ಸಿಎಂ ಡಿ ಕೆ ಶಿವಕುಮಾರ್  
ರಾಜ್ಯ

ಹನೂರು ಶೂಟೌಟ್ ಪ್ರಕರಣ: ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆ; ಸಿಎಂ ಡಿ ಕೆ ಶಿವಕುಮಾರ್

ನಿಖರವಾಗಿ ಏನಾಯಿತು ಮತ್ತು ಗುಂಡು ಹಾರಿಸುವುದು ಉದ್ದೇಶಪೂರ್ವಕವಾಗಿದೆಯೇ ಅಥವಾ ಆತ್ಮರಕ್ಷಣೆಗಾಗಿ ನಡೆಸಲಾಗಿದೆಯೇ ಎಂದು ಪತ್ತೆ ಹಚ್ಚಲು ಮ್ಯಾಜಿಸ್ಟ್ರೇಟ್ ತನಿಖೆ ನಡೆಸಬೇಕೆಂದು ಮುಖ್ಯಮಂತ್ರಿ ನಿರ್ದೇಶಿಸಿದ್ದಾರೆ.

ಬೆಂಗಳೂರು: ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ ನೀಡಲಾಗಿದ್ದು, ತನಿಖೆ ಬಳಿಕ ಸಂಪೂರ್ಣ ಮಾಹಿತಿ ನೀಡಲಾಗುವುದು" ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಮಾಹಿತಿ ನೀಡಿದರು.

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಬೆಳಗ್ಗೆ 5 ಗಂಟೆಗೆ ಮಾಹಿತಿ ಬಂದಿದೆ. ತನಿಖೆ ಬಳಿಕ ವಾಸ್ತವಾಂಶ ತಿಳಿಯುತ್ತದೆ. ಅರಣ್ಯ ಪ್ರದೇಶದಲ್ಲಿ ಶೂಟೌಟ್ ನಡೆದಿದ್ದು, ಅನೇಕ ಸಾಕ್ಷಿಗಳು ವಸ್ತುಗಳು, ಬಂದೂಕು ವಶಪಡಿಸಿಕೊಳ್ಳಲಾಗಿದೆ. ಮಾಧ್ಯಮಗಳು ಕೆಲವು ವಿಚಾರ ಪ್ರಸಾರ ಮಾಡುತ್ತಿವೆ. ಕೆಲವರನ್ನು ಬಂಧಿಸಲಾಗಿದ್ದು, ಶವ ಪರೀಕ್ಷೆಗೆ ನಡೆಸಲಾಗುತ್ತಿದೆ" ಎಂದು ತಿಳಿಸಿದರು.

ಕಾವೇರಿ ವನ್ಯಜೀವಿ ಅಭಯಾರಣ್ಯದ ಅಡಿಯಲ್ಲಿ ಬರುವ ಮೀಸಲು ಅರಣ್ಯ ಪ್ರದೇಶದಲ್ಲಿ ಬೆಳಿಗ್ಗೆ 5 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಅರಣ್ಯ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ, ಬೇಟೆಯಾಡುವ ಬಗ್ಗೆ ಮಾಹಿತಿಯ ಮೇರೆಗೆ ಅರಣ್ಯ ಸಿಬ್ಬಂದಿ ನಾಲ್ವರು ವ್ಯಕ್ತಿಗಳ ಜೊತೆ ಚಕಮಕಿ ನಡೆಸಿದ್ದಾರೆ.

ನಿಖರವಾಗಿ ಏನಾಯಿತು ಮತ್ತು ಗುಂಡು ಹಾರಿಸುವುದು ಉದ್ದೇಶಪೂರ್ವಕವಾಗಿದೆಯೇ ಅಥವಾ ಆತ್ಮರಕ್ಷಣೆಗಾಗಿ ನಡೆಸಲಾಗಿದೆಯೇ ಎಂದು ಪತ್ತೆ ಹಚ್ಚಲು ಮ್ಯಾಜಿಸ್ಟ್ರೇಟ್ ತನಿಖೆ ನಡೆಸಬೇಕೆಂದು ಮುಖ್ಯಮಂತ್ರಿ ನಿರ್ದೇಶಿಸಿದ್ದಾರೆ" ಎಂದು ರೆಡ್ಡಿ ತಿಳಿಸಿದರು.

