ಮೃತರ ಕುಟುಂಬಕ್ಕೆ ಪರಿಹಾರ ಚೆಕ್ ವಿತರಿಸಿದ ಶಾಸಕ ಮಂಜುನಾಥ್ 
ರಾಜ್ಯ

ಹನೂರು ಶೂಟೌಟ್ ಪ್ರಕರಣ: ಮೃತರ ಕುಟುಂಬಸ್ಥರಿಗೆ 15 ಲಕ್ಷ ರೂ. ಪರಿಹಾರ ವಿತರಣೆ, ಪ್ರತಿಭಟನೆ ವಾಪಸ್

ತೊಮಿಯರ್ ಪಾಳ್ಯಕ್ಕೆ ಸೋಮವಾರ ಬೆಳಗ್ಗೆ ತೆರಳಿದ ತಹಶೀಲ್ದಾರ್ ಚೈತ್ರಾ ಅವರು ತಾಲೂಕು ಆಡಳಿತದ ವತಿಯಿಂದ ತಲಾ 5 ಲಕ್ಷ ರೂ. ಪರಿಹಾರವನ್ನು ವಿತರಿಸಿದರು.

ಚಾಮರಾಜನಗರ: ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮದ ಶಾಗ್ಯ ಸಮೀಪದ ಮರಿಯಮಂಗಲ ಬೀಟ್ ನಲ್ಲಿ ಸ್ವಾತಂತ್ರ್ಯ ದಿನದಂದು ನಡೆದ ಶೂಟೌಟ್ ಪ್ರಕರಣದಲ್ಲಿ ಮೃತಪಟ್ಟ ಮೂವರ ಕುಟುಂಬಗಳಿಗೆ ತಲಾ 15 ಲಕ್ಷ ರೂ. ಪರಿಹಾರ ವಿತರಿಸಲಾಗಿದೆ.

ತೊಮಿಯರ್ ಪಾಳ್ಯಕ್ಕೆ ಸೋಮವಾರ ಬೆಳಗ್ಗೆ ತೆರಳಿದ ತಹಶೀಲ್ದಾರ್ ಚೈತ್ರಾ ಅವರು ತಾಲೂಕು ಆಡಳಿತದ ವತಿಯಿಂದ ತಲಾ 5 ಲಕ್ಷ ರೂ. ಪರಿಹಾರವನ್ನು ವಿತರಿಸಿದರು. ಇದೇ ವೇಳೆ ಶಾಸಕ ಎಂ.ಆರ್. ಮಂಜುನಾಥ್ ವೈಯಕ್ತಿಕವಾಗಿ ತಲಾ 10 ಲಕ್ಷ ರೂ. ನೆರವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದರು.

ಭಾನುವಾರ ನೀಡಿದ್ದ ಭರವಸೆಯಂತೆ ಪರಿಹಾರ ವಿತರಿಸಿದ ಶಾಸಕ ಮಂಜುನಾಥ್, ಮೃತರ ಕುಟುಂಬಸ್ಥರನ್ನು ಭೇಟಿಯಾಗಿ ಸಾಂತ್ವನ ಹೇಳಿದರು. ಬಳಿಕ ಮೃತದೇಹಗಳ ಅಂತಿಮ ದರ್ಶನ ಪಡೆದರು.

ಹನೂರು ವನ್ಯಜೀವಿ ವಲಯದ ಶಾಗ್ಯ ವ್ಯಾಪ್ಯಿಯ ಹೊಳೆಮುರದಟ್ಟಿ ಅರಣ್ಯ ಪ್ರದೇಶದಲ್ಲಿ ಶುಕ್ರವಾರ ರಾತ್ರಿ ಅರಣ್ಯ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ ಬೇಟೆಗೆ ಬಂದಿದ್ದರೆನ್ನಲಾದ ಮೂವರು ಬಲಿಯಾಗಿದ್ದರು.

ಪ್ರತಿಭಟನೆ ವಾಪಸ್

ಶಾಸಕ ಮಂಜುನಾಥ್ ಅವರ ಪರಿಹಾರ ಭರವಸೆ ಬಳಿಕ ಪ್ರತಿಭಟನಾ ನಿರತ ಗ್ರಾಮಸ್ಥರು ತಮ್ಮ ಪ್ರತಿಭಟನೆ ವಾಪಸ್ ಪಡೆದರು ಎನ್ನಲಾಗಿದೆ.

ಪ್ರಕರಣದಲ್ಲಿ ಮ್ಯಾಜಿಸ್ಟ್ರೇಟ್‌ ತನಿಖೆ ನಡೆಯುತ್ತಿದ್ದು ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು. ಹೆಚ್ಚಿನ ಪರಿಹಾರ ಹಾಗೂ ಸರ್ಕಾರಿ ಉದ್ಯೋಗ ನೀಡುವ ಸಂಬಂಧ ಮುಖ್ಯಮಂತ್ರಿ ಜೊತೆ ಚರ್ಚಿಸುತ್ತೇನೆ ಎಂದು ಮಂಜುನಾಥ್ ಭರವಸೆ ನೀಡಿದರು.‌

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸುಪ್ರೀಂ ಕೋರ್ಟ್‌ನಲ್ಲೂ ಕರ್ನಾಟಕಕ್ಕೆ ಹಿನ್ನಡೆ: ಕಾವೇರಿ ವಿಚಾರಣೆ ಒಂದು ವಾರ ಮುಂದೂಡಿಕೆ, CWMA ಆದೇಶ ಪಾಲಿಸಲು ಸೂಚನೆ..!

BJPಗೆ ಶೆಹಜಾದ್ ಪೂನಾವಾಲಾ ಶಾಕ್‌: ಪಕ್ಷದ ಹುದ್ದೆ, ಸದಸ್ಯತ್ವಕ್ಕೆ ಮತ್ತೊಮ್ಮೆ ರಾಜೀನಾಮೆ; ‘ಯಾರನ್ನೂ ದೂಷಿಸುತ್ತಿಲ್ಲ, ವೈಯಕ್ತಿಕ ಕಾರಣಗಳೇ ನಿರ್ಧಾರಕ್ಕೆ ಕಾರಣ’ ಎಂದ ಫೈರ್‌ಬ್ರಾಂಡ್..!

ನಿನ್ನಿಂದಲೇ ಇಡೀ ಇಲಾಖೆ ಮರ್ಯಾದೆ ಹೋಯಿತು: ಪ್ರಜ್ವಲ್ ರೇವಣ್ಣಗೆ ಅಲೋಕ್ ಕುಮಾರ್ 'ಸ್ಪೆಷಲ್ ಕ್ಲಾಸ್'

ಬೆಂಗಳೂರು: ಮನೆಯಲ್ಲೇ ತಂದೆ-4 ವರ್ಷದ ಮಗ ನಿಗೂಢ ಸಾವು; ಬೆಡ್​ರೂಮ್​​ನಲ್ಲಿ ಮಲಗಿದ್ದ ಪತ್ನಿಯನ್ನು ವಶಕ್ಕೆ ಪಡೆದ ಪೊಲೀಸರು!

‘ಸಮಸ್ಯೆ ಬಗೆಹರಿಸಿ, ಇಲ್ಲದಿದ್ದರೆ ಮತ್ತೆ ಪ್ರತಿಭಟನೆ!’: ಕೇಂದ್ರಕ್ಕೆ ಬಾಬಾ ರಾಮದೇವ್ ಖಡಕ್ ಎಚ್ಚರಿಕೆ