆ ಮೂರು ಮೆಟ್ರೋ ನಿಲ್ದಾಣಗಳಲ್ಲಿ ರೈಲುಗಳು ನಿಲುಗಡೆಯಾಗುವುದಿಲ್ಲ ಎಂದು ಬಿಎಂಆರ್ ಸಿಎಲ್ ಮಾಹಿತಿ ನೀಡಿದೆ.
ಕಬ್ಬನ್ ಪಾರ್ಕ್, ಸರ್.ಎಂ. ವಿಶ್ವೇಶ್ವರಯ್ಯ ಮತ್ತು ವಿಧಾನಸೌಧ ಮೆಟ್ರೋ ನಿಲ್ದಾಣಗಳಲ್ಲಿ ರೈಲುಗಳು ನಿಲುಗಡೆಯಾಗುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಎಂ.ಜಿ. ರಸ್ತೆ ಮತ್ತು ನಾಡಪ್ರಭು ಕೆಂಪೇಗೌಡ ನಿಲ್ದಾಣಗಳ ನಡುವೆ ಮುಂದಿನ ಸೂಚನೆಯವರೆಗೂ ರೈಲುಗಳು ಈ ಎರಡು ನಿಲ್ದಾಣಗಳಲ್ಲಿ ಮಾತ್ರ ನಿಲುಗಡೆಯಾಗಲಿವೆ. ಪ್ರಯಾಣಿಕರು ಸಹಕರಿಸಿ, ತಮ್ಮ ಪ್ರಯಾಣವನ್ನು ಅದಕ್ಕೆ ಅನುಗುಣವಾಗಿ ಯೋಜಿಸುವಂತೆ ಕೋರಲಾಗಿದೆ.