ನಾಲ್ವರು ವ್ಯಕ್ತಿಗಳು ಬೇಟೆಯಾಡುತ್ತಿರುವ ಬಗ್ಗೆ ಅರಣ್ಯ ಅಧಿಕಾರಿಗಳಿಗೆ ಮಾಹಿತಿ ಸಿಕ್ಕಿದ್ದು, ಅವರನ್ನು ಬಂಧಿಸಲು ಎರಡು ತಂಡಗಳನ್ನು ರಚಿಸಲಾಗಿದೆ ಎಂದು ಅವರು ಹೇಳಿದರು. ಬೇಟೆಗಾರರು ಜಿಂಕೆ ಮಾಂಸ ಮತ್ತು ಎರಡು ದೇಶೀಯ ನಿರ್ಮಿತ ಪಿಸ್ತೂಲ್‌ಗಳನ್ನು ಹೊಂದಿರುವ ಚೀಲಗಳನ್ನು ಹೊಂದಿದ್ದರು ಎಂದು ಆರೋಪಿಸಲಾಗಿದೆ.

ಬೇಟೆಗಾರರು ತಮ್ಮ ಮೇಲೆ ಗುಂಡು ಹಾರಿಸಿದರು ಮತ್ತು ಅವರು ಆತ್ಮರಕ್ಷಣೆಗಾಗಿ ಪ್ರತಿಯಾಗಿ ಗುಂಡು ಹಾರಿಸಿದರು ಎಂದು ಅರಣ್ಯ ಸಿಬ್ಬಂದಿ ತಿಳಿಸಿದ್ದಾರೆ. "ಅವರಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದರು, ಮತ್ತು ಒಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದರು.

ನಾಲ್ಕನೇ ವ್ಯಕ್ತಿ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದ್ದಾನೆ ಎಂದು ರಾಮಲಿಂಗಾ ರೆಡ್ಡಿ ವಿವರಿಸದರು, ತನಿಖೆ ಪೂರ್ಣಗೊಂಡ ನಂತರ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮುಂದಿನ ಆಗಸ್ಟ್ ವೇಳೆಗೆ ಮೇಕೆದಾಟು ಯೋಜನೆಗೆ ಶಂಕುಸ್ಥಾಪನೆ: ಸಚಿವ ಎನ್. ಚಲುವರಾಯಸ್ವಾಮಿ

ನಿಂತಿಲ್ಲ ಸೋನಿಯಾ ಗಾಂಧಿ ವಿರುದ್ಧ 'ವಂದೇ ಮಾತರಂ' ಟೀಕೆ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಂಚಿಕೊಂಡ ವಿಡಿಯೊದಲ್ಲಿ ಏನಿದೆ?-Video

NALSAR ವಿದ್ಯಾರ್ಥಿಗಳ ನಿಷೇಧ ಆದೇಶಕ್ಕೆ BCI ಅಧ್ಯಕ್ಷರ ಕ್ಷಮೆ!

ಪಾಕಿಸ್ತಾನ ಶೇ.4 ರಷ್ಟು ಹಿಂದೂಗಳನ್ನು ಸಹಿಸಿಕೊಳ್ತಿದೆ: ಪಾಕ್ ಅಧ್ಯಕ್ಷ 10% Zardari ಉದ್ಧಟತನದ ಹೇಳಿಕೆ

ಹಳದಿ ರೇಷ್ಮೆ ಧೋತಿ: ಅಯೋಧ್ಯೆ ರಾಮ ಮಂದಿರದ ಅರ್ಚಕರಿಗೆ ಹೊಸ ಡ್ರೆಸ್ ಕೋಡ್